ಬಾಹ್ಯ ರೂಪ - ಗುರುರಾಜ ಕರ್ಜಗಿ,

1930-31ರಲ್ಲಿ ತಮಿಳುನಾಡಿನ ತಿರುಚ್ಚಿಯಲ್ಲಿ ಕನ್ನಡ ಸಂಘದವರು ಒಂದು ಕಾರ್ಯಕ್ರಮ ಆಯೋಜಿಸಿದ್ದರು. ಅದಕ್ಕೆ ಮುಖ್ಯ ಅತಿಥಿಯನ್ನಾಗಿ ಟಿ.ಪಿ. ಕೈಲಾಸಂರ ಅವರನ್ನು ಆಹ್ವಾನಿಸಿದ್ದರು. ಹಿಂದಿನ ರಾತ್ರಿ ಬೆಂಗಳೂರಿನಿಂದ ಹೊರಟು ಮರುದಿನ ಇನ್ನೂ ಬೆಳಗಾಗುವುದರೊಳಗೆ ರೈಲಿನಿಂದ ತಿರುಚ್ಚಿಯನ್ನು ತಲುಪಿದರು ಕೈಲಾಸಂ. ಸಾಮಾನ್ಯವಾದ ದಿನದಲ್ಲೇ ತಮ್ಮ ವೇಷಭೂಷಣಗಳ ಬಗ್ಗೆ ಅಷ್ಟೊಂದು ಗಮನ ನೀಡದ ಕೈಲಾಸಂ, ರಾತ್ರಿ ಪ್ರವಾಸದಲ್ಲಿ ತಮಗೆ ಅನುಕೂಲವೆನಿಸಿದ ಬಟ್ಟೆ ಧರಿಸಿದ್ದರು. ಅವರು ರೈಲಿನಿಂದ ಇಳಿದಾಗ ಅವರ ವೇಷ ವಿಚಿತ್ರವಾಗಿತ್ತು. ಸ್ಯಾಂಡೋ ಬನಿಯನ್, ಕೊಳೆಯಾಗಿದ್ದ ಲುಂಗಿ, ಹೆಗಲಿಗೊಂದು ಕೈ ಚೀಲ. ಕೆಳಗಿಳಿದು ಕತ್ತು ತಿರುಗಿಸಿ ಅತ್ತಿತ್ತ ನೋಡಿದರು. ಸಂಘಟಕರಾರಾದರೂ ಬಂದಿರಬಹುದೇ ಎಂದು ಹುಡುಕಾಡಿದರು. ಯಾರೂ ಕಾಣಲಿಲ್ಲ. ಮನದಲ್ಲೇ ಅವರನ್ನು ಶಪಿಸಿ ತಾವೇ ಏನಾದರೂ ವ್ಯವಸ್ಥೆ ಮಾಡಿಕೊಳ್ಳಬೇಕೆಂದು ಹೊರನಡೆದರು. ಆಗ ಯಾರೋ ಇವರ ಹೆಗಲ ಮೇಲೆ ಒಂದು ಕೋಲನ್ನು ಇಟ್ಟಂತಾಯಿತು. ತಿರುಗಿ ನೋಡಿದರೆ ಒಬ್ಬ ದೀರ್ಘದೇಹಿ ನಿಂತಿದ್ದಾರೆ. ಘಿಗರಿಗರಿ ಮಲ್ ಪಂಚೆ, ಉದ್ದ ಕ್ಲೋಸ್ ಕಾಲರ್ ಉಲ್ಲನ್ ಕೋಟು, ತಲೆಗೆ ಜರೀಪೇಟ, ಕಣ್ಣಿಗೆ ಕಪ್ಪು ಕನ್ನಡಕ. ಒಟ್ಟಿನಲ್ಲಿ ಅತ್ಯಂತ ಶ್ರಿಮಂತರ ಠೀವಿ. ಕೈಯಲ್ಲಿಯ ಬೆತ್ತವನ್ನು ತೋರಿಸುತ್ತಾ ತಮಿಳಿನಲ್ಲಿ ಹೇಳಿದರು, `ಏ ಕೂಲಿ, ಬಾ ಇ್ಲ್ಲಲಿ', ನಂತರ ತಮ್ಮ ಹಾಸಿಗೆ ಸುರುಳಿ ಮತ್ತು ಸೂಟಕೇಸನ್ನು ತೋರುತ್ತ, `ಇವೆರ...