ಕನ್ನಡ ಗಾದೆಗಳು

೧. ಕುಂಬಾರನ ಮಗಳು ಲಾಭ ಬಂದ ಹೊರತು ಮಡಿಕೆ ಒಡೆಯುವುದಿಲ್ಲ.
೨. ಕಾಗೆಗೆ ಯಜಮಾನನ ಸ್ಥಾನ ಕೊಟ್ಟರೆ ಮನೆ ತುಂಬಾ ಪಿಷ್ಟ.
೩. ಇತರರ ಕಣ್ಣಿನ ಕಸ ಕಾಣುವುದು, ತನ್ನ ಕಣ್ಣಿನ ಕಸ ಕಾಣುವುದಿಲ್ಲ.
೪. ತನ್ನ ಮೊಸರನ್ನು ಯಾರೂ ಹುಳಿ ಅನ್ನುವುದಿಲ್ಲ.
೫. ನಾನು ಅಗೆಯುವಲ್ಲಿ ಕಲ್ಲು, ಅಜ್ಜ ಅಗೆಯುವಲ್ಲಿ ಮಣ್ಣು.
೬. ದಡ್ಡ ಮನುಷ್ಯ ನೆಲಕ್ಕೆ ಭಾರ, ಅನ್ನಕ್ಕೆ ಖಾರ.
೭. ದಡ್ಡನಿಗೆ ಹಗಲು ಕಳೆಯುವುದಿಲ್ಲ, ಒಳ್ಳೆಯವನಿಗೆ ರಾತ್ರಿ ಸಾಲುವುದಿಲ್ಲ.
೮. ಹುಲಿಯ ಬಣ್ಣವನ್ನು ಮೆಚ್ಚಿ, ನರಿ ತನ್ನ ಕೂದಲನ್ನು ಭಸ್ಮ ಮಾಡಿಕೊಂಡಂತೆ.
೯. ಬಾಯಲೆಲ್ಲಾ ವೇದಾಂತ, ಮಾಡುವುದೆಲ್ಲಾ ರಾದ್ಧಾಂತ.
೧೦. ತಿನ್ನಲು, ಉಣ್ಣಲು ಇದ್ದರೆ ಯಾವತ್ತೂ ನೆಂಟರು.
೧೧. ಶರೀರಕ್ಕೆ ಸುಖ, ಹೊಟ್ಟೆಗೆ ದುಃಖ.
೧೨. ನೂರಾರು ರೋಗಿಗಳನ್ನು ಕೊಂದು ಒಬ್ಬ ವೈದ್ಯ ಆದಂತೆ !
೧೩. ವಿವಿಧ ರೋಗಗಳಿಗೆ ಮದ್ದಿವೆ, ಹೊಟ್ಟೆ ಉರಿಗೆ ಮದ್ದಿಲ್ಲ.
೧೪. ಅಡಿಕೆಕಾಯಿಯನ್ನು ಚೀಲದೊಳಗೆ ಹಾಕಬಹುದು, ಮರ ಆದ ನಂತರ ಹಾಕಬಹುದೇ?
೧೫. ಲಾಭ ನೋಡಿ ಬಾಳೆ ಹಣ್ಣು ತಿಂದಂತೆ.
೧೬. ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು.
೧೭. ಹತ್ತು ಮಕ್ಕಳ ತಾಯಿ ದಾರಿಯಲ್ಲಿ ಸಿಕ್ಕಿದ್ದನ್ನು ತಿಂದಂತೆ.
೧೮. ತಾಯಿಯನ್ನು ಹೊಡೆಯಬಾರದು, ಗುಬ್ಬಿಯ ಗೂಡನ್ನು ತೆಗೆಯಬಾರದು.
೧೯. ನಾಯಿಯು ನಮ್ಮನ್ನು ಕಚ್ಚಿದರೆ ನಾಯಿಯನ್ನು ಕಚ್ಚಲು ನಮ್ಮಿಂದ ಆಗುವುದೇ?
೨೦. ಬೆಲ್ಲ ಇದ್ದಲ್ಲಿ ನೊಣ ತಿರುಗಾಡಿದಂತೆ.
೨೧. ಹುಣಸೆ ಹುಳಿಯೆಂದು ಅಂಬಡೆ ತಿಂದ ಹಾಗೆ.
೨೨. ಮೃತ್ಯು ಬಂದ ಮೇಲೆ ವೈದ್ಯ ಬಂದ.
೨೩. ಶಸ್ತ್ರದಿಂದಾದ ಗಾಯ ಮಾಯುತ್ತದೆ, ನಾಲಿಗೆಯಿಂದಾದ ಗಾಯ ಮಾಯುವುದಿಲ್ಲ.
೨೪. ಚರ್ಮ ಹೋದರೂ ಪರವಾಗಿಲ್ಲ, ಕಾಸು ಹೋಗಬಾರದು ಎಂದಂತೆ.
೨೫. ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ ಹೇಳಿದ ಹಾಗೆ.
೨೬. ರಾವಣನ ಮಾತಿಗೆ ಮನಸೋತವ, ರಾಮನ ಮಾತಿಗೆ ಜಾಣನಾಗುವನೇ?
೨೭. ಮನೆಯೆಂಬ ಮರ ಮುರಿಯಬಾರದು, ಮನಸ್ಸೆಂಬ ಮಾರ್ಗ ಕತ್ತರಿಸಬಾರದು.
೨೮. ದುಷ್ಟರ ಸಂಗದಿ ನೆರಳು ಕೊಯ್ಯದೆ ಬಿಡದು ಕೊರಳು.
೨೯. ನೀನಾಗದೆ ರಣಹೇಡಿ, ಕೀರ್ತಿ ಪಡೆ ಪ್ರಾಣ ನೀಡಿ.
೩೦. ನಿನ್ನಲ್ಲಿ ನೀ ಹುಡುಕು, ಅರಿಷಡ್ವರ್ಗಗಳ ಹೊರ ಹಾಕು.
೩೧. ಸಜ್ಜನರ ಮಾತು ಸಿಹಿ, ದುರ್ಜನರ ತುತ್ತು ಕಹಿ.
೩೨. ಬುದ್ಧಿ ಇದ್ದವನಲ್ಲಿ ಶ್ರದ್ಧೆ, ನಿದ್ದೆ ಬಾರದವನಲ್ಲಿ ವಿದ್ಯೆ.
೩೩. ಉಗಮವಾಗದಿರಲಿ ಹಿಂಸೆ, ಹೆಚ್ಚಿಗೆಯಾಗದಿರಲಿ ಆಸೆ.
೩೪. ನಾಳೆ ಎಂದವನಿಗೆ ಹಾಳು, ಇಂದೇ ಎಂದವನಿಗೆ ಬೀಳಾಗದು ಬಾಳು.
೩೫. ಆಳಾಗದವ ಅರಸನಲ್ಲ, ಹಟ ಹಿಡಿದವ ಸಾಮ್ರಾಟನಲ್ಲ.
೩೬. ಉಂಡಿದ್ದು ಹೊಟ್ಟೆಗಾಗಿ, ಮಾಡಿದ್ದು ಬಟ್ಟೆಗಾಗಿ.
೩೭. ವಿಶ್ವಾಸಿ ನೀನಾಗು, ಘಾತುಕಕ್ಕೆ ಬಗ್ಗದೆ ಮುನ್ನುಗ್ಗು.
