Posts

Showing posts from July, 2015

ಶ್ರೀ ಗಣೇಶಭಟ್ಟ ಕೊಪ್ಪಲತೋಟರ ಮೂರನೆಯ ಅಷ್ಟಾವಧಾನಕಾರ್ಯಕ್ರಕೆ ಅಮಂತ್ರಣ

Image
ಆತ್ಮೀಯಮಿತ್ರರಿಗೆಲ್ಲ ನಮಸ್ಕಾರ, ಇದೇ ತಿಂಗಳು ಇಪ್ಪತ್ತೈದನೆಯ ತಾರೀಖು ಶನಿವಾರದಂದು ಬೆಳಗ್ಗೆ ಹತ್ತುಗಂಟೆಗೆ ಬಸವನಗುಡಿ ರಸ್ತೆಯಲ್ಲಿರುವ ಗೋಖಲೆ ಸಾರ್ವಜನಿಕವಿಚಾರಸಂಸ್ಥೆಯಲ್ಲಿ ನಮ್ಮ ಯುವಮಿತ್ರರೂ ಸಾಹಿತ್ಯರಸಿಕರೂ ಆದ ಶ್ರೀ ಗಣೇಶಭಟ್ಟ ಕೊಪ್ಪಲತೋಟರ ಮೂರನೆಯ ಅಷ್ಟಾವಧಾನಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದಕ್ಕೆ ಪ್ರಾಯೋಜಕರಾಗಿ ಒದಗಿ ಬಂದವರು ನಮ್ಮ ಪದ್ಯಪಾನ ಬಳಗದವರೇ ಆದ ಶ್ರೀ.ಸೋಮಶೇಖರಶರ್ಮ, ಶ್ರೀ.ರವಿಶಂಕರ್ ಮತ್ತು ಶ್ರೀ.ಶ್ರೀಧರ್ ಸಾಲಿಗ್ರಾಮ ಅವರ ಪೂಜ್ಯಮಾತಾಪಿತರು.ಇದಕ್ಕಾಗಿ ಅವರಿಗೆ ವಿಶೇಷಕೃತಜ್ಞತೆಗಳು. ಶ್ರೀ ಗಣೇಶಭಟ್ಟ ಕೊಪ್ಪಲತೋಟ ಈ ಅವಧಾನದಲ್ಲಿ ಪೃಚ್ಛಕರಾಗಿ ಪಾಲ್ಗೊಳ್ಳಲು ಪ್ರೀತಿಯಿಂದ ಒಪ್ಪಿದವರು : ಶ್ರೀ. ಎಮ್ ಆರ್ ಚಂದ್ರಮೌಳಿ (ನಿಷೇಧಾಕ್ಷರಿ) ಶ್ರೀ. ಮಂಜುನಾಥ ಕೊಳ್ಳೇಗಾಲ (ಸಮಸ್ಯಾಪೂರಣ) ಶ್ರೀ. ಬಿ ಆರ್ ಪ್ರಭಾಕರ್ (ದತ್ತಪದೀ) ಶ್ರೀಮತಿ. ಉಷಾ ಉಮೇಶ್ (ನ್ಯಸ್ತಾಕ್ಷರೀ) ಶ್ರೀ. ಸುಧೀರ್ ಕೃಷ್ಣಸ್ವಾಮಿ (ಆಶುಕವಿತೆ) ಶ್ರೀಮತಿ. ಶ್ರೀಲಲಿತಾ ರೂಪನಗುಡಿ (ಕಾವ್ಯವಾಚನ) ಶ್ರೀ. ರಂಗನಾಥ ಪ್ರಸಾದ್ (ಸಂಖ್ಯಾಬಂಧ) ಶ್ರೀ. ಆರ್ ಗಣೇಶ್ (ಅಪ್ರಸ್ತುತಪ್ರಸಂಗ) ಅಷ್ಟಾವಧಾನಿ ಕೊಪ್ಪಲತೋಟರು ಕೇವಲ ಇಪ್ಪತ್ತಾರು ವರ್ಷಗಳ ಕಿರಿಯ ಹರೆಯದಲ್ಲಿಯೇ ಮಾಡಿರುವ ಸಾಹಿತ್ಯಸಾಧನೆ ಸ್ತುತ್ಯವಾಗಿದೆ. ಅವರು ಈಗಾಗಲೇ ಕಥೆ, ಕಾದಂಬರಿ, ಕವಿತೆ, ಖಂಡಕಾವ್ಯ ಮುಂತಾದ ಪ್ರಕಾರಗಳಲ್ಲಿ ದುಡಿದಿದ್ದಾರೆ. ಅಲ್ಲದೆ ಹಳಗನ್ನಡ, ನಡುಗನ್...

