Posts
Showing posts from January, 2016
ಮೂಡುವನು ರವಿ ಮೂಡುವನು - ಪಂಜೆ ಮಂಗೇಶ ರಾಯರು
- Get link
- X
- Other Apps
ಮೂಡುವನು ರವಿ ಮೂಡುವನು ಕತ್ತಲೊಡನೆ ಜಗಳಾಡುವನು ಪಂಜೆ ಮಂಗೇಶ ರಾಯರು ಮೂಡಣ ರಂಗಸ್ಥಳದಲಿ ನೆತ್ತರ ಮಾಡುವನು ಕುಣಿದಾಡುವನು ಬೆಳಕಿನ ಕಣ್ಣುಗಳಿ೦ದಾ ಸೂರ್ಯನು ನೋಡುವನು ಬಿಸಿಲೂಡುವನು ಚಿಲಿಪಿಲಿ ಹಾಡನು ಹಾಡಿಸಿ ಹಕ್ಕಿಯ ಗೂಡಿನ ಹೊರ ಹೊರ ದೂಡುವನು ಬಂಗಾರದ ಚೆಲು ಬಿಸಿಲ ಕಿರೀಟದ ಶೃಂಗಾರದ ತಲೆ ಎತ್ತುವನು ತೆಂಗಿನ ಕಂಗಿನ ತಾಳೆಯ ಬಾಳೆಯ ಅಂಗಕೆ ರಂಗನು ಮೆತ್ತುವನು ಮಾಡಿನ ಹುಲ್ಲಲಿ ಚಿನ್ನದ ಗೆರೆಯನು ಎಳೆಯುವನು ರವಿ ಹೊಳೆಯುವನು ಕೂಡಲ ಕೋಣೆಯ ಕತ್ತಲೆ ಕೊಳೆಯನು ತೊಳೆಯುವನು ರವಿ ಹೊಳೆಯುವನು ಮಲಗಿದ ಕೂಸಿನ ನಿದ್ದೆಯ ಕಸವನು ಗುಡಿಸುವನು ಕಣ್ ಬಿಡಿಸುವನು ಹುಲುಗಿಡ ಹೂವಿಗೆ ಪರಿ ಪರಿ ಬಣ್ಣವ ತೊಡಿಸುವನು ಹನಿ ತೊಡೆಸುವನು ಏರುವನು ರವಿ ಏರುವನು ಬಾನೊಳು ಸಣ್ಣಗೆ ತೋರುವನು ಏರಿದವನು ಚಿಕ್ಕವನಿರಬೇಕೆಲೆ ಎಂಬಾ ಮಾತನು ಸಾರುವನು ಕವಿ : ಪಂಜೆ ಮಂಗೇಶ ರಾಯರು