೩೮. ಹೆಂಡತಿಯ ಮಾತು ಆಗದಿರಲಿ ಕೊಯ್ದುಕೊಳ್ಳುವಂತೆ ಕತ್ತು.
೩೯. ಕಣ್ಣಿಗೆ ಕಂಡದ್ದೆಲ್ಲಾ ನುಣ್ಣಗಿರುವುದಿಲ್ಲ.
೪೦. ನಿನ್ನದಲ್ಲ ಸರ್ವ ಆಸ್ತಿ, ಒಳ್ಳೆಯದಲ್ಲ ಗರ್ವ ಜಾಸ್ತಿ.
೪೧. ಮನಸ್ಸು ಇಲ್ಲದಿದ್ದರೆ ಗಟ್ಟಿ, ಎಲ್ಲವೂ ಮೂರಾಬಟ್ಟಿ.
೪೨. ಮಾಡಿ ಉಣ್ಣು ಬೇಡಿದಷ್ಟು, ತಗಾದೆ ಮಾಡದೇ ಉಣ್ಣು ನೀಡಿದಷ್ಟು.
೪೩. ಒಣ ಮಾತು ಒಣಗಿದ ಹುಲ್ಲು, ಒಳ್ಳೆಯ ಮಾತು ಬೆಳ್ಳಗಿನ ಹಾಲು.
೪೪. ತತ್ವದಲ್ಲಿ ಸತ್ವ ಹುಡುಕು, ವ್ಯಥೆಯಲ್ಲಿ ಕಥೆ ಹುಡುಕು.
೪೫. ಇಲಿ ಸಿಕ್ಕರೆ ಬೆಕ್ಕು ಆಗುವುದು ಹುಲಿ.
೪೬. ಕಾಗೆಯ ಕೈಯಲ್ಲಿ ಕೊಟ್ಟರೆ ಕಾರಭಾರ, ಅದು ಮಾಡುವುದೇ ಉಪಕಾರ?
೪೭. ಹೋಗುವುದು ಮೂಡಿದ ಹೊತ್ತು, ಹೋಗೋದಿಲ್ಲ ಆಡಿದ ಮಾತು.
೪೮. ದೈವ ಕಾಡುವುದು ವಿಧಿಗಾಗಿ, ನೀರು ಸಮುದ್ರ ಸೇರುವುದು ನದಿಗಾಗಿ.
೪೯. ಬಡವರ ಕಣ್ಣೀರಿಗೆ ಕರುಣೆ ಬಂದೀತೆ ಬೆಣ್ಣೆಗೆ?
೫೦. ಸಲುಗೆ ಕೊಟ್ಟರೆ ಸಾಕೂ ಹೆಗ್ಗಣವೂ ಸಹ ಏರುವುದು ಹೆಗಲಿಗೆ.
೫೧. ಹುಟ್ಟಿದ ಮಗು ತರುವುದು ತೊಟ್ಟಲಿಗೆ ನಗು.
೫೨. ಸ್ವಾರ್ಥ ಉಳಿಸಿದವ ಪಾಪಾತ್ಮ, ನಿಸ್ವಾರ್ಥ ಗಳಿಸಿದವ ಪುಣ್ಯಾತ್ಮ.
೫೩. ಬೇಸರವಿರಬಾರದು, ಅವಸರ ಮಾಡಬಾರದು.
೫೪. ಎಚ್ಚರ ತಪ್ಪಿ ಮಾತನಾಡಬಾರದು, ಹುಚ್ಚನಂತೆ ವರ್ತಿಸಬಾರದು.
೫೫. ಬಿಡುಕು ಮಾತಿಗೆ ಮಾಡಿಕೊಳ್ಳದಿರು ಕೆಡುಕು.
೫೬. ಹಾಲಿಗೆ ಹುಳಿ ಹಿಂಡಿದರೆ ಮೊಸರು, ಮಣ್ಣಿಗೆ ನೀರು ಹಾಕಿದರೆ ಕೆಸರು.
೫೭. ಗದ್ದೆ ಸುಟ್ಟರೂ ಹಾಳಾಗದು ಗಾದೆ.
೫೮. ನಿನ್ನಲ್ಲಿರುವ ಮಾನ ನಿನಗೆ ಕೊಡುವುದು ಬಹುಮಾನ.
೫೯. ಮಾಟ ಮಾಡಿದೋನ ಮನೆ ಹಾಳು.
೬೦. ಒಬ್ಬರ ಕೂಳು ಇನ್ನೊಬ್ಬರ ಕುತ್ತು.
೬೧. ಒಳಿತಾಗಿ ಮುಗಿದಿದ್ದೆಲ್ಲವೂ ಒಳ್ಳೆಯದೇ.
೬೨. ಹೊಳೆಯುವುದೆಲ್ಲಾ ಚಿನ್ನವಲ್ಲ.
೬೩. ಓಡಿದವನಿಗೆ ಓಣಿ ಕಾಣಲಿಲ್ಲ, ಹಾಡಿದವನಿಗೆ ಹಾದಿ ಕಾಣಲಿಲ್ಲ.
೬೪. ಬರಿಗೈಯವರ ಬಡಿವಾರ ಬಹಳ.
೬೫. ಎಲ್ಲ ಕೆಡುಕಿಗೂ ಮೂಲ ಹೊಟ್ಟೆಕಿಚ್ಚು.
೬೬. ಸ್ವರ್ಗದಲ್ಲಿ ಸೇವೆಗೈಯುವುದಕ್ಕಿಂತ ನರಕದಲ್ಲಿ ಆಳುವುದೇ ಲೇಸು.
೬೭. ಅರೆಗೊಡದ ಅಬ್ಬರವೇ ಬಹಳ.
೬೮. ಮರಿ ಮಾಡುವ ಮೊದಲೇ ಮೊಟ್ಟೆಗಳನ್ನು ಎಣಿಸಬೇಡ.
೬೯. ಆಪತ್ತಿಗಾದವನೇ ನಿಜವಾದ ಗೆಳೆಯ.
೭೦. ಇಂದಿನ ಸೋಲು ನಾಳಿನ ಗೆಲುವು.
೭೧. ಧೈರ್ಯವಿದ್ದವನಿಗೆ ದೈವವೂ ಅನುಕೂಲ.
೭೨. ದುಡ್ಡಿಗಿಂತ ದೊಡ್ಡ ಹೆಸರೇ ಉತ್ತಮ.
೭೩. ಪ್ರಯತ್ನಕ್ಕೆ ಪರಮೇಶ್ವರನೂ ಸಹಾಯ ಮಾಡುವನು.
೭೪. ಉತ್ತಮವಾದ ನಗು ನೇಸರನ ಮಗು.
೭೫. ಸದಾಚಾರಣೆಯ ಉದಾಹರಣೆಯೇ ಉತ್ತಮವಾದ ಉಪದೇಶ.
೭೬. ಪ್ರಾಮಾಣಿಕತೆಯಿಂದಲೇ ಪಾರಮಾರ್ಥ.
೭೭. ಕರೆದುಣ್ಣುವ ಕೆಚ್ಚಲನ್ನು ಕೊರೆದುಂಡ ಹಾಗೆ.
೭೮. ಉದ್ದುದ್ದ ಮಾತಿನವರ ಮೊಳಕೈ ಮೊಂಡ.
೭೯. ಕಿಡಿ ಸಣ್ಣದಾದರೂ ಕಾಡೆಲ್ಲವನ್ನು ಸುಡುತ್ತದೆ.
