Posts

Showing posts from April, 2011

ಜಿ. ಪಿ. ರಾಜರತ್ನಂ

Image
'ಜಿ. ಪಿ. ರಾಜರತ್ನಂ' ರವರು ಹೆಸರಾಂತ ಗುಂಡ್ಲು ಪಂಡಿತ ವಂಶ ದಲ್ಲಿ ಡಿಸೆಂಬರ್ ೦೫, ೧೯೦೪ರಂದು ಜನಿಸಿದರು. ತಾಯಿಯ ಪ್ರೀತಿ ಇಲ್ಲದೆ ಬೆಳೆದ ರಾಜರತ್ನಂಗೆ, ತಂದೆಯೇ ಎಲ್ಲವೂ ಆಗಿದ್ದರು. ಅಜ್ಜಿಯ ಅಕ್ಕರೆಯಲ್ಲೂ ರಾಜರತ್ನಂ ಬೆಳೆದರು. ತಂದೆ ಬಡ ಮೇಸ್ಟ್ರು. ಸ್ವಾತಂತ್ರ್ಯ ಪೂರ್ವದಲ್ಲೇ (೧೯೩೧ರಲ್ಲಿ) ರಾಜರತ್ನಂ ಎಂ. ಎ (ಕನ್ನಡ) ದಲ್ಲಿ ಮುಗಿಸಿ, ಶಿಶು ವಿಹಾರ ಹಾಗೂ ತಂದೆಯ ಶಾಲೆಯಲ್ಲಿ ಆರಂಭಿಕ ಮೇಸ್ಟ್ರು ಆದರು. ಇದರ ಅನುಭವದ ಫಲವೇ ಮಕ್ಕಳ ಕುರಿತು ಬರೆದ `ತುತ್ತೂರಿ' ಶಿಶು ಗೀತೆ ಸಂಕಲನ'. ಕ್ರಮೇಣ ಆ ಕೆಲಸ ತೃಪ್ತವಾಗದೆ ಹೈದರಾಬಾದಿಗೂ ಕೆಲಸ ಹುಡುಕಿ ಹೋಗಿದ್ದುಂಟು. ಅಲ್ಲಿಂದ ನಿರಾಶರಾಗಿ ಬೆಂಗಳೂರಿಗೆ ಬಂದು ಜನಗಣತಿ ಕಛೇರಿಯಲ್ಲಿ ಕೆಲಸಕ್ಕೆ ಪ್ರಯತ್ನಿಸಿದರು. ಆದರೆ ಅಲ್ಲಿದ್ದ ಮಾಸ್ತಿ ವೆಂಕಟೇಶ ಅಯ್ಯಂಗಾರ್ಯರು ರಾಜರತ್ನಂರವರಿಗೆ 'ಸಾಹಿತ್ಯ ಸೇವೆ' ಮುಂದುವರೆಸಲು ಉಪದೇಶಿಸಿದರು. ಅದರ ಫಲವೇ ಮುಂದೆ 'ರಾಜರತ್ನಂ' ಅವರಿಂದ 'ಉತ್ತಮ ಸಾಹಿತ್ಯ ನಿರ್ಮಾಣ'ಕ್ಕೆ ದಾರಿಯಾಯಿತು. ಬೌದ್ಧ ಸಾಹಿತ್ಯ ಇಂಥ ಉಪಯುಕ್ತ ಸಾಹಿತ್ಯದಲ್ಲೊಂದು 'ಮಿಂಚು'. ರಾಜರತ್ನಂ ಅವರಿಗೆ ವೈವಾಹಿಕ ಜೀವನದಲ್ಲಿ ಸಾಕಷ್ಟು ನೋವುಂಟಾಯಿತು. ಪತ್ನಿ ಲಲಿತಮ್ಮ ಕಾಯಿಲೆ ಬಿದ್ದವರು ಉತ್ತಮವಾಗಲೇ ಇಲ್ಲ. ವಿಧಿವಶರಾದರು. ಅವರ ನೆನಪು ಹಸಿರಾಗಿದ್ದಾಗಲೇ ಸೀತಮ್ಮ ಅವರ 'ಬಾಳನಂದಾದೀಪ'ವಾಗಿ ಬಂದರು. ಬದುಕು ಸ್ಥಿರವಾಯ...

