ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ - kannada.info@gmail.com |.

Monday, April 23, 2012ಮನವೇ ಸರ್ಪ, ತನುವೇ ಹೇಳಿಗೆ!
ಹಾವಿನೊಡತಣ ಹುದುವಾಳಿಗೆ!
ಇನ್ನಾವಾಗ ಕೊಂದುಹುದೆಂದರಿಯೆ
ಇನ್ನಾವಾಗ ತಿಂದಹುದೆಂದರಿಯೆ.
ನಿಚ್ಚಕ್ಕೆ ನಿಮ್ಮ ಪೂಜಿಸಬಲ್ಲಡೆ
ಅದೇ ಗಾರುಡ ಕೂಡಲಸಂಗಮದೇವ.

---------

ನೆಲವೊಂದೇ ಹೊಲಗೇರಿ ಶಿವಾಲಯಕ್ಕೆ
ಜಲವೊಂದೇ ಶೌಚಾ ಚಮನಕ್ಕೆ !
ಕುಲವೊಂದೇ ತನ್ನ ತಾನರಿದವಂಗೆ !
ಫಲವೊಂದೇ ಫಡದರ್ಶನ ಮುಕ್ತಿಗೆ
ನಬಿಲವೊಂದೇ ಕೂಡಲ ಸಂಗಮದೇವ ನಿಮ್ಮನರಿದವಂಗೆ


No comments:

Post a Comment