೮೦. ನೋಡಿ ನಡೆದವರಿಗೆ ಕೇಡಿಲ್ಲ.
೮೧. ಕೃತಿ ಇಲ್ಲದ ಮಾತು ಕಸ ಬೆಳೆದ ತೋಟವಿದ್ದಂತೆ.
೮೨. ಚಿಂತೆ ಮಾಡಿದರೆ ಸಂತೆ ಸಾಗೀತೆ?
೮೩. ದುಡ್ಡನ್ನು ಕಾದಿಟ್ಟುಕೊಳ್ಳದವನು ಹಣವಂತನು ಹೇಗೆ ಆದಾನು?
೮೪. ಮಕ್ಕಳ ಬಾಯಿಗೆ ಹಣ್ಣು ಕೊಟ್ಟು ಮಣ್ಣು ಬಿಡಿಸು.
೮೫. ತಾಯಿ ಬೇಕು ಇಲ್ಲವೇ ಬಾಯಿ ಬೇಕು.
೮೬. ಸೀರಿಗೇಡಿಗೆ ಸೀರೆ ಉಡಿಸಿದರೆ ಕೆರಿ ದಂಡಿ ಮ್ಯಾಗ ನಿಂತು ಕೇಕೆ ಹಾಕಿದಳು.
೮೭. ಪೀತಾಂಬರ ಉಟ್ಟರೂ ಕೊತ್ತಂಬರಿ ಮಾರೋದು ತಪ್ಪಲಿಲ್ಲ.
೮೮. ಪೇಚಾಟದಲ್ಲಿ ಬಿದ್ದವನಿಗೆ ಪೀಕಲಾಟವೇ ಗತಿ.
೮೯. ಹಾರುವನ ತೊತ್ತಾಗಬೇಡ ಗಾಣಿಗನ ಎತ್ತಾಗಬೇಡ.
೯೦. ಮಂತ್ರಕ್ಕಿಂತ ಉಗುಳೇ ಹೆಚ್ಚು.
೯೧. ಹಂಪಿಗೆ ಹೋಗುವುದಕ್ಕಿಂತ ಕೊಂಪೆಯಲ್ಲಿರುವುದೇ ಲೇಸು.
೯೨. ಎಡಗಣ್ಣು ಹೊಡೆದರೆ ನಾರಿಗೆ ಶುಭ.
೯೩. ಊಟವೆಂದರೆ ಊರು ಬಿಟ್ಟುಹೋದಂತೆ.
೯೪. ಎಲ್ಲ ಮುಗಿದ ಮೇಲೆ ತೀರ್ಥಯಾತ್ರೆಗೆ ಹೊರಟಂತೆ.
೯೫. ಒಗ್ಗಟ್ಟಿಲ್ಲದ ಊರಲ್ಲಿ ಒಪ್ಪತ್ತೂ ಇರಬೇಡ.
೯೬. ಒಕ್ಕಣ್ಣ ತನಗೆ ಹತ್ತು ಕಣ್ಣು ಅಂತಿದ್ನಂತೆ.
೯೭. ಕಣ್ಣಿಗೂ ಮೂಗಿಗೂ ಮೂರು ಗಾವುದ.
೯೮. ಕಲಹವೇ ಕೇಡಿಗೆ ಮೂಲ.
೯೯. ಮಾತಿಗೆ ಸಿಕ್ಕಿದರೆ ಮಳೆಗೆ ಸಿಕ್ಕಂತೆ.
೧೦೦. ನಾಲಿಗೆಯಿಂದ ಕೆಳಗೆ ಬಿದ್ದರೆ ನರಕ.
೧೦೧. ಮಾಡಿದ ರಾಗಿ ಕೊಟ್ರೂ ಮೂರ್ಖನ ಸಹವಾಸ ಬೇಡವೆಂದಂತೆ.
೧೦೨. ಲೋಕ ತಿಳೀಬೇಕು ಲೆಕ್ಕ ಕಲೀಬೇಕು.
೧೦೩. ಸಾಲ್ಗಾರ ಸುಮ್ಮನಿದ್ರು ಸಾಕ್ಷಿಗಾರ ಸುಮ್ಮನಿರ.
೧೦೪. ಹಲ್ಲಿರುವ ತನಕ ಊಟ ಕಣ್ಣಿರುವ ತನಕ ನೋಟ.
೧೦೫. ದಕ್ಷಿಣೆಗಾದರೆ ಮಾತು ಹಿಡಿದಾನು, ಮಂತ್ರಕ್ಕಾದರೆ ಬೆನ್ನು ತೋರ್ಸಿಯಾನು.
೧೦೬. ಭಾವಿಸಿದರೆ ಬಳಗ, ಕೂಡಿಸಿದರೆ ಕಾಸು.
೧೦೭. ಭಾಷೆ ಕೊಟ್ಟವನು ಪೋಷಣೆ ಮಾಡನೇ?
೧೦೮. ಭಾಷೆ ತಿಳಿಯದಿದ್ದರೂ ಹಾಸ್ಯಕ್ಕೆ ಕಡಿಮೆಯಿಲ್ಲ.
೧೦೯. ಭಿಕಾರಿಯಾದವ ಕಾಶಿಗೆ ಹೋದರೂ, ಭಿಕ್ಷಾನ್ನವಲ್ಲದೆ ಪಕ್ವಾನ್ನ ಉಂಡಾನೇ?
೧೧೦. ಮಣದಷ್ಟು ಮಾತಿಗಿಂತ ಕಣದಷ್ಟು ಕೆಲಸ ಲೇಸು.
೧೧೧. ಮಳೆ ನೀರನ್ನು ಬಿಟ್ಟು ಮಂಜಿನ ನೀರಿಗೆ ಕೈಯೊಡ್ಡಿದ ಹಾಗೆ.
೧೧೨. ದುಡಿಯೋ ತನಕ ಮಡದಿ.
೧೧೩. ದೂರವಿದ್ದ ಮಗನಿಗೂ, ಹತ್ತಿರವಿದ್ದ ಮಗನಿಗೂ ಸರಿಬಾರದು.
೧೧೪. ದೊಂಬರಾಟ ಆಡಬಹುದು ಮಕ್ಕಳಾಟ ಆಡೊಕ್ಕಾಗಲ್ಲ.
೧೧೫. ನನಗೆ ನಿನಗೆ ಹಿತ ಇಲ್ಲ, ನಿನ್ನ ಬಿಟ್ಟು ನನಗೆ ಗತಿ ಇಲ್ಲ ಎಂದಂತೆ.
೧೧೬. ನೆಂಟ್ರು ಮನೆಗೆ ಮೂಲ, ಕುಂಟೆತ್ತು ಹೊಲಕ್ಕೆ ಮೂಲ.
೧೧೭. ನರಗುಂದಕ್ಕೆ ಹೊದರೆ ಕುರು ತಪ್ಪೀತೆ?
೧೧೮. ನಾಮವಿದ್ದವನಿಗೆ ಕಾಮ ಕಡಿಮೆಯೇ?
೧೧೯. ಹಲ್ಲಿ ಶಕುನ ಕೇಳಿ ಕಲ್ಲಿಂದ ಹೊಡೆಸಿಕೊಂಡಂತೆ.
೧೨೦. ಸಾಲಗಾರನ ಹೆಂಡತಿ ಶೋಕಿಮಾಡಿದರೇನು?
