ಅಮ್ಮ_ಹೆಂಡತಿ_ಮಕ್ಕಳು
"ನಿವೃತ್ತಿಯಾದ ಮೊದಲ ದಿನ ನಾನು ಮೊದಲು ಮಾಡುವ ಕೆಲಸವೆಂದರೆ ನನ್ನ ಅಮ್ಮನನ್ನು ವೃಧ್ಧಾಶ್ರಮಕ್ಕೆ ಸೇರಿಸುವುದು..." ನನ್ನ ಮನೆಯಲ್ಲಿ ನಾನು ಈ ಮಾತುಗಳನ್ನು ಹೇಳುತ್ತ ಹೇಳುತ್ತ ಒಂದು ವರುಷವಾಯಿತು..... ಇನ್ನು ಈ ಕೆಲಸವನ್ನು ಮುಂದು ಹಾಕುವಂತಿಲ್ಲ... ಯಾಕೆಂದರೆ ನಿನ್ನೆ ನನಗೆ ನಿವೃತ್ತಿ ಯಾಯಿತು... ನನ್ನ ಹೆಂಡತಿ ಮಕ್ಕಳೆಲ್ಲ ಈ ದಿನಕ್ಕಾಗಿಯೇ ಕಾದು ಕುಳಿತವರಂತೆ ಇದ್ದಾರೆ.. ನನ್ನ ಅಮ್ಮ ಆರೊಗ್ಯವಾಗಿಯೇ ಇದ್ದವಳು,ಸುಮಾರು ಎರಡೂವರೆ ವರುಷಗಳಿಂದ ಅನಾರೋಗ್ಯಕ್ಕೆ ಬಿದ್ದಳು... ಇತ್ತೀಚೆಗೆ ಒಂದು ವರುಷದಿಂದ ಮಲ ಮೂತ್ರ ವಿಸರ್ಜನೆಯ ಮೇಲೆ ಕೂಡಾ ಅವಳಿಗೆ ನಿಯಂತ್ರಣವಿಲ್ಲ... ಬೆಳಗ್ಗೆ ರಾತ್ರಿ ಅವಳನ್ನು ನಾನು ನೋಡಿ ಕೊಳ್ಳಬಲ್ಲೆ... ಆದರೆ ನಾನು ಕೆಲಸಕ್ಕೆ ಹೋದಾಗ ಅವಳನ್ನು ನೋಡಿ ಕೊಳ್ಳಬೇಕಾದವಳು ಇವಳೇ ... ಅಂದರೆ ನನ್ನ ಹೆಂಡತಿಯೇ... ನನಗಾದರೂ ಅವಳು ತಾಯಿ..ನನ್ನವಳಿಗೆ ಅವಳು ತಾಯಿಯಾ..? ನನ್ನ ಸಿಡುಕಿನ ನೋಟಕ್ಕೆ ಬೆದರಿ ಇವಳು ಅತ್ತೆಯ ಚಾಕರಿ ಮಾಡುತ್ತಿದ್ದಾಳೆ. ಆದರೆ ಇವಳ ಮುಖದಲ್ಲೊಂದು ತಿರಸ್ಕಾರದ ನೋಟ ಚಿರ ಸ್ಥಾಯಿಯಾಗಿ ನಿಂತ ಹಾಗೆ ನನಗೆ ಕಾಣಿಸುತ್ತಿದೆ.. ಇವಳಿಗಾದರೂ ಈ ಭಾವ ಸಹಜವೇ...ಹೊರಗಿನಿಂದ ಬಂದವಳು.... ಆದರೆ ನನ್ನ ಮಕ್ಕಳಿಗೂ ಅನಾರೋಗ್ಯದ ಅಜ್ಜಿ ಬೇಡವೆನ್ನಿಸುವುದು ನನಗೆ ದಿಗಿಲು ಹುಟ್ಟಿಸುವುದು..... ಅಭಿಲಾಷ್ ಆದರೂ ಹುಡುಗ...ಮುಲಾಜಿಲ್ಲದೆ ಹೇಳಿದ್ದ"ಅಮ್ಮಾ ನನ್ನ ಫ್ರೆಂಡ್ಸ್ ಇರುವಾ...