ವಲಿ.... (ಭಾಗ-4)
ಮಹಮದನ ನೂತನ ಧರ್ಮದ ವಿರುದ್ಧ ನಡೆದ ಅನೇಕ ಆರಂಭಿಕ ದ್ವೇಷಪೂರಿತ ಹೋರಾಟಗಳು ಇತಿಹಾಸಕಾರರಿಂದ ದಾಖಲಿಸಲ್ಪಟ್ಟಿವೆ. ಅವುಗಳಲ್ಲಿ ಪ್ರಸಿದ್ಧಿ ಪಡೆದ ಕಥೆಯೊಂದು ಹೀಗಿದೆ.... 'ಮುಸಬ್ ಇಬ್ನ ಒಮೈರ್' ಎಂಬ ಪ್ರಸಿದ್ಧ ಖುರೈಷಿ ಬುಡಕಟ್ಟಿನ ಯುವ ವ್ಯಕ್ತಿಯೊಬ್ಬ ಅಲ್ ಅಕ್ರಮನ ಮನೆಯಲ್ಲಿ ನಡೆಯುತ್ತಿದ್ದ ಮಹಮದನ ಮತ ಭೋದನೆಯಿಂದ ಪ್ರಭಾವಿತನಾಗಿ ಅವನ ಧರ್ಮಕ್ಕೆ ಮತಾಂತರಗೊಂಡ. ಅವನ ಈ ಉದ್ಧಟ ನಡುವಳಿಕೆಯಿಂದ ಕುಪಿತಗೊಂಡ ಅವನ ಹತ್ತಿರದ ಸಂಬಂಧಿಕರು ಅವನ ವಿರುದ್ಧ ಬಹಿಷ್ಕಾರ ಹಾಕಿದರು, ಅದರಲ್ಲೂ ಈ ಬಗ್ಗೆ ವಿಪರೀತ ನೊಂದುಕೊಂಡ ಆತನ ತಾಯಿ ತನ್ನ ನಿಲುವಿಗೆ ವಿರುದ್ಧವಾಗಿ ಮಗ ಮತಾಂತರಗೊಂಡದ್ದರಿಂದ ಮಗ ಹಾಗೂ ಮಹಮದನ ಮೇಲೆ ಕೆರಳಿ ಕೆಂಡವಾದಳು. ಅವಳ ಈ ಕೋಪ ಮಗನನ್ನು ಗೃಹಬಂಧನದಲ್ಲಿರುವ ಮೂಲಕ ಪರ್ಯಾವಸನಗೊಂಡಿತು. ಆದರೆ ಆತ ಅದು ಹೇಗೊ ಅಲ್ಲಿಂದ ತಪ್ಪಿಸಿಕೊಂಡು ಹೋಗಿ ಅಬಿಸೀನಿಯಕ್ಕೆ ಓಡಿಹೋದ. ಅಲ್ಲಿಂದ ಕೆಲಕಾಲದ ಬಳಿಕ ಆತ ಮೆಕ್ಕಾಗೆ ಹಿಂದಿರುಗಿದಾಗ ಆತನ ಆರ್ಥಿಕ ಹಾಗೂ ಸಾಮಾಜಿಕ ಪರಿಸ್ಥಿತಿ ತೀರಾ ಶೋಚನೀಯವಾಗಿತ್ತು. ಆದರೆ ಮಗನ ಬಗ್ಗೆ ಕಠಿಣ ನಿಲುವು ತೆಳೆದಿದ್ದ ತಾಯಿ ಆತನನ್ನು ಹತ್ತಿರಕ್ಕೂ ಬಿಟ್ಟುಕೊಳ್ಳಲಿಲ್ಲ, ಹೀಗಾಗಿ ವಿಧಿಯಿಲ್ಲದೆ ಆತ ಕ್ಯಾರವಾನ್ ಒಂದರ ಹಿಂದೆ ಅಲೆಮಾರಿಯಾಗಿ ಎತ್ತಲೊ ಹೋಗಬೇಕಾಯಿತು. ಇದಾಗಿ ಎರಡುವರ್ಷಗಳ ನಂತರ ಆತ ಮರಳಿ ಮೆಕ್ಕಾಕ್ಕೆ ಬಂದ. ಆಗಲೂ ಅವನ ಪರಿಸ್ಥಿತಿ ಹೆಚ್ಚು ಸುಧಾರಿಸಿರಲಿಲ್ಲ. ಈ ಸಾರಿ...