೧೨೧. ವೈಕುಂಠಕ್ಕೆ ಹೋಗಲಿಕ್ಕೆ ಕುಂಟು ದಾಸಯ್ಯನ ಮಧ್ಯಸ್ತಿಕೆಯೇ?
೧೨೨. ಮೂರು ಕಾಸಿನ ಮಾಂಸವಿಲ್ಲದಿದ್ದರೂ, ಮಾತು ಮಾತ್ರ ಜೋರು.
೧೨೩. ರೊಕ್ಕ ಕೊಟ್ಟು ರಟ್ಟೆ ಮುರಿಸಿಕೊಂಡಂತೆ.
೧೨೪. ಜಾತಿ ನೀತಿಯಿಲ್ಲ, ಮಾರಿಗೆ ಕರುಣೆ ಇಲ್ಲ.
೧೨೫. ಹೂಡಿದರೆ ಒಲೆ, ಮಡಿದರೆ ಮನೆ.
೧೨೬. ಹತ್ತು ಜನರ ಹುಲ್ಲು ಕಡ್ಡಿ ಒಬ್ಬನಿಗೆ ತಲೆ ಹೊರೆ.
೧೨೭. ಪಂಗಡವಾದವ ಸಂಗಡ ಬಂದಾನೆ?
೧೨೮. ಅಗ್ನಿಗೆ ತಂಪುಂಟೆ, ವಿಷಕ್ಕೆ ರುಚಿಯುಂಟೆ, ದಾರಿಕೋರನಿಗೆ ಧರ್ಮವುಂಟೆ?
೧೨೯. ಬಸವನ ಹಿಂದೆ ಬಾಲ, ಲಗ್ನದ ಹಿಂದೆ ಸಾಲ.
೧೩೦. ತುಪ್ಪ ತಿಂದ ಮಾತಿಗಷ್ಟು ತಪ್ಪು ಮಾತು ಬಂತು.
೧೩೧. ತೇರಾದ ಮೇಲೆ ಜಾತ್ರೆ ಸೇರಿತು.
೧೩೨. ಆಸೆಗೆ ತಕ್ಕ ಪರಿಶ್ರಮ ಬೇಕು.
೧೩೩. ಎಲ್ಲರಿಗೂ ಹಿಡಿಸುವ ಸಂಪ್ರದಾಯ ಯಾವುದೂ ಇಲ್ಲ.
೧೩೪. ಏನಾದರೂ ಆಗು ಮೊದಲು ಮಾನವನಾಗು.
೧೩೫. ಬಕ್ಕಳ ಹೊನ್ನಿದ್ದರೆ ಊರೆಲ್ಲಾ ನೆಂಟರು.
೧೩೬. ಕಷ್ಟಗಳು ಹೇಳದೆ ಕೇಳದೆ ಬರೋ ನೆಂಟರ ಹಾಗೆ.
೧೩೭. ಕರ್ಪೂರವ ತಿಪ್ಪೇಲಿಟ್ರೂ ತನ್ನ ಸುವಾಸನೆ ಬಿಡದು.
೧೩೮. ಗಣೇಶನ್ನ ಮಾಡು ಅಂದ್ರೆ ಅವರ ಅಪ್ಪನ ಮಾಡಿದನಂತೆ.
೧೩೯. ಜ್ಞಾನಿ ಬಂದರೆ ಗೌರವಿಸು, ಹೀನ ಬಂದರೆ ತ್ಯಜಿಸು.
೧೪೦. ಚಿನ್ನದ ಸೂಜಿ ಅಂತ ಕಣ್ಣು ಚುಚ್ಚಿಕೊಂಡಾರೆ?
೧೪೧. ಟೊಳ್ಳು ಮಾತು ಸುಳ್ಳಿಗಿಂತ ಕಡೆ.
೧೪೨. ಠಕ್ಕು ಇರುವವನಿಗೆ ಠಿಕಾಣಿ ಸಿಗದು.
೧೪೩. ತೂಕ ಸರಿಯಿದ್ದರೆ ವ್ಯಾಪಾರ.
೧೪೪. ನಡೆದಷ್ಟು ನೆಲ, ಪಡೆದಷ್ಟು ಫಲ.
೧೪೫. ಮುಳ್ಳು ಬಿತ್ತಿದವನಿಗೆ ನೀನು ಹೂಬಿತ್ತು.
೧೪೬. ಪುಷ್ಪ ಡೊಂಕಾದರೇನು, ಪರಿಮಳ ಡೊಂಕೇ?
೧೪೭. ಬುದ್ಧಿಯಿಲ್ಲದವನ ಐಶ್ವರ್ಯ, ಕಡಿವಾಣ ಇಲ್ಲದ ಕುದುರೆಯಂತೆ.
೧೪೮. ರಸ್ತೇಲಿ ಕುತ್ಕೊಂಡು ಗಳಗಳನೆ ಅತ್ತರೆ ಹೋದ ಪ್ರಾಯ ಬಂದೀತೆ?
೧೪೯. ವೈರತ್ವ ನಾಶಕ್ಕೆ ವಾತ್ಸಲ್ಯವೇ ಮದ್ದು.
೧೫೦. ಸಂತೋಷವೇ ಯೌವನ, ಚಿಂತೆಯೇ ಮುಪ್ಪು.
೧೫೧. ಹಸಿದವರ ಮುಂದೆ ಭಾಷಣ ಮಾಡಿದ ಹಾಗೆ.
೧೫೨. ಹಳೆಯ ಕೋಟು ಧರಿಸಿ, ಹೊಸ ಪುಸ್ತಕ ಕೊಳ್ಳಿ.
೧೫೩. ಊಟಕ್ಕೆ ಮೊದಲು ಉಪ್ಪಿನ ಕಾಯಿ, ಮಾತಿಗೆ ಮೊದಲು ಗಾದೆ.
೧೫೪. ಆರಿದ್ರೆ ಮಳೆಯಲ್ಲಿ ಆದವನೇ ಒಡೆಯ.
೧೫೫. ಸ್ವಾತಿ ಮಳೆ ಬಿದ್ರೆ ಮುತ್ತಿನಂಥ ಜೋಳ.
೧೫೬. ಕುಲ ಬಿಟ್ಟರೂ ಛಲ ಬಿಡಬೇಡ.
೧೫೭. ಹೊಸ ಮಂಜು ಹಳೆಯದನ್ನು ಕೊಚ್ಚದಿದ್ದೀತೆ.
೧೫೮. ಕೆಟ್ಟದಲ್ಲದ ಮೇಲೆ ಪಿಸುಗುಟ್ಟೋದು ಯಾಕೆ?
೧೫೯. ಇಬ್ಬರು ಒಪ್ತಾರೆ ಮೂವರು ವಿರೋಧಿಸುತ್ತಾರೆ ಎಂದಂತೆ!
೧೬೦. ಮನೇಲಿ ಕತ್ತಲೆ, ಪರರಿಗೆ ದೀಪ ದಾನ ಮಾಡಿದ.
೧೬೧. ಇರೋದು ಕಲಿಸುತ್ತೆ, ಇಲ್ಲದ್ದು ನಾಚಿಸುತ್ತೆ.
೧೬೨. ಒಬ್ಬನ ಗಡ್ಡಕ್ಕೆ ಬೆಂಕಿ ಹತ್ತಿದಾಗ, ಮತ್ತೊಬ್ಬ ಕೈ ಕಾಯಿಸಿದ.
