Thursday, June 16, 2011

ಅಮ್ಮ, ನಿನ್ನ ಎದೆಯಾಳದಲ್ಲಿ

ಅಮ್ಮ, ನಿನ್ನ ಎದೆಯಾಳದಲ್ಲಿ
ಗಾಳಕ್ಕೆ ಸಿಕ್ಕ ಮೀನು
ಮಿಡುಕಾಡುತಿರುವೆ ನಾನು ....
ಕಡಿಯಲೋಲ್ಲೆ ನೀ ಕರುಳಬಳ್ಳಿ
ಒಲವೂಡುತಿರುವ ತಾಯೆ,
ಬಿಡದ ಬುವಿಯ ಮಾಯೆ ....

ನಿನ್ನ ರಕ್ಷೆಗೂಡಲ್ಲಿ ಬೆಚ್ಚಗೆ
ಆಡಗಲಿ ಎಷ್ಟು ದಿನ ?
ದೂಡು ಹೊರಗೆ ನನ್ನ ...
ಓಟ ಕಲಿವೆ, ಒಳನೋಟ ಕಲಿವೆ, ನಾ
ಕಲಿವೆ ಊರ್ಧ್ವ ಗಮನ,
ಓ ಆಗಾಧ ಗಗನ ...

ಮೇಲೆ ಹಾರಿ, ನಿನ್ನ ಸೆಳೆತ ಮೀರಿ,
ನಿರ್ಭಾರಸ್ಥಿತಿಗೆ ತಲುಪಿ
ಬ್ರಹ್ಮಾಂಡವನ್ನೇ ಬೆದಕಿ
ಇಂಧನ ತೀರಲು, ಬಂದೇ ಬರುವೆನು
ಮತ್ತೆ ನಿನ್ನ ತೊಡೆಗೆ
ಮೂರ್ತ ಪ್ರೇಮದೆಡೆಗೆ...

No comments:

Post a Comment

"RSS ಮತ್ತು DSS - ಒಂದು ತೌಲನಿಕ ಅಧ್ಯಯನ"- ಪ್ರವೀಣಕುಮಾರ M

RSS (ರಾಷ್ಟ್ರೀಯ ಸ್ವಯಂಸೇವಕ ಸಂಘ) ತನ್ನ 100 ನೇ ವರ್ಷದ ಸಂಭ್ರಮವನ್ನು ದೇಶದಾದ್ಯಂತ ಆಚರಿಸುತ್ತಿದೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮತ್ತು ಆ ಪಕ್ಷವನ್ನು  ಬೆಂಬಲಿಸುವ ...