ಸಂತನಾಗುವ ಪರಿ
ಶೇಖ್ ರ‌್ಯೂಗಾರಿ ಬಹುದೊಡ್ಡ ಸೂಫೀ ಸಂತ. ಅವನ ತಿಳುವಳಿಕೆ, ಚಿಂತನೆಗಳನ್ನು ವಿವರಿಸುವ ರೀತಿ ಅನನ್ಯವಾಗಿದ್ದವು. ಆಗಿನ ಕಾಲದ ಎಲ್ಲ ಸಂತರೂ ಅವನನ್ನು ತುಂಬ ಗೌರವಿಸುತ್ತಿದ್ದರು. ಆತ ಸಾಮಾನ್ಯವಾಗಿ ಹೆಚ್ಚು ಮಾತನಾಡುವವನಲ್ಲ. ಆದರೆ ಮಾತನಾಡಿದ ಪ್ರತಿಯೊಂದು ವಾಕ್ಯವೂ ಅರ್ಥಗರ್ಭಿತವಾಗಿರುತ್ತಿತ್ತು. ಅವನ ಶಿಷ್ಯರಾಗಬೇಕೆಂದು ಅನೇಕ ಜನ ತರುಣರು ಅಪೇಕ್ಷೆಪಡುತ್ತಿದ್ದರು. ಶಿಷ್ಯರನ್ನು ಆಯ್ದುಕೊಳ್ಳುವುದರಲ್ಲಿ ಶೇಖ್ ತುಂಬ ಕಾಳಜಿ ವಹಿಸುತ್ತಿದ್ದ. ಅವನು ಅವರನ್ನು ಬಹಳ ಪರೀಕ್ಷೆ ಮಾಡಿ ತನ್ನಲ್ಲಿ, ತನ್ನ ಚಿಂತನೆಗಳಲ್ಲಿ ಪೂರ್ಣ ನಂಬಿಕೆ ಇದ್ದವರನ್ನು ಮಾತ್ರ ಆರಿಸಿಕೊಳ್ಳುತ್ತಿದ್ದ. ಮನಸ್ಸು ತಯಾರಾಗಿರದಿದ್ದರೆ ಆ ತರುಣರ ವಯಸ್ಸೂ ಹಾಳು ಮತ್ತು ಸಂತತ್ವ ಹೃದಯಕ್ಕಿಳಿಯಲಾರದು. ಆದ್ದರಿಂದ ಬಂದವರಿಗೆ ಪರೀಕ್ಷೆಗಳನ್ನು ಕೊಟ್ಟು ಅವರ ನಿಷ್ಠೆಯನ್ನು, ಧೃಡಮನಸ್ಸನ್ನು ಪರೀಕ್ಷಿಸುತ್ತಿದ್ದ. ಹೀಗಿರುವಾಗ ಒಬ್ಬ ತರುಣ ಶೇಖ್ ಬಳಿಗೆ ಬಂದು ತನ್ನನ್ನು ಶಿಷ್ಯನನ್ನಾಗಿ ತೆಗೆದುಕೊಳ್ಳಬೇಕೆಂದು ಕೇಳಿಕೊಂಡ. ತರುಣ ಬುದ್ಧಿವಂತ. ಸಾಕಷ್ಟು ತಯಾರಿ ಮಾಡಿಕೊಂಡೇ ಬಂದಿದ್ದಾನೆ ಎಂದು ತಿಳಿಯುತ್ತಿತ್ತು. ಯಾವ ಪರೀಕ್ಷೆ ಮಾಡಿದರೂ ಆತ ಅದರಲ್ಲಿ ತೇರ್ಗಡೆಯಾದ. ಆದರೂ ಶೇಖ್ ತರುಣನನ್ನು ಒಪ್ಪಿಕೊಳ್ಳದೇ ಒಂದು ವಾರದ ನಂತರ ತನ್ನನ್ನು ಬಂದು ಕಾಣಬೇಕೆಂದೂ ಆಗ ತೀರ್ಮಾನ ಮಾಡುವುದಾಗಿಯೂ ಹೇಳಿ ಕಳುಹಿಸಿದ. ಶೇಖ್‌ನ ಹಿರಿಯ ಶಿಷ್ಯರಿಗೆ ಇದು ತುಂಬ ಆಶ್ಚರ್ಯವೆನಿ...