ಅನಂತ ಪ್ರಣಯ - ದ ರಾ ಬೇಂದ್ರ

ಉತ್ತರದ್ರುವದಿಂ ದಕ್ಷಿಣದ್ರುವಕೂ ಚುಂಬಕ ಗಾಳಿಯು ಬೀಸುತಿದೆ ಸೂರ್ಯನ ಬಿಂಬಕೆ ಚಂದ್ರನ ಬಿಂಬವು ರಂಜಿಸಿ ನಗೆಯಲಿ ಮೀಸುತಿದೆ. ಭೂರಂಗಕೆ ಅಭಿಸಾರಕೆ ಕರೆಯುತ ತಿಂಗಳು ತಿಂಗಳು ನವೆಯುತಿದೆ ತುಂಬುತ ತುಳುಕುತ ತೀರುತ ತನ್ನೊಳು ತಾನೇ ಸವಿಯನು ಸವಿಯುತಿದೆ. ಭುವನ ಕುಸುಮಿಸಿ ಪುಲಕಿಸಿ ಮರಳಿಸಿ ಕೋಟಿ ಕೋಟಿ ಸಲ ಹೊಸೆಯಿಸಿತು ಮಿತ್ರನ ಮೈತ್ರಿಯ ಒಸಗೆ ಮಸಗದಿದೆ ಮರುಕದ ದ್ಃಅರೆಯ ಮಸೆಯಿಸಿತು. ಅಕ್ಷಿನಮೀಲನ ಮಾಡದೆ ನಕ್ಷ- ತ್ರದ ಗಣ ಗಗನದಿ ಹಾರದಿದೆ ಬಿದಿಗೆಯ ಬಿಂಬಾಧರದಲಿ ಇಂದಿಗು ಮಿಲನದ ಚಿಹ್ನವು ತೋರದಿದೆ.

ಅನಂತ ಪೈ,

Image
ಕಾರ್ಕಳದ ಸಾಲ್ಮರದ ಬಳಿಯ ಮನೆಯಲ್ಲಿ ಕೆಲಕಾಲ ವಾಸವಾಗಿದ್ದ ಹಾಗೂ ಕಾರ್ಕಳಕ್ಕೆ ಬಂದಾಗ ವಾಸ ಮಾಡುತ್ತಿದ್ದ ಅಂಕಲ್ ಪೈ ಮನೆ.  (ಚಿತ್ರ ಕೃಪೆ ಪ್ರಜಾವಾಣಿ ) ನಿವೇಶನ ಹಕ್ಕು ಪತ್ರಕ್ಕಾಗಿ ಪ್ರತಿಭಟನೆ ಆನ್‌ಲೈನ್ ಪಡಿತರ ಚೀಟಿ ಸಿಬಲ್ ರಾಜೀನಾಮೆ ಕೊಡಲಿ: ಅಣ್ಣಾ ಹಜಾರೆ ವೈದ್ಯರ ಕೊರತೆ ನೀಗಿಸಲು ಹೊಸ ನಿಯಮ ಜಾರಿ ನಾಮಪತ್ರ ಸಲ್ಲಿಕೆಗೆ ನೂಕುನುಗ್ಗಲು ರೋಷನ್‌ನಗರಕ್ಕೆ ಉಪಮೇಯರ್ ಭೇಟಿ ‘ಮುಂಬೈ ದಾಳಿ ತಡೆಯಾಗದಿರಲಿ’ ಕನ್ನಡ ತೇರಿಗೆ ಬೆಳಗಾವಿ ಬಾಗಿನ ಮಕ್ಕಳ ಪ್ರೀತಿಯ ‘ಅಂಕಲ್ ಪೈ ಭಾರತೀಯ ಸಾಂಸ್ಕೃತಿಕ ಚೌಕಟ್ಟಿನಲ್ಲಿ ಮಕ್ಕಳಿಗಾಗಿ ಚಿತ್ರಕಥೆಗಳನ್ನ ರೂಪಿಸಿದ್ದ ಅಪರೂಪದ ಮೆದುಳು ಅನಂತ ಪೈ ೧೯೬೦ರ ದಶಕದಲ್ಲಿ ಮಕ್ಕಳಿಗಾಗಿನ ಸಚಿತ್ರ ಕಥಾಗುಚ್ಚಗಳೆಂದರೆ ಕೇವಲ ಪಾಶ್ಚಾತ್ಯ ಮೂಲದ ಕಾಮಿಕ್ಸ್ಗಳು ಹಾಗು ಅವುಗಳ ಎರವಲು ಸರಕು ಮಾತ್ರವೆ ಎನ್ನುವಂತಾಗಿದ್ದ ಭೀಕರ ದಿನಗಳಲ್ಲಿ.ಮುಂದಿನ ತಲೆಮಾರುಗಳ ಓದುವ ದಿಕ್ಕನ್ನೆ ನಿರ್ದೇಶಿಸಿ-ಉತ್ತಮ ಓದನ್ನ ರೂಪಿಸಿಕೊಟ್ಟ "ಅಮರ ಚಿತ್ರಕಥೆಗಳು" ಹಾಗು "ಪಂಚತಂತ್ರದ ಕಥೆಗಳು" ಅನಂತ ಪೈಗಳಿಂದ ಭಾರತೀಯ ಚಿಣ್ಣರಿಗೆ ಸಂದಿದ್ದ ಒಂದು ಅದ್ಭುತ ಕೊಡುಗೆ.ಇವರು ಮೂಲತಃ ನಮ್ಮ ಕರಾವಳಿಯ ಕಾರ್ಕಳದವರು ಎನ್ನೋದು ನಮಗೆಲ್ಲರಿಗೂ ಹೆಮ್ಮೆಯ ಸಂಗತಿ.ಅವರನ್ನ ನೆನೆಯದಿದ್ದರೆ ...