೧೬೩. ಮನೆಯೊಡತಿ ಮುಖದ ಮೇಲೆ ಉಗುಳಿದರೂ ಹೊರಗೆ ಬಂದು ನಾನು ಬೆವತಿದ್ದೇನೆ ಅಂದಂತೆ!
೧೬೪. ಹುಲಿ ಹಸಿದಾಗ ಹುಲ್ಲು ತಿಂದೀತೆ?
೧೬೫. ಕುದುರೆ ಕುರುಡಾದರೂ ಕಡಿಮೆಯೇನೂ ತಿನ್ನುವುದಿಲ್ಲ!
೧೬೬. ದುರುಳನಿಂದಲೇ ದುರುಳುತನ.
೧೬೭. ಅಕಾಲದಲ್ಲಿ ಬೆಳೆಯಿದ್ದಂತೆ ವೃದ್ಧಾಪ್ಯದಲ್ಲಿ ಮಕ್ಕಳು.
೧೬೮. ನೆಂಟರನ್ನು ಲಕ್ಷಿಸದಿರಲು, ಸ್ನೇಹಿತರನ್ನು ಅಲಕ್ಷಿಸದಿರು.
೧೬೯. ಕಸದಲ್ಲಿ ಮಲಗಿ ಅರಮನೆ ಕನಸು ಕಂಡಂತೆ.
೧೭೦. ಮಧ್ಯಾಹ್ನದ ಊಟವಾದಮೇಲೆ ಮುಳ್ಳಿನ ಮೇಲಾದರೂ ಮಲಗು, ರಾತ್ರಿ ಊಟವಾದ ಮೇಲೆ ಅರ್ಧ ಮೈಲಿ ನಡೆ.
೧೭೧. ಹುಟ್ಟಿನಿಂದಲೇ ವಕ್ರವಾದದ್ದು, ಪೋಷಣೆಯ ಮೂಲಕ ಸರಿಯಾದಂತೆ.
೧೭೨. ಬಾವಿಯ ಬಾಯನ್ನು ಮುಚ್ಚಬಹುದು, ಜನಗಳ ಬಾಯನ್ನಲ್ಲ.
೧೭೩. ಆಳವಿಲ್ಲದ ನೀರು ಭಾರಿ ಶಬ್ದ ಮಾಡೀತು.
೧೭೪. ತನ್ನ ಯಂತ್ರಕ್ಕೆ ಎಣ್ಣೆ ಹಾಕಲೂ ಆಗದವ ಇನ್ನೊಬ್ಬರಿಗೆ ಉಪದೇಶ ನೀಡಿದಂತೆ.
೧೭೫. ಪಾದಕ್ಕೆ ತಕ್ಕಂತೆ ಚಪ್ಪಲಿ ತಗೊ, ಬಾಗಿಲಿನೆತ್ತರಕ್ಕೆ ತಕ್ಕಂತೆ ಬಗ್ಗಿ ನಡಿ.
೧೭೬. ಮನೆಯ ಕಷ್ಟಕ್ಕೆ ನೆರೆಮನೆಯವರು ಹೊಣೆ ಏನು?
೧೭೭. ಮನೆಯ ಬಾಗಿಲಿಗೆ ಬೀಗ ಹಾಕಿಕೋ, ಮನದ ಬಾಗಿಲನ್ನು ತೆರೆದಿಡು.
೧೭೮. ನಗುವೇ ಆರೋಗ್ಯದ ಗುಟ್ಟು.
೧೭೯. ಈರುಳ್ಳಿ, ಬೆಳ್ಳುಳ್ಳಿಯನ್ನು ತಿನ್ನು, ರೋಗವನ್ನು ದೂರವಿಡು.
೧೮೦. ಬೆಕ್ಕು ನಮ್ಮನೇದು, ಹಾಲು ಪಕ್ಕದ ಮನೇದು.
೧೮೧. ಕಹಿ ಪದಾರ್ಥ ತಿಂದು ಸಿಹಿ ಮಾತನಾಡು.
೧೮೨. ಮುಖ ನೋಡಿ ಮನ ತಿಳಿ.
೧೮೩. ಮಾತು ಚಿಕ್ಕದಾಗಿರಲಿ, ಕೆಲಸ ಚೊಕ್ಕವಾಗಿರಲಿ.
೧೮೪. ಮಾತು ಮೊಳದುದ್ದ, ಕೆಲಸ ಕಿರುಬೆರಳುದ್ದ.
೧೮೫. ಮನೆ, ಮನ ಓಡೆದರೆ ಅಂಟಿಸಲಾಗದ ಕನ್ನಡಿಯಂತೆ.
೧೮೬. ಕೋಪ ಕೆಲಸ ಕೆಡಿಸುತ್ತೆ, ಶಾಂತಿ ಮುಂದೆ ನಡೆಸುತ್ತೆ.
೧೮೭. ಮನುಜನಾಗಿ ಹುಟ್ಟಿ ಪಶುವಿನಂತೆ ಬದುಕಿದಂತೆ!
೧೮೮. ಕಳೆದ ದಿನಗಳು ಬರೆದ ಪುಟಗಳಂತೆ.
೧೮೯. ಪರಿಚಿತರ ಮರೆಯಬೇಡ, ಅಪರಿಚಿತರ ನಂಬಬೇಡ.
೧೯೦. ಹಲ್ಲಿಲ್ಲದಿದ್ದರೂ ಚಕ್ಕುಲಿ ತಿನ್ನೋ ಚಪಲ.
೧೯೧. ಒಗ್ಗಿದರೆ ಮನೆಯಾದರೇನು, ಸ್ಮಶಾನವಾದರೇನು?
೧೯೨. ಕೆಡುವವರು ಮನೇಲಿದ್ರು ಕೆಡುತ್ತಾರೆ.
೧೯೩. ನಮ್ಮಬುದ್ಧಿ ಪರರ ಕೈಯಲ್ಲಿದ್ದಂತೆ.
೧೯೪. ಮೆತ್ತಗಿದ್ರೆ ತುಳೀತಾರೆ, ಜೋರಾಗಿದ್ರೆ ಹೆದ್ರತಾರೆ.
೧೯೫. ನೋಡಿ ನಡೆದಾಗ ಎಡವೋದು ತಪ್ಪುತ್ತೆ.
೧೯೬. ತೀರ್ಥ ಎಂದು ಎಲ್ಲೆಲ್ಲೋ ನೀರು ಕುಡಿದಂತೆ!
೧೯೭. ಹಳೇ ಚಪ್ಪಲಿ ಆದ್ರೂ ಪರವಾಗಿಲ್ಲ, ಬರಿಗಾಲಲ್ಲಿ ನಡೀಬೇಡ.
೧೯೮. ರೈತನ ಮುಗ್ಗು ನಾಡಿನ ಕುಗ್ಗು.
೧೯೯. ದರಿದ್ರ ಏಳಗೊಡುವುದಿಲ್ಲ, ಆಲಸ್ಯ ಉಣಗೊಡುವುದಿಲ್ಲ.
೨೦೦. ನಾಚಿಕೆ ಬಿಟ್ಟವ ಊರಿಗೇ ದೊಡ್ಡವ.         
೨೦೧. ಎರೆ-ತೆರೆ ಬಂಗಾರ, ಮರಳು ಬರೀ ಸಿಂಗಾರ!
೨೦೨. ಹತ್ತೋಕ್ ಮೊದ್ಲು ಕುದರೆ ನೋಡು, ಬಿತ್ತೊಕ್ ಮೊದ್ಲು ಹೊಲ ನೋಡು.
