ಮುದ್ದಣ ಮನೋರಮೆಯ ಸಲ್ಲಾಪ - ಶ್ರೀವತ್ಸ ಜೋಶಿ
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರದ ಕೋರಿಕೆ ತುಸು ವಿಭಿನ್ನ, ವಿಶಿಷ್ಟ. ಎರಡು ಕಾರಣಗಳಿಂದ. ಒಂದನೆಯದಾಗಿ, ಇದುವರೆಗಿನ ಕೋರಿಕೆಗಳೆಲ್ಲ ಇದ್ದದ್ದು ’ಪದ್ಯ’ಗಳ ಪೂರ್ಣಸಾಹಿತ್ಯ ಪ್ರಕಟಿಸುವುದಕ್ಕೆ. ಈ ಸಲ ಪದ್ಯ ಅಲ್ಲ, ಗದ್ಯ. ಅದೂ ಯಾವುದೆಂದರೆ ’ಪದ್ಯಂ ವಧ್ಯಂ ಗದ್ಯಂ ಹೃದ್ಯಂ’ ಎಂದು ಗದ್ಯವನ್ನು ಕೊಂಡಾಡುವ ಗದ್ಯ, ಅದೇ ಮುದ್ದಣ-ಮನೋರಮೆಯ ಜಗದ್ವಿಖ್ಯಾತ ಸರಸಸಲ್ಲಾಪ ಸಂಭಾಷಣೆ. ಹಳಗನ್ನಡದಲ್ಲಿರುವಂಥ ಗದ್ಯ. ಇದು, ನಮಗಿಂತ ಹಿಂದಿನ ಬ್ಯಾಚ್‌ನಲ್ಲಿ ಏಳನೇ ತರಗತಿಯ ಕನ್ನಡ ಪಠ್ಯಪುಸ್ತಕದಲ್ಲಿ ಮೊದಲನೆಯ ಪಾಠವಾಗಿತ್ತು. ಇದರಲ್ಲಿ ಬರುವ ಕೆಲವೆಲ್ಲ ವಾಕ್ಯಗಳು- "ಪದ್ಯಂ ವಧ್ಯಂ ಗದ್ಯಂ ಹೃದ್ಯಂ", "ನೀರಿೞಯದ ಗಂಟಲೊಳ್ ಕಡುಬಂ ತುಱುಕಿದಂತಾಯ್ತು", "ಕನ್ನಡ ಕತ್ತುರಿಯಲ್ತೆ." "ಕರ್ಮಣಿಸರದೊಳ್ ಚೆಂಬವಳಮಂ ಕೋದಂತಿರೆ" ಮುಂತಾದುವು ನುಡಿಗಟ್ಟುಗಳಾಗಿ ಕನ್ನಡ ಜನಮಾನಸದಲ್ಲಿ ಅಚ್ಚಳಿಯದೆ ನಿಂತಿವೆ. ವಿದ್ವತ್ಪೂರ್ಣ ಭಾಷಣಗಳನ್ನೂ ಲೇಖನಗಳನ್ನೂ ಮುತ್ತುಹವಳಗಳಂತೆ ಅಲಂಕರಿಸಿವೆ. ಹಾಂ. ಹೇಳೋದೇ ಮರೆತೆ. ಈ ವಾರದ ಕೋರಿಕೆ ಸಲ್ಲಿಸಿದವರು ಬೆಂಗಳೂರಿನಿಂದ Jyothi Umesh. ಅವರು ತುಂಬಾ ಹಿಂದೆಯೇ ಒಮ್ಮೆ ಇದರ ಬಗ್ಗೆ ಕೇಳಿದ್ದರು. ಮತ್ತೆ ಮೊನ್ನೆಯಷ್ಟೇ ನಾನು ಬೇರೆ ಒಂದು ಪೋಸ್ಟ್‌ನಲ್ಲಿ ’ಮುದ್ದಣ ಮನೋರಮೆ’ಯರ ಪ್ರಸ್ತಾವ ಮಾಡಿದಾಗ ಮತ್ತೆ ನೆನಪಿಸಿಕೊಂಡು ಯಾವಾಗ ಪ್ರಕಟಿಸುತ್...