Posts

Showing posts from 2022

ಶಿಕಾರಿ ಕಾದಂಬರಿ - ಯಶವಂತ ಚಿತ್ತಾಲ - 2

ನಸುಕಿನ ಮಬ್ಬು ಹಾಗೂ ತಂಪು ಎರಡೂ ಬರವಣಿಗೆಗೆ ಸ್ಫೂರ್ತಿ ನೀಡುವಂತವುಗಳು. ಬೆಳಗಿನ ಜಾವದ ಮುಹೂರ್ತ ಸೃಜನಶೀಲತೆಗೆ ಅತ್ಯಂತ ಉತ್ತೇಜಕವಾದದ್ದು. ನಿತ್ಯವ್ಯವಹಾರಗಳಲ್ಲಿ, ಅವುಗಳಿಂದಾಗಿ ಹುಟ್ಟುವ ರಾಗದ್ವೇಷಗಳಲ್ಲಿ, ಆತಂಕ ದುಗುಡಗಳಲ್ಲಿ ತೊಡಕಿಕೊಂಡಿರದ ಮನಸ್ಸಿನ ಯಾವುದೋ ಭಾಗ ಇಂತಹ ಹೊತ್ತಿನಲ್ಲಿ ಜಾಗೃತವಾಗಿರುತ್ತದೆ. ಸೃಷ್ಟಿ ಕಾರ್ಯದಲ್ಲಿ ತೊಡಗಿರುವ ಮನಸ್ಸಿನ ಅಂಶ ನಿತ್ಯ ವ್ಯವಹಾರದಲ್ಲಿ ತೊಡಗಿರುವ ಮನಸ್ಸಿನಿಂದ ತೀರ ಬೇರೆಯಾದದ್ದು. ✍ ಯಶವಂತ ಚಿತ್ತಾಲ {'ಶಿಕಾರಿ' ಕಾದಂಬರಿ}

ಶಿಕಾರಿ ಕಾದಂಬರಿ - ಯಶವಂತ ಚಿತ್ತಾಲ

ಬರೇ ಅವಿತುಕೊಳ್ಳುವ ತಾಣ ಹುಡುಕುತ್ತ ಓಡುತ್ತಿರಬೇಡ. ಎಲ್ಲ ಪರಾರಿಗೂ ಕೊನೆಯೆಂಬುದಿರಬೇಕು. ಒಮ್ಮೆಯಾದರೂ ಸ್ವಸ್ಥಾನಕ್ಕೆ ಮರಳುವ ಧೈರ್ಯ ಮಾಡಬೇಕಪ್ಪಾ. ರಾತ್ರಿ ಮಾಡಿಕೊಂಡ ನಿರ್ಧಾರವನ್ನು ದಿನಬೆಳಗಾಗುವುದರಲ್ಲಿ ಸಡಿಲುಗೊಳ್ಳಲು ಬಿಡಬಾರದು. ಬಿಗಿ ಹಿಡಿ. ಬಿಗಿಯಾಗು. ಗಟ್ಟಿಯಾಗು. ಕವಚ ಕುಂಡಲಗಳನ್ನು ಕಳಚು. ನೀನೇ ನಿನ್ನ ಸುತ್ತ ಬೆಳೆಯಿಸಿಕೊಂಡ ಚಿಪ್ಪನ್ನೊಡೆದು ಹೊರಕ್ಕೆ ಬರಬೇಕು. ತೆರೆ. ತೆರೆದುಕೋ.... ✍ ಯಶವಂತ ಚಿತ್ತಾಲ {'ಶಿಕಾರಿ' ಕಾದಂಬರಿ}