ಅಂತರಂಗದ ಮೃದಂಗ

ಅಂತರಂಗದ ಮೃದಂಗ ಅಂತು ತೋಮ್-ತನಾನ ಚಿತ್ತ ತಾಳ ಬಾರಿಸುತಲಿತ್ತು ಝಣ್-ಝಣಣಣಾಣ ನೆನಹು ತಂತಿ ಮೀಟುತಿತ್ತು ತಮ್-ತನನತಾನ ಹಲವು ಜನುಮದಿಂದ ಬಂದ ಯಾವುದೋನೋ ಧ್ಯಾನ ಏಕ ನಾದದಂದನೊಂದು ತಾನದ ವಿತಾನ ತನಗೆ ತಾನೇ ಸೋಲುತಿಹುದು ನೂಲುತಿಹುದು ಗಾನ ಕಲ್ಪದಾದಿಯಲ್ಲೇ ನನ್ನ ನಿನ್ನ ವಿರಹವಾಗಿ ಎಲ್ಲೋ ಏನೋ ನಿನ್ನ ಹುಡುಕಿ ಕಾಂಬ ಕಣ್ಣೇ ಹೋಗಿ ಮರೆವೆಗೊಂಡು ಬಿದ್ದೆ ನಾನು ನೆಲದ ಮಣ್ಣು ತಾಗಿ ಕತ್ತಲಲ್ಲೇ ಬೆಳಕು ಮಿಂಚಿ ಪಡೆದಿತೇಳು ಬಣ್ಣ ಮೂಕ ಮೌನ ತೂಕ ಮೀರಿ ದನಿಯು ಹುಟ್ಟಿತಣ್ಣ ಕಣ್ಣ ಮಣ್ಣ ಕೂಡಲಲ್ಲಿ ಹಾಡು ಕಟ್ಟಿತಣ್ಣ

ಆದಿಪರ್ವ: ೦೧. ಪೀಠಿಕಾ ಸಂಧಿ

ಶ್ರೀವನಿತೆಯರಸನೆ ವಿಮಲ ರಾ ಜೀವ ಪೀಠನ ಪಿತನೆ ಜಗಕತಿ ಪಾವನನೆ ಸನಕಾದಿ ಸಜ್ಜನನಿಕರ ದಾತಾರ ರಾವಾಣಾಸುರ ಮಥನ ಶ್ರವಣ ಸು ಧಾ ವಿನೂತನ ಕಥನ ಕಾರಣ ಕಾವುದಾನತ ಜನವ ಗದುಗಿನ ವೀರನಾರಯಣ ೧ ಶರಣಸಂಗವ್ಯಸನ ಭುಜಗಾ ಭರಣನಮರ ಕಿರೀಟ ಮಂಡಿತ ಚರಣ ಚಾರುಚರಿತ್ರ ನಿರುಪಮ ಭಾಳಶಿಖಿನೇತ್ರ ಕರಣನಿರ್ಮಲ ಭಜಕರಘ ಸಂ ಹರಣ ದಂತಿ ಚಮೂರು ಚರ್ಮಾಂ ಬರನೆ ಸಲಹುಗೆ ಭಕುತ ಜನರನು ಪಾರ್ವತೀರಮಣ ೨ ವರಮಣಿಗಳಿಂದೆಸೆವ ಮೌಳಿಯ ಸರಸಿಜಾರಿಯ ಕಿರಣದೋಳಿಯ ವಿರಚಿಸಿದ ಸಿಂಧೂರಭಾಳದಿ ಕುಣಿವ ಕುಂತಳದ ಕರಿ ನಿಭಾಕೃತಿಯೆನಿಪ ವದನದ ಕರದ ಪಾಶದ ಮೋದಕದ ವಿ ಸ್ತರದ ಗಣಪತಿ ಮಾಡೆಮಗೆ ನಿರ್ವಿಘ್ನದಾಯಕವ ೩ ಗಜಮುಖನೆ ಮೆರೆವೇಕದಂತನೆ ನಿಜಗುಣಾನ್ವಿತ ಪರಶುಧಾರನೆ ರಜತಗಿರಿಗೊಡೆಯನ ಕುಮಾರನೆ ವಿದ್ಯೆವಾರಿಧಿಯೆ ಅಜನು ಹರಿ ರುದ್ರಾದಿಗಳು ನೆರೆ ಭಜಿಸುತಿಹರನವರತ ನಿನ್ನನು ತ್ರಿಜಗವಂದಿತ ಗಣಪ ಮಾಳ್ಪುದು ಮತಿಗೆ ಮಂಗಳವ ೪ ವಾರಿಜಾಸನೆ ಸಕಲಶಾಸ್ತ್ರ ವಿ ಚಾರದುದ್ಭವೆ ವಚನರಚನೋ ದ್ಧಾರೆ ಶ್ರುತಿ ಪೌರಾಣದಾಗಮ ಸಿದ್ದಿದಾಯಕಿಯೆ ಶೌರಿ ಸುರಪತಿ ಸಕಲ ಮುನಿಜನ ಸೂರಿಗಳಿಗನುಪಮದ ಯುಕುತಿಯೆ ಶಾರದೆಯೆ ನರ್ತಿಸುಗೆ ನಲಿನೊಲಿದೆನ್ನ ಜಿಹ್ವೆಯಲಿ ೫ ಆದಿ ನಾರಾಯಣಿ ಪರಾಯಣಿ ನಾದಮಯೆ ಗಜಲಕ್ಷ್ಮಿ ಸತ್ವಗು ಣಾಧಿದೇವತೆ ಅಮರ ವಂದಿತ ಪಾದಪಂಕರುಹೆ ವೇದಮಾತೆಯೆ ವಿಶ್ವತೋಮುಖೆ ಯೈದು ಭೂತಾಧಾರಿಯೆನಿಪೀ ದ್ವಾದಶಾತ್ಮ ಜ್ಯೋತಿರೂಪಿಯೆ ನಾದೆ ಶಾರದೆಯೆ ೬ ವೀರನಾರಾಯಣನೆ ಕವಿ...

