Friday, June 24, 2016

ವಸಂತ ಬಂದ, ಋತುಗಳ ರಾಜ ತಾ ಬಂದ - ಬಿ ಎಂ ಶ್ರೀ

ವಸಂತ ಬಂದ, ಋತುಗಳ ರಾಜ ತಾ ಬಂದ
ಚಿಗುರನು ತಂದ, ಹೆಣ್ಗಳ ಕುಣಿಸುತ ನಿಂದ,
ಚಳಿಯನು ಕೊಂದ, ಹಕ್ಕಿಗಳುಲಿಗಳೆ ಚೆಂದ,
ಕೂವೂ , ಜಗ್‌ ಜಗ್‌, ಪುವ್ವೀ, ಟೂವಿಟ್ಟವೂ !

ಕುರಿ ನೆಗೆದಾಟ, ಕುರುಬರ ಕೊಳಲಿನೂದಾಟ,
ಇನಿಯರ ಬೇಟ; ಬನದಲಿ ಬೆಳದಿಂಗಳೂಟ,
ಹೊಸ ಹೊಸ ನೋಟ, ಹಕ್ಕಿಗೆ ನಲಿವಿನ ಪಾಟ,
ಕೂವೂ , ಜಗ್‌ ಜಗ್‌, ಪುವ್ವೀ, ಟೂವಿಟ್ಟವೂ !

ಮಾವಿನ ಸೊಂಪು, ಮಲ್ಲಿಗೆ ಬಯಲೆಲ್ಲ ಕಂಪು
ಗಾಳಿಯ ತಂಪು, ಜನಗಳ ಜಾತ್ರೆಯ ಗುಂಪು,
ಕಿವಿಗಳಿಗಿಂಪು ಹಕ್ಕಿಗಳುಲುಹಿನ ಪೆಂಪು,
ಕೂವೂ , ಜಗ್‌ ಜಗ್‌, ಪುವ್ವೀ, ಟೂವಿಟ್ಟವೂ !

ಬಂದ ವಸಂತ - ನಮ್ಮಾ ರಾಜ ವಸಂತ !


ಇಂಗ್ಲಿಷ್ ಗೀತಗಳು’ ಸಂಕಲನದ್ದು. ಆಂಗ್ಲ ಕವಿ Thomas Nashe (1567–1601) ಬರೆದ ’Spring' ಕವಿತೆಯ ಅನುವಾದ.

No comments:

Post a Comment

ಒಂದು ಸಂಕೀರ್ಣ ವಿಷಯದ ಬಗ್ಗೆ ಸರಳವಾಗಿ ತಿಳಿದುಕೊಳ್ಳೋಣ ಬನ್ನಿ! -ರೋಹಿತ್ ಚಕ್ರತೀರ್ಥ

ಇಂದು ಪ್ರಧಾನಿ ಮೋದಿಯವರು ಮಾನ್ಯ ಜನರಿಗೆ ಸಾಮಾನ್ಯವಾಗಿ ಅರ್ಥವಾಗದ ಅಥವಾ ತಲೆಯ ಮೇಲಿಂದ ಹಾರಿಹೋಗುವ ಒಂದು ವಿಷಯದ ಬಗ್ಗೆ ಟ್ವೀಟ್ ಮಾಡಿದ್ದಾರೆ. ಅದರಲ್ಲಿ ಮೂರು ಸಂಗತಿಗಳು...