ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ

ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ
ಕೂಗಿದರು ಧ್ವನಿ ಕೇಳಲಿಲ್ಲವೇ ನರಹರಿಯೇ

ಪರಮಪದದೊಳಗೆ ವಿಷಧರನ ತಲ್ಪದಲಿ ನೀ
ಸಿರಿಸಹಿತ ಕ್ಷೀರವಾರುಧಿಯೊಳಿರಲು
ಕರಿರಾಜ ಕಷ್ಟದಲಿ ಆದಿಮೂಲಾ ಎಂದು
ಕರೆಯಲಾಕ್ಷಣ ಬಂದು ಒದಗಿದೆಯೋ ನರಹರಿಯೇ ೧

ಕಡು ಕೋಪದಲಿ ಖಳನು ಖಡುಗವನು ಹಿಡಿದು
ನಿನ್ನೊಡೆಯನೆಲ್ಲಿಹನು ಎಂದು ನುಡಿಯೇ
ದೃಢ ಭಕಿಯಲಿ ಶಿಶುವು ಬಿಡದೆ ನಿನ್ನನು ಭಜಿಸೆ
ಸಡಗರದಿ ಕಂಭದಿಂದೊಡೆದೆಯೋ ನರಹರಿಯೇ೨

ಯಮಸುತನ ರಾಣಿಗೆ ಅಕ್ಷಯವಸನವಿತ್ತೆ
ಸಮಯದಲಿ ಅಜಮಿಳನ ಪೊರೆದೆ
ಸಮಯಾಸಮಯವುಂಟೆ ಭಕ್ತವತ್ಸಲ ನಿನಗೆ
ಕಮಲಾಕ್ಷ ಕಾಗಿನೆಲೆಯಾದಿ ಕೇಶವನೆ೩

Krupe : http://bhakthigeetha.blogspot.in/

Comments

Popular posts from this blog

ಮುದ್ದಣ ಮನೋರಮೆಯ ಸಲ್ಲಾಪ - ಶ್ರೀವತ್ಸ ಜೋಶಿ

ಕನ್ನಡ ಕಾದಂಬರಿ ಮತ್ತು ಪುಸ್ತಕಗಳು

ಮೂಡುವನು ರವಿ ಮೂಡುವನು - ಪಂಜೆ ಮಂಗೇಶ ರಾಯರು