ಬಸವಣ್ಣನ ವಚನಗಳ ಭಾವಾರ್ಥ

ನೆಲನೊಂದೇ ಹೊಲಗೇರಿ ಶಿವಾಲಯಕ್ಕೆ ಜಲವೊಂದೇ ಶೌಚಾ ಚಮನಕ್ಕೆ ! ಕುಲವೊಂದೇ ತನ್ನ ತಾನರಿದವಂಗೆ ! ಫಲವೊಂದೇ ಫಡದರ್ಶನ ಮುಕ್ತಿಗೆ ನಬಿಲವೊಂದೇ ಕೂಡಲ ಸಂಗಮದೇವ ನಿಮ್ಮನರಿದವಂಗೆ - ನಾವು ಆಚರಿಸುವ ಆಚರಣೆಗಳಿಂದ ಮಾತ್ರ ಉತ್ತಮ, ಅಧಮರೆನಿಸಿಕೊಳ್ಳುತ್ತೇವೆ ಜಾತಿಯಿಂದಲ್ಲ. ನೆಲ ಒಂದೇ ಅಲ್ಲಿ ಶಿವಾಲಯಕಟ್ಟಿದರೆ ಪುಣ್ಯಕ್ಷೇತ್ರ, ದುರಾಚಾರಿಗಳ ತಾಣವಾದರೆ ಅದು ಹೊಲಗೇರಿ. ನೀರು ಒಂದೇ ಅದು ಪೂಜೆಗೆ ಬಳಸಿದರೆ ತೀರ್ಥ, ಶೌಚಕ್ಕೆ ಬಳಸಿದರೆ ಕೊಳಕು ನೀರು. ಅಂತೆಯೇ ಕಾರ್ಯದಿಂದ ಮಾನವ ಕುಲವೊಂದೆ ಉತ್ತಮ. ಜ್ಞಾನದಿಂದ ಉತ್ತಮ, ಅಜ್ಞಾನದಿಂದ ಅಧಮ ಆಯಾಜಾತಿಗಳ ಗುರಿ ಒಂದೇ ಅದುವೇ ಮುಕ್ತಿ ಮೇಲು ಕೀಳೆಂದು ಜಾತಿಯನ್ನು ವಿಂಗಡಿಸುವದನ್ನು ಈ ವಚನದಲ್ಲಿ ಖಂಡಿಸಿದ್ದಾರೆ. ------------------- ಹಬ್ಬಕ್ಕೆ ತಂದ ಹರಕೆಯ ಕುರಿ ತೋರಣಕ್ಕೆ ತಂದ ತಳಿದ ಮೇಯಿತ್ತು! ಕೊಂದಹರೆಂಬುದನರಿಯದೆ ಬೆಂದೊಡಲ ಹೊರೆವುತ್ತಲಿದೆ? ಅದಂದೆ ಹುಟ್ಟಿತ್ತು ಅದಂದೇ ಹೊಂದಿತ್ತು!! ಕೊಂದವರುಳಿವರೆ ಕೂಡಲ ಸಂಗಮದೇವ -ಬಲಿಕೊಡಲೆಂದು ತಂದ ಕುರಿಯು ತನಗೆ ಮುಂದೆ ಸಾವಿದೆ ಎಂದರಿಯದೆ ಬಾಗಿಲಿಗೆ ಕಟ್ಟಿದ ತೋರಣದ ಹಸಿರೆಲೆಗಳನ್ನು ತಿನ್ನುತ್ತಿರುವುದು. ತನ್ನೆದುರಲ್ಲಿ ತನ್ನ ಕೊರಳನ್ನು ಕತ್ತರಿಸಲು ಕತ್ತಿಮಸೆಯುತ್ತಿರುವರು ಎಂಬ ಅರಿವು ಅದಕ್ಕಿಲ್ಲ. ಈ ಮಾನವನಾದರೂ ಬಲಿ ಕುರಿಯಂತೆ, ಸಾವು ಈಗಲೋ ಆಗಲೋ ಬರಲು ಸಿದ್ಧವಾಗಿದ್ದರೂ, ಸುಖಕ್ಕೆ ಬಲಿಗಳಂತಹ ಹೀನ ಕಾರ್ಯಗಳನ್ನೆಸಗುತ್ತಿರುವನು. ----------...