ಬೆಂಗಳೂರಿನ ಭಾರತೀಯ ವಿದ್ಯಾಭವನದಲ್ಲಿ ಗಿರೀಶ್ ಕಾಸರವಳ್ಳಿ ಚಿತ್ರೋತ್ಸವ

Image
ಜು. 25ರಿಂದ ಜು. 29ರವರೆಗೆ ಬೆಂಗಳೂರಿನ ಭಾರತೀಯ ವಿದ್ಯಾಭವನದಲ್ಲಿ ಗಿರೀಶ್ ಕಾಸರವಳ್ಳಿ ಚಿತ್ರೋತ್ಸವ ಆಯೋಜನೆಗೊಂಡಿದೆ.  

ವಂಶ ವೃಕ್ಷ ಕಾದಂಬರಿ ಕುರಿತಾದ ಅನಿಸಿಕೆಗೆ - ಶಿವಕುಮಾರ್

Image
ನಮಸ್ಕಾರ !! ವಂಶವೃಕ್ಷಕ್ಕೆ ಐವತ್ತು ವರ್ಷಗಳು ತುಂಬಿರಬಹುದು ಆದರೆ ನಾನು ಅದನ್ನು ಓದಿದ್ದು ನಾಲ್ಕು ವರ್ಷಗಳ ಹಿಂದೆ !! ನಂತರ ಐದು ಬಾರಿ ಇದನ್ನು ಓದಿದ್ದೆನೆ. ನನ್ನ ಹುಟ್ಟು ಹಬ್ಬಕ್ಕೆ ನನ್ನ ಆಪ್ತ ಗೆಳೆಯ ಶಂಕರ್ ಕವಲು ಕಾದಂಬರಿಯನ್ನು ಉಡುಗೊರೆಯಾಗಿ ಕೊಟ್ಟಿದ್ದ. ಆಗ ನಾನು ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದೆ. (ಭೈರಪ್ಪನವರು ಇಲ್ಲೇ ಕಾರ್ಯ ನಿರ್ವಹಿಸಿ ನಿವೃತ್ತರಾದರು) ಆಗಿನಿಂದ ನಾನು ಭೈರಪ್ಪನವರ ಪುಸ್ತಕಗಳನ್ನು ಓದಲು ಶುರು ಮಾಡಿದ್ದು. ಅಲ್ಲಿದ್ದ ಶೀಘ್ರಲಿಪಿಗಾರರಾದ ಜಗದೀಶ್ ಭೈರಪ್ಪನವರ ಬಗ್ಗೆ ಬಹಳ ಹೇಳುತ್ತಿದ್ದರು (ಇವರ ಹೆಸರನ್ನು ಭೈರಪ್ಪನವರು ತಮ್ಮ ಭಿತ್ತಿ ಪುಸ್ತಕದಲ್ಲಿ ನೆನಪಿಸಿಕೊಂಡಿದ್ದಾರೆ) ಮತ್ತು ಭೈರಪ್ಪನವರ ಅಭಿಮಾನಿ ಹಾಗು ಅವರ ಬೋಧನೆಯನ್ನು ಕೇಳಿದ್ದ ಮತ್ತು ಈಗ ಅದೇ ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿ ಪ್ರೊಫೆಸರ್ ಆಗಿರುವ ನನ್ನ ಗುರುಸಮಾನರಾದ ಡಾ. ಗೌರಮ್ಮ ಭೈರಪ್ಪನವರ ಬಗ್ಗೆ ಹೇಳುತ್ತಿದ್ದಲ್ಲದೆ ಅವರ ಕಾದಂಬರಿಗಳ ಬಗ್ಗೆ ನನ್ನೊಡನೆ ಚರ್ಚಿಸುತ್ತಿದರು. ನಂತರ ನಾನು ನ್ಯಾಯಾಂಗ ಇಲಾಖೆಯಲ್ಲಿ ಕೆಲಸಕ್ಕೆ ಸೇರಿದ ನಂತರ ಎರಡು ವರ್ಷಗಳ ಹಿಂದೆ ಚಾಮರಾಜನಗರಕ್ಕೆ ವರ್ಗವಾದೆ. ದಿನಾ ಬೆಳಿಗ್ಗೆ ೭. ೩೦ ಗಂಟೆಯ ರೈಲಿನಲ್ಲಿ ಪ್ರಯಾಣ ಮತ್ತೆ ಸಂಜೆ ೬ ಗಂಟೆಗೆ ವಾಪಾಸ್ಸು ಮೈಸೂರಿಗೆ ರೈಲಿನಲ್ಲಿ ಬರುತ್ತಿದ್ದೆ. ಹೋಗುವಾಗ ಬರುವಾಗ ಒಂದೂವರೆ ತಾಸಿನ ಸಮಯದಲ್ಲಿ ಭೈರಪ್ಪನವರ ಕಾದಂಬರಿಗಳನ್ನು ಓದುತ್ತ...