೨೦೩. ಅಶ್ವಿನೀ ಸಸ್ಯನಾಶಿನೀ.
೨೦೪. ಭರಣಿ ಮಳೆ ಧರಣಿ ಬೆಳೆ.
೨೦೫. ರೋಹಿಣಿ ಮಳೆ ಓಣಿಯೆಲ್ಲಾ ಕೆಸರು.
೨೦೬. ಉತ್ತರಿ ಮಳೆ ಹುಯ್ದರೆ ಹೆತ್ತಮ್ಮನೂ ಆಗೋಲ್ಲ.
೨೦೭. ಆದರೆ ಆರಿದ್ರಾ ಇಲ್ವಾದ್ರೆ ದರಿದ್ರ!
೨೦೮. ಹಸ್ತ ಇಲ್ದಿದ್ರೆ ಒಕ್ಕಲಿಗ ಹಲ್ಲು ಕಿಸ್ದ.
೨೦೯. ಸ್ವಾತಿ ಮಳೆ ಮುತ್ತಿನ ಬೆಳೆ.
೨೧೦. ವಿಶಾಖ ಮಳೆ ಪಿಶಾಚಿ ಹಿಡಿದ ಹಾಗೆ.
೨೧೧. ಅನುರಾಧ ಬಂದರೆ ನಮ್ಮ ರಾಗಿ ನಮ್ಮದು.
೨೧೨. ಚಿತ್ತಾ ಮಳೆ ವಿಚಿತ್ರ ಬೆಳೆ!
೨೧೩. ಪೂರ್ವಾಷಾಢ-ಉತ್ತರಾಷಾಢ ಬೇಡವೇ ಬೇಡ.
೨೧೪. ಬಾಡಿಗೆ ಎತ್ತು ಅಂತ ಹೊಡಿದು ಬಡಿಬಾರದು.
೨೧೫. ಆಕಳಿಲ್ಲದವ ಬೆಳೆಸು ಮಾಡ್ಯಾನ, ಆಕಳಿದ್ದವ ಮಕ್ಕಳ ಸಾಕ್ಯಾನ.
೨೧೬. ಉಣಬೇಕು- ಉಡಬೇಕು ಎಂಬೋದಾದ್ರೆ ಎಮ್ಮೆ ಕಟ್ಟಬೇಕು.
೨೧೭. ಬಾಳೆ ಬೆಳೆದವ ಬಾಳಿಯಾನು.
೨೧೮. ತೆಂಗು ಬೆಳೆದವನಿಗೂ ಗಂಡು ಹೆಡೆದವಳಿಗೂ ಚಿಂತೆಯಿಲ್ಲ.
೨೧೯. ತೋಟ ಮಾಡಿದವನಿಗೆ ಕೋಟಲೆಯಿಲ್ಲ.
೨೨೦. ಬಲ್ಲಿದವನಿಗೆ ಕಬ್ಬು.
೨೨೧. ಆದರೆ ಒಂದಡಿಕೆ ಮರ, ಹೋದರೆ ಒಂದು ಗೋಟು.
೨೨೨. ತಂದೆ, ತಾಯಿ ಸತ್ತರೂ ಸೋದರ ಮಾವ ಇರಬೇಕು.
೨೨೩. ವಿದ್ಯಾವಂತನಾದರೆ ಜಗತ್ತಿನ ಆಡಳಿತವನ್ನೇ ನಡೆಸಬಹುದು.
೨೨೪. ಪರಿಸರ ಮಾಲಿನ್ಯ ವಿನಾಶಕ್ಕೆ ಕಾರಣ.
೨೨೫. ದೇಹಕ್ಕೆ ಮುಪ್ಪಾದರೇನಾಯ್ತು, ಅಧ್ಯಯನಕ್ಕೆ ಮುಪ್ಪಿದೆಯೇ?
೨೨೬. ಶರಣು ಆದವನಿಗೆ ಮರಣವಿಲ್ಲ.
೨೨೭. ಜಾಣನಿಗೆ ಮೂರು ದಾರಿ, ಕೋಣನಿಗೆ ಒಂದೇ ದಾರಿ.
೨೨೮. ಗುರುವಿಲ್ಲದೇ ಮಠವಿಲ್ಲ, ಹಿರಿಯರಿಲ್ಲದೆ ಮನೆಯಿಲ್ಲ.
೨೨೯. ಮನೆ ಗೆದ್ದು ಮಾರು ಗೆಲ್ಲು.
೨೩೦. ಮಾತು ಅಂಗಾರ ಮೌನ ಬಂಗಾರ
೨೩೧. ಗುರಿಯಿಟ್ಟು ಗುಂಡು ಹಾಕು, ಸಮಯ ಸಾಧಿಸಿ ಬೇಟೆಯಾಡು.
೨೩೨. ಮನೆಯಲ್ಲಿ ರಾಮಣ್ಣನಂತೆ, ಬೀದಿಯಲ್ಲಿ ಕಾಮಣ್ಣನಂತೆ.
೨೩೩. ಕೆಟ್ಟದ್ದನ್ನು ಬಯಸಬೇಡ, ಒಳ್ಳೆಯದನ್ನು ಬಿಡಬೇಡ.
೨೩೪. ಮಾನವನಾದ ಮೇಲೆ ಮೂರು ಆಕ್ಷರ ಮೊದಲು ಕಲಿ.
೨೩೫. ಒಲೆಯಮೇಲೆ ಇಟ್ಟಾಗ ಉಕ್ಕಿದಂತೆ ಹಾಲು, ಒಗ್ಗಟ್ಟಿಲ್ಲದ ಮನೆ ಬೀದಿಪಾಲು.
೨೩೬. ಬಾಲ್ಯವಿಲ್ಲದೆ ಯೌವ್ವನವಿಲ್ಲ, ಯೌವ್ವನವಿಲ್ಲದೆ ಮುಪ್ಪಿಲ್ಲ.
೨೩೭. ದಯವಿಲ್ಲದ ಧರ್ಮವಿಲ್ಲ.
೨೩೮. ಮಾತಿಗೆ ನೆಲೆಯಿಲ್ಲ, ಪ್ರೇಮಕ್ಕೆ ಬೆಲೆಯಿಲ್ಲ.
೨೩೯. ಕೋಣನಿಗೆ ಏನು ಗೊತ್ತು ಲತ್ತೆ ಪೆಟ್ಟು.
೨೪೦. ಆಸೆಯಿಲ್ಲದವನು ದೇಶಕ್ಕೆ ಶ್ರೀಮಂತ.
೨೪೧. ಇನ್ನೊಬ್ಬರ ಮಾತಿಗೆ ಕಿವಿಗೊಡಬೇಡ, ಚಾಡಿಹೇಳಿ ಜಗಳ ಹಚ್ಚಬೇಡ.
೨೪೨. ಕೋಣನಾಗಿರುವುದಕ್ಕಿಂತ ಜಾಣನಾಗಿರುವುದು ಲೇಸು.
೨೪೩. ಗೆಳೆತನದಲ್ಲಿ ಮೋಸಮಾಡಬೇಡ.
೨೪೪. ಬಾಯಿಯಲ್ಲಿ ಬೆಲ್ಲ ಎದೆಯಲ್ಲಿ ನೀಚತನ.