ಅಲ್ಲಮಪ್ರಭುವಿನ ವಚನಗಳು

೧. ಶಿಲೆಯೊಳಗಣ ಪಾವಕನಂತೆ ಉದಕದೊಳಗಣ ಪ್ರತಿಬಿಂಬದಂತೆ ಬೀಜದೊಳಗಣ ವೃಕ್ಷದಂತೆ ಶಬ್ದದೊಳಗಣ ನಿಶ್ಯಬ್ದದಂತೆ ಗುಹೇಶ್ವರ, ನಿಮ್ಮ ಶರಣಸಂಬಂಧ. ೨. ಜಲದೊಳಗಿದ್ದ ಕಿಚ್ಚು ಜಲವ ಸುಡದೆ, ಜಲವು ತಾನಾಗಿದ್ದಿತು ನೋಡಾ! ನೆಲೆಯನಱದು ನೋಡಿಹೆನೆಂದಡೆ ಅದು ಜಲವು ತಾನಲ್ಲ ! ಕುಲದೊಳಗಿದ್ದು, ಕುಲವ ಬೆರಸದೆ, ನೆಲೆಗೆಟ್ಟುನಿಂದುದನಾರುಬಲ್ಲರು ! ಹೊಱಗೊಳಗೆ ತಾನಾಗಿದ್ದು ಮತ್ತೆ ತಲೆದೋಱದಿಪ್ಪುದು, ಗುಹೇಶ್ವರ, ನಿಮ್ಮ ನಿಲುವು ನೋಡಾ ! ಪಿಂಡಜ್ಞಾನ ಸ್ಥಲ ೩. ಆದಿಯಾಧಾರವಿಲ್ಲದಂದು ಹಮ್ಮು ಬಿಮ್ಮುಗಳಿಲ್ಲದಂದು ಸುರಾಳನಿರಾಳವಿಲ್ಲದಂದು ಸಚರಾಚರವೆಲ್ಲ ರಚನೆಗೆ ಬಾರದಂದು ಗುಹೇಶ್ವರ, ನಿಮ್ಮ ಶರಣನುದಯಿಸಿದನಂದು ೪. ಅಯ್ಯ, ಜಲ-ಕೂರ್ಮ-ಗಜ-ಫಣಿಯ ಮೇಲೆ ಧರೆ ವಿಸ್ತರಿಸಿ ನಿಲ್ಲದಂದು, ಗಗನವಿಲ್ಲದಂದು, ಪವನನ ಸುಳುಹಿಲ್ಲದಂದು, ಅಗ್ನಿಗೆ ಕಳೆದೋಱದಂದು, ಯುಗ-ಜುಗಮಿಗಿಲೆನಿಸಿದ ಹದಿನಾಲ್ಕು ಭುವನ ನೆಲೆಗೊಳ್ಳದಂದು, ನಿಜವನಱಿದಿಹೆನೆಂಬ ತ್ರಿಜಗದಧಿಪತಿಗಳಿಲ್ಲದಂದು : ತೋಱುವ ಬೀಱುವ ಪರಿಭಾವದಲ್ಲಿ ಭರಿತ ಅಗಮ್ಯ ಗುಹೇಶ್ವರಲಿಂಗವು. ೫. ಎನ್ನ ನಾನಱಿಯದ ಮುನ್ನ ನೀನೇನಾಗಿದ್ದೆ ಹೇಳಾ ? ಮುನ್ನ ನೀ ಬಾಯಿ ಮುಚ್ಚಿಕೊಂಡಿದ್ದೆಯೆಂಬುದ ನಾ ನಿನ್ನ ಕಣ್ಣಿಂದ ಕಂಡೆನು ! ಎನ್ನ ನಾನಱಿದ ಬಳಿಕ ಇನ್ನು ನೀ ಬಾಯ್ದೆಱೆದು ಮಾತನಾಡಿದರೆ ಅದನೆನ್ನ ಕಣ್ಣಿಂದ ನೀ ಕಂಡು ನಾಚಿದೆ ನೋಡಾ ! ಎನ್ನ ಕಾಬ ನಿನಗೆ, ನಿನ್ನ ಕಾಬ ಎನಗೆ ಸಂಚದ ನೋಟ ಒಂದ...
Image
Image

ಅ.ನ.ಕೃ

Image

ಬಿ. ಜಿ. ಎಲ್. ಸ್ವಾಮಿ

Image
  ಬಿ . ಜಿ . ಎಲ್ . ಸ್ವಾಮಿ (ಬೆಂಗಳೂರು ಗುಂಡಪ್ಪ ಲಕ್ಷ್ಮೀನಾರಾಯಣ ಸ್ವಾಮಿ)