ಹಕ್ಕಿ ಹಾರುತಿದೆ ನೋಡಿದಿರಾ? - ದ ರಾ ಬೇಂದ್ರೆ,

Image
ದ ರಾ ಬೇಂದ್ರೆ,  ಹಕ್ಕಿ ಹಾರುತಿದೆ ನೋಡಿದಿರಾ? ಇರುಳಿರುಳಳಿದು ದಿನ ದಿನ ಬೆಳಗೆ ಸುತ್ತುಮುತ್ತಲೂ ಮೇಲಕೆ ಕೆಳಗೆ ಗಾವುದ ಗಾವುದ ಗಾವುದ ಮುಂದೆ ಎವೆತೆರೆದಿಕ್ಕುವ ಹೊತ್ತಿನ ಒಳಗೆ ಹಕ್ಕಿ ಹಾರುತಿದೆ ನೋಡಿದಿರಾ? ಕರಿನರೆ ಬಣ್ಣದ ಪುಚ್ಚಗಳುಂಟು ಬಿಳಿ-ಹೊಳೆ ಬಣ್ಣದ ಗರಿ -ಗರಿಯುಂಟು ಕೆನ್ನನ ಹೊನ್ನನ ಬಣ್ಣ-ಬಣ್ಣಗಳ ರೆಕ್ಕೆಗಳೆರಡೂ ಪಕ್ಕದೊಲುಂಟು ಹಕ್ಕಿ ಹಾರುತಿದೆ ನೋಡಿದಿರಾ? ನೀಲಮೇಘಮಂಡಲ-ಸಮ ಬಣ್ಣ ಮುಗಿಲಿಗೆ ರೆಕ್ಕೆಗಳೊಡೆದವೊ ಅಣ್ಣಾ ಚಿಕ್ಕಿಯ ಮಾಲೆಯ ಸೆಕ್ಕಿಸಿಕೊಂಡು ಸೂರ್ಯ-ಚಂದ್ರರನು ಮಾಡಿದೆ ಕಣ್ಣಾ ಹಕ್ಕಿ ಹಾರುತಿದೆ ನೋಡಿದಿರಾ? ರಾಜ್ಯದ ಸಾಮ್ರಾಜ್ಯದ ತೆನೆ ಒಕ್ಕಿ ಮಂಡಲ-ಗಿಂಡಲಗಳ ಗಡ ಮುಕ್ಕಿ ತೇಲಿಸಿ ಮುಳುಗಿಸಿ ಖಂಡ-ಖಂಡಗಳ ಸಾರ್ವಭೌಮರಾ ನೆತ್ತಿಯ ಕುಕ್ಕಿ ಹಕ್ಕಿ ಹಾರುತಿದೆ ನೋಡಿದಿರಾ? ಯುಗ-ಯುಗಗಳ ಹಣೆ ಬರಹವ ಒರಸಿ ಮನ್ವಂತರಗಳ ಭಾಗ್ಯವ ತರೆಸಿ ರೆಕ್ಕೆಯ ಬೀಸುತ ಚೇತನಗೊಳಿಸಿ ಹೊಸಗಾಲದ ಹಸುಮಕ್ಕಳ ಹರಸಿ ಹಕ್ಕಿ ಹಾರುತಿದೆ ನೋಡಿದಿರಾ? ಬೆಳ್ಳಿಯ ಹಳ್ಳಿಯ ಮೇರೆಯ ಮೀರಿ ತಿಂಗಳೂರಿನ ನೀರನು ಹೀರಿ ಆಡಲು ಹಾಡಲು ತಾ ಹಾರಾಡಲು ಮಂಗಳಲೋಕದ ಅಂಗಳಕೇರಿ ಹಕ್ಕಿ ಹಾರುತಿದೆ ನೋಡಿದಿರಾ? ಮುಟ್ಟಿದೆ ದಿಗ್ಮಂಡಲ ಅಂಚ ಆಚಿಗೆ ಚಾಚಿದೆ ತನ್ನಯ ಕುಂಚ ಬ್ರಹ್ಮಾಂಡಲಗಳ ಒಡೆಯಲು ಎಂದೊ ಬಲ್ಲರು ಯಾರಾ ಹಾಕಿದ ಹೊಂಚ! ಹಕ್ಕಿ ಹಾರುತಿದೆ ನೋಡಿದಿರಾ? ನಾದಲೀಲೆ - ಕುರುಡು ಕಾಂಚಾಣ ದ.ರಾ. ಬೇಂದ...

