ವನಸುಮದೊಲೆನ್ನ ಜೀವನವು ವಿಕಸಿಸುವಂತೆ - ಡಿ ವಿ ಜಿ

ವನಸುಮದೊಲೆನ್ನ ಜೀವನವು ವಿಕಸಿಸುವಂತೆ
ಮನವನನುಗೊಳಿಸು ಗುರುವೆ, ಹೇ ದೇವಾ

ಜನಕೆ ಸಂತಸವೀವಘನನು ನಾನೆಂದೆಂಬ
ಎಣಿಕೆ ತೋರದೆ ಜಗದ ಪೊಗಳಿಕೆಗೆ ಬಾಯ್ ಬಿಡದೆ

ಕಾನನದಿ ಮಲ್ಲಿಗೆಯುಮೌನದಿಂ ಬಿರಿದು ನಿಜ
ಸೌರಭವ ಸೂಸಿ ನಲವಿಂತಾನೆಲೆಯ ಪಿಂತಿರ್ದು
ದೀನತೆಯ ತೋರಿ ಅಭಿ
ಮಾನವನು ತೊರೆದು ಕೃತಕೃತ್ಯತೆಯ ಪಡೆವಂತೆ

ಉಪಕಾರಿ ನಾನು ಎನ್ನುಪಕೃತಿಯು ಜಗಕೆಂಬ
ವಿಪರೀತ ಮತಿಯನುಳಿದು ವಿಪುಲಾಶ್ರಯವೀವ
ಸುಫಲ ಸುಮಭರಿತ ಪಾ-
ದಪದಂತೆ ನೈಜಮಾದೊಳ್ವಿನಿಂ ಬಾಳ್ವವೊಲು

- ಡಿ ವಿ ಜಿ


Comments

Popular posts from this blog

ಮುದ್ದಣ ಮನೋರಮೆಯ ಸಲ್ಲಾಪ - ಶ್ರೀವತ್ಸ ಜೋಶಿ

ಕನ್ನಡ ಕಾದಂಬರಿ ಮತ್ತು ಪುಸ್ತಕಗಳು

ಮೂಡುವನು ರವಿ ಮೂಡುವನು - ಪಂಜೆ ಮಂಗೇಶ ರಾಯರು