ಬಸವಣ್ಣನ ವಚನಗಳು 501 - 516

೫೦೧. ಭಿತ್ತಿಯಿಲ್ಲದ ಚಿತ್ತಾರದಂತೆ, ಭಕ್ತಿಯಲ್ಲದ ಪ್ರಮಥನಾಗಿ ಎಂದಿಪ್ಪೆನಯ್ಯ ಸತ್ಯವಿಲ್ಲದ ಶರಣನಾಗಿ ಎಂದಿಪ್ಪೆನಯ್ಯ! ಗೆರೆಯಿಲ್ಲದ ಕೋಲಲ್ಲಿ ಉದ್ದರೆಯನಿಕ್ಕಿದ ಭಂಡದ ಹರದನಂತಾದೆನಯ್ಯ! ಕೂಡಲಸಂಗಮದೇವ. ೫೦೨. ಹುಸಿಯಿಂದ ಜನಿಸಿದೆನಯ್ಯ ಮರ್ತ್ಯಲೋಕದೊಳಯಿಂಕೆ! ಹುಸಿಯಿಂದ ಲಿಂಗವ ಹೆಸರುಗೊಂಡು ಕರೆದೆನಯ್ಯ! ಅದು ಎನಗೆ ಭಾವವೂ ಅಲ್ಲದೆ ನಿರ್ಭಾವವೂ ಅಲ್ಲದೆ ನಿಂದಿತ್ತಯ್ಯ! ಅದರ ಅವಯವಂಗಳೆಲ್ಲವು ಜಂಗಮವಯ್ಯ! ಅದಕ್ಕೆ ಎನ್ನ ಉಳ್ಳ ಸಯದಾನವ ಮಾಡಿ ನೀಡಿದೆನಯ್ಯ, ಆ ಪ್ರಸಾದಕ್ಕೆ ಶರಣೆಂದೆನಯ್ಯ! ಅದು ಸಾರವೂ ಅಲ್ಲ, ನಿಸ್ಸಾರವೂ ಅಲ್ಲ! ಆ ಪ್ರಸಾದದಲ್ಲಿ ನಾನೇ ತದ್ಗತನಾದೆ ಕಾಣಾ ಕೂಡಲಸಂಗಮದೇವ. ೫೦೩. ಕುರುಹಿಲ್ಲ ಕುರುಹಿಲ್ಲ ಲಿಂಗವೆಂದೆಂಬರೆ, ತೆರಹಿಲ್ಲ ತೆರಹಿಲ್ಲ ಜಂಗಮವೆಂದೆಂಬರೆ- ಇದೇ ನೋಡಾ ಶಿವಾಚಾರ! ಇದೇ ನೋಡಾ ಶಿವದೊಡಕು! "ಆತ್ಮಾನಾಂ ಪ್ರಕೃತಿಸ್ವಭಾವ" ಎಂದುದಾಗಿ ಮುಟ್ಟಬಾರದ ಠಾವ ಮರೆಗೊಂಡಿಪ್ಪ ಮಮ ಕರ್ತೃ ಕೂಡಲಸಂಗಮದೇವ. ೫೦೪. ವೇದ ವೇದಿಸಲರಿಯದೆ, ಅಭೇದ್ಯ ಲಿಂಗವೆಂದು ನಡನಡುಗಿತ್ತು! ಶಾಸ್ತ್ರ ಸಾಧಿಸಲರಿಯದೆ, ಅಸಾಧ್ಯಲಿಂಗವೆಂದು ಸಾರುತ್ತೈದಾವೆ! ತರ್ಕ ತರ್ಕಿಸಲರಿಯದೆ, ಅತರ್ಕ್ಯಲಿಂಗವೆಂದು ಮನಂಗೊಳ್ಳವು! ಆಗಮ ಗಮನಿಸಲರಿಯದೆ, ಅಗಮ್ಯವೆಂದು ಹೋದುವು! ನರರು ಸುರರು ಅಂತುವ ಕಾಣರು! ನಮ್ಮ ಕೂಡಲಸಂಗಮದೇವನ ಪ್ರಮಾಣವ ಶರಣ ಬಲ್ಲ! ೫೦೫. ಅಂತರಂಗ ಬಹಿರಂಗ ಆತ್ಮಸಂಗ ಒಂದೇ ಅಯ್ಯ! ...