ತಬ್ಬಲಿಯು ನೀನಾದೆ ಮಗನೆ - ಗಣೇಶ ಕೊಪ್ಪಲತೋಟ

Image
   ಹೆಸರನ್ನು ಓದಿ ತಕ್ಷಣ ಭೈರಪ್ಪನವರ ಕಾದಂಬರಿಯ ಬಗ್ಗೆ ಬರೆಯುತ್ತಿದ್ದೇನೆ ಎಂದು ತಿಳಿದುಕೊಳ್ಳಬೇಡಿ. ಪುಣ್ಯಕೋಟಿಯ ಹಾಡಿನಲ್ಲಿ ಬರುವ ಈ ಸಾಲಿನಿಂದ ಭೈರಪ್ಪನವರು ಒಂದು ಕಾದಂಬರಿಯನ್ನು ಬರೆದದ್ದಂತೂ ಹೌದು. ಇತ್ತೀಚಿಗೆ ಸ್ವರ್ಣವಲ್ಲಿ ಮಠದಲ್ಲಿ ಅವರ 'ಕವಲು' ಕಾದಂಬರಿಯ ಕುರಿತು ಸಂವಾದ ಕಾರ್ಯಕ್ರಮ ಏರ್ಪಡಿಸಿದ್ದಾಗ ಅದರಲ್ಲಿ "ಪುಣ್ಯಕೋಟಿಯಂತಹ ಮೌಲ್ಯಯುತ ಕಥೆಗಳು ಇಂದಿನ ಪಟ್ಯಪುಸ್ತಕಗಳಲ್ಲಿ  ಕಾಣುತ್ತಿಲ್ಲ.ಹಸು ಮಾತನಾಡುವುದೆಲ್ಲ unscientific ಎಂದು ಹೇಳಿಬಿಡುತ್ತಾರೆ. ಅದರ ಮೌಲ್ಯವನ್ನು ಅರಿತುಕೊಳ್ಳುತ್ತಿಲ್ಲ" ಎಂದು ವಿಷಾದ ವ್ಯಕ್ತಪಡಿಸಿದರು. ಮೌಲ್ಯ ಶಿಕ್ಷಣ ಎಂಬುದು ಬೋಧಿಸಿ ಅದಕ್ಕೊಂದು ಪರೀಕ್ಷೆ ಇಟ್ಟು ಅದರಿಂದ ತಿಳಿದುಕೊಳ್ಳುವಂತಹದ್ದಲ್ಲ.' ಎಂದೂ ಹೇಳಿದರು.ಆಗ ನನಗೆ ಅನ್ನಿಸಿದ್ದು ಮೌಲ್ಯ ಶಿಕ್ಷಣದ ಮೌಲ್ಯವನ್ನು ಮಕ್ಕಳು ಚಿಕ್ಕವರಾಗಿದ್ದಾಗಿನಿಂದಲೇ ತಿಳಿಸಿ ಹೇಳಬೇಕು ಎಂದು.ಹಿರಿಯರು ತಂದೆತಾಯಿಯರು ನಡೆದಂತೆ ಮಕ್ಕಳು ಅನುಸರಿಸುತ್ತಾರೆ. ನಿತ್ಯವೂ ದೇವರಿಗೆ ಕೈಮುಗಿಯುವ ತಾಯಿಯೊಡನೆ ಮಗಳೂ ಕೈ ಮುಗಿಯುತ್ತಾಳೆ. ಅಪ್ಪ ಸಿಗರೇಟು ಸೇದುವುದನ್ನು  ನೋಡಿದ ಮಗ ಅದನ್ನೇ ಅನುಕರಿಸುತ್ತಾನೆ. ಹೀಗಾಗಿ ತಮ್ಮ ಮಕ್ಕಳ ಉನ್ನತಿಗೆ ಹಾಗು ಮೌಲ್ಯಯುತ ಜೀವನಕ್ಕೆ ತಂದೆತಾಯಿಯರೂ ಮೌಲ್ಯಯುತವಾಗಿ ಬದುಕುವುದು ಅವಶ್ಯಕ.           ಹಠಮಾರಿ ಮಗನೊಬ್ಬನ ತಾಯಿಗೆ ಏನು ಮಾಡಿದರೂ ಮಗನನ್...

