ಡಾ. ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿಗೆ ಪುಸ್ತಕ ಆಹ್ವಾನ
ಕುಂದಾಪುರ: ಮಣಿಪಾಲ ಅಕಾಡೆಮಿ ಆಡಳಿತಾಧಿಕಾರಿಯಾದ ಡಾ.ಹೆಚ್. ಶಾಂತಾರಾಮ್ ಅವರ ಹೆಸರಿನಲ್ಲಿ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜು ದತ್ತಿನಿಧಿ ಸ್ಥಾಪಿಸಿ 2010 ರಿಂದ ಕನ್ನಡದ ಅತ್ಯುತ್ತಮ ಸೃಜನಶೀಲ ಕೃತಿಗೆ ಪ್ರಶಸ್ತಿ ನೀಡುತ್ತಾ ಬಂದಿದೆ. ಈ ವರ್ಷ ಕಾದಂಬರಿಯನ್ನು ಮಾತ್ರ ಪರಿಗಣಿಸಲಿದ್ದು, ಜನವರಿ 2016 ರಿಂದ ಡಿಸೆಂಬರ್ 2017ರ ನಡುವೆ (ಎರಡು ವರ್ಷಗಳ ಅವಧಿಯಲ್ಲಿ) ಮೊದಲ ಆವೃತ್ತಿಯಾಗಿ ಪ್ರಕಟಗೊಂಡ ಕೃತಿಗಳನ್ನು ಆಹ್ವಾನಿಸಲಾಗಿದೆ. ಕಾದಂಬರಿಗಳ ನಾಲ್ಕು ಪ್ರತಿಗಳನ್ನು 30 ಎಪ್ರಿಲ್ 2018 ರೊಳಗೆ ಡಾ.ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಸಮಿತಿ, ಭಂಡಾರ್ಕಾರ್ಸ್ ಕಾಲೇಜು ಆವರಣ, ಕುಂದಾಪುರ 576201 ಈ ವಿಳಾಸಕ್ಕೆ ಕಳುಹಿಸಿಕೊಡುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08254 – 230369 ಇದನ್ನು ಸಂಪರ್ಕಿಸಬೇಕಾಗಿ ಕೋರಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಆಗಸ್ಟ್ ತಿಂಗಳಿನಲ್ಲಿ ನಡೆಯಲ್ಲಿದ್ದು, ಹದಿನೈದು ಸಾವಿರ ರೂಪಾಯಿಯೊಂದಿಗೆ ಬೆಳ್ಳಿ ಫಲಕ ನೀಡಲಾಗುವುದು ಎಂದು ಡಾ. ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಸಮಿತಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ. -ಪ್ರಕಟಣೆಯ ಕೃಪೆಗಾಗಿ- ಈ ಪತ್ರಿಕಾ ಪ್ರಕಟಣೆಯನ್ನು ರಾಜ್ಯಮಟ್ಟದ ವ್ಯಾಪ್ತಿಯಲ್ಲಿ ಪ್ರಕಟಿಸಬೇಕಾಗಿ ವಿನಂತಿ. ಅಲ್ಲದೇ ತಮ್ಮ ಪ್ರತಿಷ್ಠಿತ ಪತ್ರಿಕೆಯಿಂದ ರಾಜ್ಯಾದ್ಯಂತ ಮಾಹಿತಿ ದೊರೆತಂತಾಗುತ್ತದೆ ಎಂಬುದು ಕಳಕಳಿಯ ವಿನಂತಿ.