ಬಸವಣ್ಣನ ವಚನಗಳು - 401 - 500

೪೦೧. ಒಡೆಯರೊಡವೆಯ ಕೊಂಡರೆ ಕಳ್ಳಂಗಳಲಾಯಿತ್ತೆಂಬ ಗಾದೆಯೆನಗಿಲ್ಲಯ್ಯ. ಇಂದೆನ್ನ ವಧುವ, ನಾಳೆನ್ನ ಧನವ, ನಾಡಿದೆನ್ನ ತನುವ ಬೇಡರೇಕಯ್ಯ ? ಕೂಡಲಸಂಗಮದೇವ, ಆನು ಮಾಡಿದುದಲ್ಲದೆ ಬಯಸಿದ ಬಯಕೆ ಸಲುವುದೇ ಅಯ್ಯ ? ೪೦೨. ಸಮಚಿತ್ತವೆಂಬ ನೇಮದ ಹಲಗೆಯ ಹಿಡಿದು, ಶಿವಚಿತ್ತವೆಂಬ ಕೂರಲಗ ಕೊಂಡು ಶರಣಾರ್ಥಿಯೆಂಬ ಶ್ರವಗಲಿತಡೆ ಆಳುತನಕ್ಕೆ ದೆಸೆಯಪ್ಪೆ ನೋಡಾ! ಮಾರಂಕ-ಜಂಗಮ ಮನೆಗೆ ಬಂದಲ್ಲಿ ಇದಿರೆತ್ತಿ ನಡೆವುದು; ಕೂಡಲಸಂಗಮದೇವನನೊಲಿಸುವಡಿದು ಚಿಹ್ನ. ೪೦೩. ಅಟ್ಟಟ್ಟಿಕೆಯ ಮಾತನಾಡಲದೇಕೋ ? ಮುಟ್ಟಿ ಬಂದುದಕ್ಕಂಜಲದೇಕೋ ? ಕಾದಿದಲ್ಲದೆ ಮಾಣೆನು, ಓಡಿದರೆ ಭಂಗ ಹಿಂಗದಾಗಿ; ಕೂಡಲಸಂಗಮದೇವ ಎನ್ನ ಭಂಗ ನಿಮ್ಮದಾಗಿ! ೪೦೪. ನೀನಿರಿಸಿದ ಮನದಲ್ಲಿ ನಾನಂಜೆನಯ್ಯ. ಮನವು ಮಹಾಘನಕ್ಕೆ ಶರಣಾಗತಿವೊಕ್ಕುದಾಗಿ! ನೀನಿರಿಸಿದ ಧನದಲ್ಲಿ ನಾನಂಜೆನಯ್ಯ, ಧನವು ಸತಿಸುತಮಾತಾಪಿತರಿಗೆ ಹೋಗದಾಗಿ! ನೀನಿರಿಸಿದ ತನುವಿನಲ್ಲಿ ನಾನಂಜೆನಯ್ಯ, ಸರ್ವಾರ್ಪಿತದಲ್ಲಿ ತನು ನಿಯತಪ್ರಸಾದಭೋಗಿಯಾಗಿ! ಇದು ಕಾರಣ ವೀರಧೀರ ಸಮಗ್ರನಾಗಿ ಕೂಡಲಸಂಗಮದೇವಯ್ಯ ನಿಮಗಾನಂಜೆನು! ೪೦೫. ಬತ್ತೀಸಾಯುಧದಲ್ಲಿ ಅಭ್ಯಾಸವ ಮಾಡಿದರೇನು ? ಹಗೆಯ ಕೊಲುವಡೆ ಒಂದಲಗು ಸಾಲದೆ ? ಲಿಂಗವ ಗೆಲುವಡೆ "ಶರಣಸತಿ ಲಿಂಗಪತಿ" ಎಂಬಲಗು ಸಾಲದೆ ? ಎನಗೆ ನಿನಗೆ ಜಂಗಮಪ್ರಸಾದವೆಂಬಲಗು ಸಾಲದೆ ಕೂಡಲಸಂಗಮದೇವ ? ೪೦೬. ಕೊಲ್ಲೆನಯ್ಯ ಪ್ರಾಣಿಗಳ, ಮೆಲ್ಲೆನಯ್ಯ ಬಾಯಿಚ್ಚೆಗೆ...

ಆವು ಈವಿನ ನಾವು ನೀವಿಗೆ

ಆವು ಈವಿನ ನಾವು ನೀವಿಗೆ ಆನು ತಾನಾದ ತನನನ ನಾವು ನೀನಿನ ಈನೀನಾನಿಗೆ ಬೇನೆ ಏನೋ? ಜಾಣೆ ನಾ ಚಾರು ತಂತ್ರಿಯ ಚರಣ ಚರಣದ ಘನಘನಿತ ಚತುರಸ್ವನಾ ಹತವೊ ಹಿತವೊ ಆ ಅನಾಹತಾ ಮಿತಿ ಮಿತಿಗೆ ಇತಿ ನನನನಾ ಬೆನ್ನಿನಾನಿಕೆ ಜನನ ಜಾನಿಕೆ ಮನನವೇ ಸಹಿತಸ್ತನಾ. ಗೋವಿನ ಕೊಡುಗೆಯ ಹಡಗದ ಹುಡುಗಿ ಬೆಡಗಿಲೆ ಬಂದಳು ನಡುನಡುಗಿ; ಸಲಿಗೆಯ ಸುಲಿಗೆಯು ಬಯಕೆಯ ಒಲುಮೆ ಬಯಲಿನ ನೆಯ್ಗೆಯ ಸಿರಿಯುಡುಗಿ; ನಾಡಿಯ ನಡಿಗೆಯ ನಲುವಿನ ನಾಲಿಗೆ ನೆನೆದಿರೆ ಸೋಲುವ ಸೊಲ್ಲಿನಲಿ; ಮುಟ್ಟದ ಮಾಟದ ಹುಟ್ಟದ ಹುಟ್ಟಿಗೆ ಜೇನಿನ ಥಳಿಮಳಿ ಸನಿಹ ಹನಿ; ಬೆಚ್ಚಿದ ವೆಚ್ಚವು ಬಸುರಿನ ಮೊಳಕೆ ಬಚ್ಚಿದ್ದಾವುದೊ ನಾ ತಿಳಿಯೆ ಭೂತದ ಭಾವ ಉದ್ಬವ ಜಾವ ಮೊಲೆ ಊಡಿಸುವಳು ಪ್ರತಿಭೆ ನವ. ಚಿತ್ತೀಮಳಿ, ತತ್ತಿ ಹಾಕತ್ತಿತ್ತು ಸ್ವಾತಿಮುತ್ತೀನೊಳಗ ಸತ್ತಿಯೋ ಮಗನ ಅಂತ ಕೂಗಿದರು ಸಾವೀ ಮಗಳು, ಭಾವಿ ಮಗಳು ಕೂಡಿ ಈ ಜಗ ಅಪ್ಪಾ ಅಮ್ಮನ ಮಗ ಅಮ್ಮನೊಳಗ ಅಪ್ಪನ ಮೊಗ ಅಪ್ಪನ ಕತ್ತಿಗೆ ಅಮ್ಮನ ನೊಗ ನಾ ಅವರ ಕಂದ ಶ್ರೀ ಗುರುದತ್ತ ಅಂದ 'ನಾನು' 'ನೀನು' 'ಆನು' 'ತಾನು' ನಾಕು ನಾಕೇ ತಂತಿ. ಸೊಲ್ಲಿಸಿದರು ನಿಲ್ಲಿಸಿದರು ಓಂ ದಂತಿ! ಗಣನಾಯಕ ಮೈ ಮಾಯಕ ಸೈ ಸಾಯಕ ಮಾಡಿ ಗುರಿಯ ತುಂಬಿ ಕುರಿಯ ಕಣ್ಣು ಧಾತು ಮಾತು ಕೂಡಿ.