ಕೈಗಂಟಿದ ಅತ್ತರು (ಅನುಭವ) - ರಾಜೇಶ್ ಶ್ರೀವತ್ಸ

Image
ನಾನು ಪ್ರೇತದ ಕೈ ಹಿಡಿದು ಮೇಲೆಬ್ಬಿಸಿದೆನೇ? ನೈಸ್ ರಸ್ತೆಯ ಸೇತುವೆಯ ಕಡೆಗೆ ನಡೆಯುತ್ತಾ ಮನೆಯ ಕಡೆ ಸಾಗುತ್ತಿದ್ದೆ. ತಲೆ ಸಣ್ಣಗೆ ನೋಯುತ್ತಿತ್ತು ಮಾತ್ರೆ ತೆಗೆದುಕೊಂಡು ಮನೆಗೆ ಹೋಗಬೇಕು ಅಂದುಕೊಂಡೆ. ಕೆಲಸ ಮುಗಿಸಿ ಮನೆಯ ಕಡೆ ಸಾಗುತ್ತಿದ್ದ ಗಾರ್ಮೆಂಟ್ಸ್ ಕಂಪನಿಯ ಹುಡುಗಿಯರಿಂದ ರಸ್ತೆ ಗಿಜಿಗಿಡುತ್ತಿತ್ತು. ಎದುರಿನ ವಿಟ್ಟಸಂದ್ರದ ಕಡೆಯಿಂದ ಸುಮಾರು ಮೂವತ್ತು ವರ್ಷದ ಹೆಂಗಸು ನಡೆದು ಬರುತ್ತಿದ್ದಳು. ಸುಮಾರು ಐದೂವರೆ ಅಡಿ ಎತ್ತರ, ದಪ್ಪದೇಹ, ಗೌರವರ್ಣ, ಗುಂಗುರು ಕೂದಲು, ತಲೆ ತುಂಬಾ ಹೂವು, ಕಾಲಿನಲ್ಲಿ ಇಂಚಗಲದ ಬೆಳ್ಳಿ ಗೆಜ್ಜೆ, ಕೈತುಂಬಾ ಬಳೆ , ಕೈಯಲ್ಲಿ ಪ್ಲಾಸ್ಟಿಕ್ ವಯರ್ ಚೀಲ. ಹತ್ತಿರ ಬರುತ್ತಿದ್ದಂತೇ ಕತ್ತಿನಲ್ಲಿದ್ದ ದೊಡ್ಡ ಕರಿಮಣಿ ಚಂದ್ರಹಾರ, ಕಿವಿಯಲ್ಲಿ ಹಳೆಯಕಾಲದ ಹಂಸದ ಹರಳಿನ ಕಿವಿಯೋಲೆ ನೋಡಿ ಅಕೆ ಮುಸ್ಲಿಮ್ ಇರಬೇಕು ಅನ್ನಿಸಿತು. ಇಬ್ಬರೂ ನೈಸ್ ಸೇತುವೆಯ ಕಡೆ ನಡೆದೆವು. ಆಕೆ ಮುಂದೆ. ನಾನು ಹಿಂದೆ. ಸೇತುವೆಯ ಮಧ್ಯ ಬರುತ್ತಿದ್ದಂತೆ ಆಕೆ ಜರ್ರನೆ ಜಾರಿ ಬಿದ್ದಳು. ಕೈಲಿದ್ದ ಚೀಲದಿಂದ ಖಾಲಿ ಟಿಫನ್ ಡಬ್ಬಗಳು ಉರುಳುತ್ತಾ ಹೊರಬಿದ್ದವು. ನಾನು ಅರ್ರೇ!! ಪ್ಚ್ ಪ್ಚ್ ಅನ್ನುತ್ತ ನೆರವಿಗೆ ಹತ್ತಿರ ಹೋಗಿ ನೆರವಿಗೆ ಕೈ ಚಾಚಿದೆ. ಅತ್ತರಿನ ಘಂ ಮೂಗಿಗೆ ಬಡಿಯಿತು. ಆಕೆ ನನ್ನ ಕೈ ಹಿಡಿದು ಸಾವರಿಸಿಕೊಂಡು ಎದ್ದು ಕುಳಿತಳು. ಉರುಳಿ ಬಿದ್ದ ಮೂರು ಟಿಫನ್ ಬಾಕ್ಸ್‌ಗಳನ್ನು ಎತ್ತಿ ಅಕೆಗೆ ನೀಡಿದೆ. ಆಕೆ ನಗುತ್ತಾ ’ ತುಂಬಾ ...

