ಸಂಕಥನ - ಚುಕ್ಕುಬುಕ್ಕು

Courtesy: ಚುಕ್ಕುಬುಕ್ಕು ( ಹೊಸ ಸಾಹಿತ್ಯ ಪತ್ರಿಕೆ ‘ಸಂಕಥನ’ದ ಮೊದಲ ಸಂಚಿಕೆ ಕಳೆದವಾರ ಹೊರಬಂದಿದೆ. ಅದಕ್ಕೆ ಸ್ವಾಗತ ಹಾಗೂ ಶುಭ ಕೋರುತ್ತಾ, ಮೊದಲ ಸಂಚಿಕೆ ಓದಿ ಗೌರಿ ಹಂಚಿಕೊಂಡಿರುವ ಅನಿಸಿಕೆಗಳನ್ನು ಇಲ್ಲಿ ಕೊಡುತ್ತಿದ್ದೇವೆ. ‘ಸಂಕಥನ’ಕ್ಕೆ ಚಂದಾದಾರರಾಗಲು ಸಂಪಾದಕ ರಾಜೇಂದ್ರ ಪ್ರಸಾದ್ ಅವರನ್ನು ಸಂಪರ್ಕಿಸಿ) ಕಾವ್ಯ, ಅಂಕಣಬರಹ, ಓದು, ತಿರುಗಾಟ, ಛಾಯಾಗ್ರಹಣ, ಸಂಘಟನೆ, ಅಡುಗೆ, ಜಗಳ ಹೀಗೆ ಬದುಕಿನ ಹಲವು ಆಯಾಮಗಳಲ್ಲಿ ತಮ್ಮನ್ನು ತಾವು ತೀವ್ರವಾಗಿ ತೊಡಗಿಸಿಕೊಂಡಿರುವ ರಾಜೇಂದ್ರ ಪ್ರಸಾದ್ ಅವರ ಹೊಸ ಸಾಹಸ 'ಸಂಕಥನ' ತ್ರೈಮಾಸಿಕ ಸಾಹಿತ್ಯ ಪತ್ರಿಕೆ. ಕಳೆದ ಭಾನುವಾರ ಬೆಂಗಳೂರಿನ ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ಈ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ನಡೆಯಿತು. ಆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹೆಚ್ಚಿನಂಶ ಯುವಕರು ಮತ್ತು ಕೆಲವು ಹಿರಿಯರ ಸಮ್ಮಿಲನ 'ಸಂಕಥನ' ಪತ್ರಿಕೆಯ ಉದ್ದೇಶ, ಕಾರ್ಯವೈಖರಿಯನ್ನೂ ಸೂಕ್ತವಾಗಿ ಪ್ರತಿಬಿಂಬಿಸುವಂತಿತ್ತು. ಹಿರಿಯರಾದ ಸಿ.ಎನ್. ರಾಮಚಂದ್ರನ್, ಚಂದ್ರಶೇಖರ ಆಲೂರು, ಆರ್. ಪೂರ್ಣಿಮಾ ಅವರು ಆಡಿದ ಮಾತುಗಳೂ 'ಸಂಕಥನ' ಪತ್ರಿಕೆ ಸಾಧಿಸಿದ ಗುಣಗಳೊಟ್ಟಿಗೇ, ಒಳಗೊಳ್ಳಬೇಕಾದ ಅಂಶಗಳನ್ನೂ ಒತ್ತಿಹೇಳಿದ್ದನ್ನು ಮನಸ್ಸಿನಲ್ಲಿಟ್ಟುಕೊಂಡೇ ಈ ಮುದ್ದಾದ ಪತ್ರಿಕೆಯನ್ನು ಕೈಗೆತ್ತಿಕೊಂಡೆ. ಆಕಾರ, ಮುಖಪುಟ ಚಿತ್ರ ಎಲ್ಲ ದೃಷ್ಟಿಯಿಂದಲೂ ನೋಡಿದ ಕೂಡಲೇ ಕೈಗೆತ್ತಿಕೊಳ್...