ಬಸವಣ್ಣನ ವಚನಗಳು 301 -400

೩೦೧. ಕಾಮ ಸಂಗವಳಿದು, ಅನುಭಾವ ಸಂಗದಲುಳಿದವರನಗಲಲಾರೆ, ಶಿವಂಗೆ ಮಿಗೆ ಒಲಿದವರನು ನಾನು ಅಗಲಲಾರೆ ಕಾಣಾ ಕೂಡಲಸಂಗಮದೇವ. ೩೦೨. ಭಕ್ತಿರತಿಯ ವಿಕಲತೆಯ ಯುಕುತಿಯನೇನ ಬೆಸಗೊಂಬಿರಯ್ಯ ? ಕಾಮಿಗುಂಟೇ ಲಜ್ಜೆ ನಾಚಿಕೆ ? ಕಾಮಿಗುಂಟೇ ಮಾನಾಪಮಾನವು ? ಕೂಡಲಸಂಗನ ಶರಣರಿಗೊಲಿದ ಮರುಳನನೇನ ಬೆಸಗೊಂಬಿರಯ್ಯ ? ೩೦೩. ಸಕ್ಕರೆಯ ಕೊಡನ ತುಂಬಿ ಹೊರಗ ಸವಿದರೆ ರುಚಿಯುಂಟೆ ? ತಕ್ಕೈಸಿ ಭುಜತುಂಬಿ, ಲಿಂಗಸ್ಪರ್ಶನವ ಮಾಡದೆ, ಅಕ್ಕಟಾ, ಸಂಸಾರ ವೃಥಾ ಹೋಯಿತ್ತಲ್ಲ! ಅದೇತರ ಭಕ್ತಿ ? ಅದೇತರ ಯುಕ್ತಿ ? ಕೂಡಿಕೊ! ಕೂಡಲಸಂಗಮದೇವ. ೩೦೪. ಪರಚಿಂತೆ ಎಮಗೇಕಯ್ಯ ? ನಮ್ಮ ಚಿಂತೆ ಎಮಗೆ ಸಾಲದೆ ? ಕೂಡಲಸಂಗಯ್ಯ ಒಲಿದಾನೋ ಒಲಿಯನೋ ಎಂಬ ಚಿಂತೆ ಹಾಸಲುಂಟು ಹೊದಿಯಲುಂಟು! ೩೦೫. ಲಜ್ಜೆಗೆಟ್ಟೆನು, ನಾಣುಗೆಟ್ಟೆನು, ಕುಲಗೆಟ್ಟೆನು, ಛಲಗೆಟ್ಟೆನು, ಸಂಗಾ, ನಿಮ್ಮ ಪೂಜಿಸಿ ಭವಗೆಟ್ಟೆನು ನಾನಯ್ಯ! ಕೂಡಲಸಂಗಮದೇವಯ್ಯ, ನಿಮ್ಮ ಮುಟ್ಟಿ ಹುಟ್ಟುಗೆಟ್ಟೆನು ನಾನಯ್ಯ! ೩೦೬. ಮಾಡುವ ಭಕ್ತನ ಕಾಯ ಬಾಳೆಯ ಕಂಬದಂತಿರಬೇಕು! ಮೆಲ್ಲಮೆಲ್ಲನೆ ಹೊರೆಯೆತ್ತಿ ನೋಡಿದರೆ ಒಳಗೆ ಕೆಚ್ಚಿಲ್ಲದಿರಬೇಕು! ಮೇಲಾದ ಫಲವ ನಮ್ಮವರು ಬೀಜ ಸಹಿತ ನುಂಗಿದರು. ಎನಗಿನ್ನಾವ ಭವವಿಲ್ಲ ಕಾಣಾ ಕೂಡಲಸಂಗಮದೇವ. ೩೦೭. ಏನು ಮಾಡುವೆನೆನ್ನ ಪುಣ್ಯದ ಫಲವು! ಶಾಂತಿಯ ಮಾಡಹೋದರೆ ಬೇತಾಳ ಮೂಡಿತ್ತು! ಕೂಡಲಸಂಗಮದೇವನ ಪೂಜಿಸಿಹೆನೆಂದರೆ ಭಕ್ತಿ ಎಂಬ ಮೃಗವೆನ್ನನಟ್ಟಿ ಬಂದು ನು...