ಬರ್ಮುಡಾ ಹುಲ್ಲು - ರಾಜೇಶ್ ಶ್ರೀವತ್ಸ,

Image
ನಿಮ್ಮ ಊರಿಗೆ ಮಂತ್ರಿ ಮಹೋದಯರು ವಕ್ಕರಿಸುತ್ತಿದ್ದಾರೆಂದರೆ ನಿಮ್ಮೂರಿನ ಉದ್ಯಾನವನ ರಾತ್ರಿ ಬೆಳಗಾಗುವುದರೊಳಗಾಗಿ ನಂದನವನದಂತೆ ಕಂಗೊಳಿಸುತ್ತದೆ ಅಲ್ಲವೆ? ಬೆಳೆದು ನಿಂತ ಹೂವಿನ ಗಿಡಗಳಂತೆ ಐದರಿಂದ ಹತ್ತಡೀಗೂ ಎತ್ತರದ ಸೈಕಸ್ ಹಾಗು ಕಣಗಲೆ ಮರಗಳು ಕೂಡಾ ತೋಟಗಾರಿಕ ಕೇಂದ್ರಗಳಲ್ಲಿ ಕುಂಡಗಳಲ್ಲಿ ಬೇಕಾದಾಗ ಲಭ್ಯವಾಗುತ್ತವೆ. ಸಾಮಾನ್ಯ ಬೋಗನ್ ವಿಲ್ಲೆಯ ಗಿಡಕ್ಕೆ ರೂ ೨೫೦ ಕಕ್ಕಬೇಕು ಅಷ್ಟೆ. ಇನ್ನು ಉತ್ತಮ ಜಾತಿಯ ಗಿಡಗಳಂತೂ ಇನ್ನೂ ದುಬಾರಿ. ಈ ಮಂತ್ರಿ ಮಹೋದಯರಿಗೆ ಸ್ವಾಗತ ಕೋರಲು ನಮ್ಮ ತೆರಿಗೆ ಹಣ ಎಷ್ಟು ಪೋಲಾಗುತ್ತಿರಬಹುದು ಊಹಿಸಿ ? ಇನ್ನು ಕುಂಡಗಳ ಜೊತೆಗೆ ಉದ್ಯಾನವನಗಳ ನೆಲಕ್ಕೆ ಹಾಸಲು ಹುಲ್ಲಿನ ಚಾಪೆಗಳೂ ಲಭ್ಯ. ಪರಪ್ಪನ ಅಗ್ರಹಾರ, ಕೋಣೇನ ಅಗ್ರಹಾರ, ವಿಟ್ಟಸಂದ್ರ, ಬಸವಾಪುರ, ತೋಗೂರುಗಳ ಅಳಿದುಳಿದ ಹೊಲಗಳಲ್ಲಿ ಈ ಚಿನ್ನದ ಬೆಳೆಯನ್ನು ಹುಲುಸಾಗಿ ಬೆಳೆಯುತ್ತಾರೆ. ಗರಿಕೆಯ ಹಾಗೆ ಕಾಣುವ ಗರಿಕೆಗಿಂತ ಚಿಕ್ಕ ಎಲೆಗಳ ಈ ಹುಲ್ಲಿನ ಹೆಸರು ಬರ್ಮುಡಾ ಹುಲ್ಲು.ಗರಿಕೆಗಿಂತಲೂ ಹಸಿರು, ಕಾಲಿಟ್ಟರೆ ಮೆತ್ತಗೆ ಸ್ಪಂಜಿನ ಮೇಲೆ ಕಾಲಿಟ್ಟಂತೆ ಭಾಸವಾದರೂ ಗರಿಕೆಯಷ್ಟು ಕೋಮಲವಲ್ಲ. ಮುಟ್ಟಿದರೆ ಪ್ಲಾಸ್ಟಿಕ್ ಎಳೆ ಮುಟ್ಟಿದ ಅನುಭವವಾಗುತ್ತದೆ. ಬಿತ್ತನೆಗಾಗಿ ಬೇರಿರುವ ಹುಲ್ಲಿನ ಗಂಟುಗಳನ್ನು ಕತ್ತರಿಸಿ ಇಟ್ಟುಕೊಳ್ಳುತ್ತಾರೆ. ಚಪ್ಪಟೆಯಾಗಿ ಉಳುಮೆ ಮಾಡಿದ ಭೂಮಿಯ ಮೇಲೆ ಆ ಹುಲ್ಲಿನ ಗಂಟುಗಳನ್ನು ಬಿತ್ತುತ್ತಾರೆ. ಇದಕ್ಕೆ ಉಪಯೋಗಿಸುವ ನ...