೨೪೫. ಹಿಮಾಲಯದಲ್ಲಿ ಹಿಮ ಹೆಚ್ಚಂತೆ, ವೀರಭದ್ರನಲ್ಲಿ ಅವತಾರ ಹೆಚ್ಚಂತೆ.
೨೪೬. ಕಾಯಕವನ್ನು ಸದಾ ಮಾಡು, ಸೋಮಾರಿತನವನ್ನು ಬಿಡು.
೨೪೭. ಮೈತುಂಬ ಕಣ್ಣಿರಲಿ, ಕೈಯಲ್ಲಿ ಪೆನ್ನಿರಲಿ.
೨೪೮. ಹಿರಿಯರ ಮಾತಿಗೆ ಕಿವಿಗೊಡು, ಚುಚ್ಚುಮಾತಿಗೆ ಬೆನ್ನು ಕೊಡು.
೨೪೯. ವಿನಯದಿಂದ ವಿಶ್ವವನ್ನು ಗೆಲ್ಲು, ಪರನಿಂದೆ ಮಹಾಪಾಪ.
೨೫೦. ಮೊದಲು ಕಣ್ಣು ಬಿಡು, ನಂತರ ಕೈ ಮಾಡು.
೨೫೧. ನಿನ್ನಿಂದ ಆದ ಪಾಪ, ಅದೇ ನಿನಗೆ ಶಾಪ.
೨೫೨. ನಿಂತ ನೀರಿನಲ್ಲಿ ಕ್ರಿಮಿ ಹುಟ್ಟುತ್ತವೆ, ಕೆಲಸವಿಲ್ಲದ ಮನುಷ್ಯನಲ್ಲಿ ಕೆಟ್ಟ ವಿಚಾರಗಳು ಜನಿಸುತ್ತವೆ.
೨೫೩. ಖೀರು ಕುಡಿದವ ಓಡಿಹೋದ, ನೀರು ಕುಡಿದವ ಸಿಕ್ಕಿಬಿದ್ದ.
೨೫೪. ಯಾದವೇಂದ್ರ ದನ ಕಾದ, ರಾಘವೇಂದ್ರ ರಾಜ್ಯವಾಳಿದ.
೨೫೫. ಹಟ್ಟಿ ತುಂಬಾ ಹಸು, ಹಾಲು ಮಾತ್ರ ತುಸು.
೨೫೬. ಹಾಲು ಕುಡಿದು ಹಾಗಲಕಾಯಿ ತಿಂದಂತೆ.
೨೫೭. ಹುಲಿಗಲ್ಲ, ಸಿಂಹಕ್ಕಲ್ಲ, ಮನೆಯ ಹೆಂಡತಿಯ ನೆರಳಿಗಂಜಿದ.
೨೫೮. ಕೋಳಿಯ ಕಾಲಿಗೆ ಗೆಜ್ಜೆ ಕಟ್ಟಿದರೆ ತಿಪ್ಪೆ ಕೆದರುವುದನ್ನು ಬಿಟ್ಟೀತೆ?
೨೫೯. ಏನು ಬೇಡಿದರೊಬ್ಬ ದಾನಿಯನ್ನು ಬೇಡು, ದೀನನಾ ಬೇಡಿದರೆ ಆ ದೀನ ಏನು ಕೊಟ್ಟಾನು?
೨೬೦. ಇತ್ತಿತ್ತ ಬಾ ಎಂದರೆ ಹೆಗಲೇರಿ ಕುಳಿತ.
೨೬೧. ಹಣದಲ್ಲಿ ಬಡವನಾದರೂ ಬುದ್ಧಿಯಲ್ಲಿ ಬಡವನಾಗಬಾರದು.
೨೬೨. ಹಣವಿಲ್ಲದ ಮನುಷ್ಯ, ರೆಕ್ಕೆ ಇಲ್ಲದ ಪಕ್ಷಿಯಂತೆ.
೨೬೩. ಹಡಗಿನ ವ್ಯಾಪರ, ಉಪ್ಪಿಗೆ ಬಡತನ.
೨೬೪. ಬುದ್ಧಿಗಳ್ಳನಿಗೆಲ್ಲಿ ಸತ್ಯ, ಸದಾಚಾರ!
೨೬೫. ಚಾತುರ್ಯ ಬಲ್ಲವನಿಗೆ ಚಾಚೂ ಚಿಂತಿಲ್ಲ.
೨೬೬. ಸತ್ತವರಿಗೆ ಸಂಗವಿಲ್ಲ, ಕೆಟ್ಟವರಿಗೆ ನೆಂಟರಿಲ್ಲ.
೨೬೭. ನಿದ್ದೆಗೆ ಮದ್ದಿಲ್ಲ, ವಜ್ರಕ್ಕೆ ಬೆಲೆಯಿಲ್ಲ.
೨೬೮. ಮನೆ ಮಕ್ಕಳು ಮಾಣಿಕ್ಯ, ನೆರೆಮನೆ ಮಕ್ಕಳು ಕಸಿವಿಸಿ.
೨೬೯. ಹೆಣ್ಮಕ್ಕಳಿಗೆ ತಾಯಿ ಶಿಕ್ಷೆ,, ಗಂಡ್ಮಕ್ಕಳ್ಳಿಗೆ ತಂದೆ ಶಿಕ್ಷೆ.
೨೭೦. ಮುಖಕ್ಕೆ ಮೂಗು ಚೆಂದ, ಮೂಗಿಗೆ ಮೇಲೆರಡು ಕಣ್ಣು ಚೆಂದ.
೨೭೧. ವಯಸ್ಸಿಗೆ ತಕ್ಕ ಬುದ್ಧಿ ಕಲಿ.
೨೭೨. ಕಾಲಿದ್ದವನಿಗೆ ಆಟ, ಕಣ್ಣಿದ್ದವನಿಗೆ ನೋಟ.
೨೭೩. ಉಗುಳಿ ಉಗುಳಿ ರೋಗ, ಬೊಗಳಿ ಬೊಗಳಿ ರಾಗ.
೨೭೪. ಆಸೆ ಆಸ್ತಿ ಮಾಡ್ತು, ದುರಾಸೆ ನಾಶ ಮಾಡ್ತು.
೨೭೫. ಅಪಕೀರ್ತಿ ತರುವ ಮಗನಿಗಿಂತ, ಸತ್ಕೀರ್ತಿ ತರುವ ಆಳೇ ಮೇಲು.
೨೭೬. ಕೊಟ್ಟು ಕೆಟ್ಟವರಿಲ್ಲ, ತಿಂದು ಬದುಕಿದವರಿಲ್ಲ.
೨೭೭. ಸಮಯಕ್ಕೆ ಬಾರದ ಬುದ್ಧಿ, ಸಾವಿರ ಇದ್ದರು ಲದ್ದಿ,
೨೭೮. ಹೊರಗೆ ಝಗ ಝಗ, ಒಳಗೆ ಭಗ ಭಗ.
೨೭೯. ಕಲ್ಲಾದರು ಕರಗಬಹುದು, ಕಪಟಿಯ ಮನಸ್ಸು ಕರಗದು.
೨೮೦. ಮೂಕವೇದನೆಯು ಸತ್ಯಕ್ಕಿಂತ ಮೇಲು.
೨೮೧. ಕೃತಿಯಿಲ್ಲದ ಮಾತು, ಕಸ ಬೆಳೆದ ತೋಟವಿದ್ದಂತೆ.
೨೮೨. ಒಳ್ಳೆಯ ಕೆಲಸಕ್ಕೆ ವಿಘ್ನ ಹೆಚ್ಚು.