ಇಗು ಒಂದು ಸುಂದರ ಸಂಸಾರ -

Image

ನಾನೂ ಇಫ಼್ತಾರ್‌ಗೆ ಹೋಗಿದ್ದೆ. - ರಾಜೇಶ್ ಶ್ರೀವತ್ಸ,

Image
ನಮ್ಮ ಮನೆಯ ಹಿಂದೆ ಉಲ್ಲಾಳದ ಬ್ಯಾರಿ ಮೊಹಮ್ಮದ್ ಅಬುಕರ್ ಅವರ ಮನೆ. ಅವರ ಹೆಂಡತಿ ಆಯೇಷಾ, ಇನ್ನೂ ಒಂದಿಬ್ಬರು ಸಂಬಂಧಿಕರು ಅವರ ಮಕ್ಕಳು ಅಂತ ಮನೆ ತುಂಬಾ ಜನ-ಮಕ್ಕಳು. ಆ ಮಕ್ಕಳ ಹೆಸರು ನಮಗೆ ನೆನಪಿನಲ್ಲೇ ಉಳಿಯುತ್ತಿರಲಿಲ್ಲ. ಅಬೀದಾ, ನಸೀಮ, ಜುಲ್ಫಿ, ರಫಿಕ್... ಹೀಗೆ. ಯಾರ್ಯಾರು ಯಾರ ಮಕ್ಕಳು ಅಂತ ಕೂಡ ಅರ್ಥವಾಗ್ತಾ ಇರಲಿಲ್ಲ. ಒಟ್ಟಿನಲ್ಲಿ ನಮ್ಮ ಪಾಲಿಗೆ ಅವರೆಲ್ಲ ಬ್ಯಾರಿಮಕ್ಕಳು. ಆಯೇಷಾ ನಮಗೆಲ್ಲಾ ಐಸಮ್ಮ . ಐಸಮ್ಮ ಸುಮಾರು ನಮ್ಮ ಅಮ್ಮನ ಸಮ ವಯಸ್ಸಿನವರು. ಮನೆಗಳ ಮುಖ ಬೇರೆ ಬೇರೆ ರಸ್ತೆಗಿದ್ದರೂ ಇಬ್ಬರ ಹಿತ್ತಿಲೂ ಒಂದೇ ಕಡೆ ಇರುವುದರಿಂದ ಅಮ್ಮ ಹಾಗು ಐಸಮ್ಮ ನಿತ್ಯ ಒಂದೇ ಸಮಯದಲ್ಲಿ ಹರಟೆ ಹೊಡೆಯುತ್ತಾ ಬಟ್ಟೆ ಒಗೆಯುತ್ತಿದ್ದರು. ಆಗಾಗ ಬಟ್ಟೆ ಕಲ್ಲಿಗೆ ಬಡೆಯುವ ಸದ್ದನ್ನೂ ಮೀರಿ ಕೇಳುವಂತೆ ಮಾತನಾಡಬೇಕಾದಾಗ ಜೋರಾಗಿ ಸ್ವರ ಎತ್ತರಿಸುತ್ತಿದ್ದರು. ಆಗಾಗ ಮೆಲ್ಲಗೆ ಸಣ್ಣ ದನಿಯಲ್ಲಿ. ದೂರದಿಂದ ಇದನ್ನು ಕೇಳುತ್ತಿದ್ದ ನೆರೆಹೊರೆಯ ಕೆಲವರು ಇವರಿಬ್ಬರೂ ನಿತ್ಯ ಬಟ್ಟೆ ಒಗೆಯುವಾಗ ಜಗಳಾಡುತ್ತಾರೆ ಎಂದು ಅಂದುಕೊಂಡಿದ್ದರಂತೆ. ಸಣ್ಣ ಮಕ್ಕಳಾದ ನಮಗೆ ಐಸಮ್ಮನ ಕಿವಿಯ ಅಂಚಿನುದ್ದಕ್ಕೂ ತೂತುಗಳು ಹಾಗು ಅದಕ್ಕೆ ಪೋಣಿಸಿದ ಚಿನ್ನದ ಸುರುಟೆ, ಸುರುಟೆಗೆ ಜೋಲಾಡುವ ಹರಳುಗಳ ಗೊಂಚಲುಗಳು ಮಹಾ ಆಕರ್ಷಣೆ. ಅವರನ್ನು ಕಂಡಾಗಲೆಲ್ಲಾ ಅಷ್ಟೊಂದು ತೂತು ಮಾಡಿಸಿಕೊಳ್ಳುವಾಗ ನೋವಾಗಲಿಲ್ವಾ? ರಕ್ತ ಬರಲಿಲ್ವಾ? ಸುರುಟೆ ಭಾರ ಆಗೋಲ್ವಾ? ಎಷ್ಟು ಚಿನ್ನ ಇದೆ...

ವೇಣಿ ಮಾಧವನ ತೋರಿಸೆ – ವಾದಿರಾಜರು

Image
ವೇಣಿ ಮಾಧವನ ತೋರಿಸೆ ಜಾಣೆ ತ್ರಿವೇಣಿ ಕಾಣದೆ ನಿಲ್ಲಲಾರೆನೆ||ಪಲ್ಲವಿ|| ಕಾಣುತ ಭಕ್ತರ ಕರುಣದಿ ಸಲಹುವ ಜಾಣೆ ತ್ರಿವೇಣಿ ಸಾರೆ ಸುಖವಾಣಿ||ಅನುಪಲ್ಲವಿ|| ಬಂದೆನೆ ಬಹಳ ದೂರದಿ ಭವಸಾಗರ ತರಣಿ ನಿಂದೆನೆ ನಿನ್ನ ತೀರದಿ ಒಂದು ಗಳಿಗೆ ಹರಿಯ ಅಗಲಿ ನಾನಿರಲಾರೆ ಮಂದಗಮನೆ ಎನ್ನ ಮುಂದಕೆ ಕರೆಯೆ ||೧|| ಶರಣಾಗತರ ಪಾಲಿಪುದು ತರಳೆ ನಿನ್ನ ಬಿರುದು ಕರುಣದಿಂದೆನ್ನ ಪೊರೆಯೆ ಸ್ಮರಣೆ ಮಾತ್ರದಿ ಭವತಾಪವ ಹರಿಸುವ ಸ್ಮರನ ಪಿತ ಮುರಹರನ ಕರುಣದಿ ||೨|| ಸುಜನರಿಗೆಲ್ಲಾಧರಳೆ ಸುಖಶೀಲೆ ಕೇಳೆ ಕುಜನ ಸಂಗವನು ಕೀಳೆ ನಿಜಪದವಿಯನೀವ ಹಯವದನನ ಪದ ರಜವ ತೋರಿಸೆ ಮದಗಜಗಮನೆ ||೩||

ಫೊಸ್ತೆರ್

Image