೨೮೩. ಲೆಕ್ಕಕ್ಕಿಂತ ಹೆಚ್ಚು ಹೊರಬಾರದು, ಲೆಕ್ಕಕ್ಕಿಂತ ಹೆಚ್ಚು ದೂರೆಬಾರದು.
೨೮೪. ಅರ್ಧ ಕಲಿತವನ ಆಬ್ಬರ ಹೆಚ್ಚು.
೨೮೫. ದೇಶ ತಿರುಗಬೇಕು, ಭಾಷೆ ಕಲಿಯಬೇಕು.
೨೮೬. ಆಸೆಗೆ ಮಿತಿಯಿಲ್ಲ, ಆಕಾಶಕ್ಕೆ ಅಳತೆಯಿಲ್ಲ.
೨೮೭. ಅಲ್ಪರ ಸಂಗ ಅಭಿಮಾನ ಭಂಗ.
೨೮೮. ಸಂಕೋಚ ಮಾಡಿದರೆ ಸಂಕಪಾಷಾಣವೂ ಸಿಗದು.
೨೮೯. ಬಾವಿ ತೋಡದೆ ನೀರು ಸಿಗದು, ಪ್ರಯತ್ನ ಮಾಡದೆ ಫಲ ಸಿಗದು.
೨೯೦. ಪಡಿತಿಂದು ಗುಡಿಯಲ್ಲಿ ಉರುಳಾಡಿದ.
೨೯೧. ನೋಡಿ ನಡೆದವನಿಗೆ ಕೇಡಿಲ್ಲ.
೨೯೨. ಪದವೂ ಮುಗಿಯಿತು, ತಂತಿಯೂ ಹರಿಯಿತು.
೨೯೩. ಪದವಿ ಬಂದ ಬಳಿಕ ಮದವೂ ಬರತಕ್ಕದ್ದೆ.
೨೯೪. ಪಾಪಕ್ಕೆ ಹೆದರು, ತಾಪಕ್ಕೆ ಹೆದರದಿರು.
೨೯೫. ಪುಷ್ಪವಿಲ್ಲದ ಪೂಜೆ, ಅಶ್ವವಿಲ್ಲದ ಅರಸನಿಗೆ ಸಮ.
೨೯೬. ಮಗ ಸಣ್ಣವನಾದರೂ, ಮಾತು ಸಣ್ಣದಲ್ಲ.
೨೯೭. ಮಂತ್ರ ಸ್ವಲ್ಪ, ಉಗುಳೇ ಬಹಳ.
೨೯೮. ಮಾನ ಹೋದ ಮೇಲೆ ಮರಣ ಬಂದ ಹಾಗೆ.
೨೯೯. ಬೆಲ್ಲವಿದ್ದಲ್ಲಿ ನೊಣ, ಕೆಂಡವಿದ್ದಲ್ಲಿ ಕಾವು.
೩೦೦. ಬೇಕಾದ ಮಾತು, ಬೆಲ್ಲಕ್ಕಿಂತ ಸವಿ.
೩೦೧. ಬಾಯಿ ಬಂಗಾರ, ಮನ ಅಂಗಾರ.
೩೦೨. ಬಾಯಿಯಿದ್ದ ಮಗ ಬದುಕುವನು.
೩೦೩. ಭಾರವಾದ ಪಾಪಕ್ಕೆ ಘೋರವಾದ ನರಕ.
೩೦೪. ಬೀಜದಂತೆ ವೃಕ್ಷ, ವೃಕ್ಷದಂತೆ ಬೀಜ.
೩೦೫. ಬಿಸಿಯಾದರೆ ಮಾತ್ರ ಬೆಣ್ಣೆ ಕರಗುವುದು.
೩೦೬. ಕಲಿತವನಿಗಿಂತ ನುರಿತವನೇ ಮೇಲು.
೩೦೭. ಕಷ್ಟದಂತೆ ಫಲ, ಮನದಂತೆ ಮಹಾದೇವ.
೩೦೮. ಕೀಟ ಸಣ್ಣದಾದರೂ ಕಾಟ ಬಹಳ.
೩೦೯. ಕುರಿ ಹಿಂಡಲ್ಲಿ ತೋಳ ಹೊಕ್ಕಂತೆ.
೩೧೦. ಕೂಳಿಗೆ ಮೂಲ ಭೂಮಿಗೆ ಭಾರ.
೩೧೧. ಕೇಳುವವರ ಮುಂದೆ ಹೇಳುವವರು ದಡ್ಡರು.
೩೧೨. ಹಿರಿಯರಿಗೆ ಶಿರಬಾಗು, ಗುರುವಿಗೆ ತಲೆಬಾಗು.
೩೧೩. ಹಿಡಿ ತುಂಬ ಹಣವಿದ್ದರು ಗುಡಿ ಚೆನ್ನಾಗಿರಬೇಕು.
೩೧೪. ಹಸಿದವನಿಗೆ ಹಳಸಿದ್ದೇ ಪಾವನ.
೩೧೫. ಹರಿದಿದ್ದೇ ಹಳ್ಳ, ನಿಂತಿದ್ದೇ ತೀರ್ಥ.
೩೧೬. ಸುಳ್ಳು ಹೇಳುವುದಕ್ಕಿಂತ ಸುಮ್ಮನಿರುವುದು ಲೇಸು.
೩೧೭. ಸುಣ್ಣ ತಿಂದ ಮಂಗ ಹಲ್ಲು ಕಿಸಿದಂತೆ.
೩೧೮. ಸುಡುಗಾಡಿನಲ್ಲಿ ಕುಳಿತು ಸುಖ ಬಯಸಿದಂತೆ.
೩೧೯. ಎಣ್ಣೆ ತಣ್ಣಗಾದರೆ ಬೆಣ್ಣೆಯ ಹಾಗೆ ಇದ್ದೀತೆ?
೩೨೦. ಅಹಂಕಾರ ಇದ್ದ ಮನುಷ್ಯ ಏನನ್ನೂ ಸಾಧಿಸಲಾರ.
೩೨೧. ಕಡಲೆಗೆ ಮುಂದು ಕಡಿವಾಣಕ್ಕೆ ಹಿಂದು.
೩೨೨. ಆಸೆಯೇ ಜೀವನ, ಜೀವನವೇ ಆಸೆ.
೩೨೩. ಎಡವಿದ ಕಾಲೇ ಎಡವುದು ಹೆಚ್ಚು.
೩೨೪. ಸಾವಿಲ್ಲದ ಮನೆಯಿಲ್ಲ, ಸೋಲಿಲ್ಲದ ಮನುಷ್ಯನಿಲ್ಲ.
೩೨೫. ಎಣ್ಣೆ ಬರುವಾಗ ಗಾಣ ಮುರೀತು.
೩೨೬. ಆದರೆ ಹಬ್ಬ, ಇಲ್ಲದಿದ್ದರೆ ಬರಗಾಲ.
೩೨೭. ಗಿಡ ಮೂರು ಮೊಳ, ಕಾಯಿ ಆರು ಮೊಳ.
೩೨೮. ಕಂಚು ಕಡೆಯಲ್ಲ, ಹಂಚು ದ್ರವ್ಯವಲ್ಲ.
೩೨೯. ಭೂಮಿಯಿಂದ ಆಕಾಶಕ್ಕೆ ಏಣಿಯನ್ನು ಇಟ್ಟ.
೩೩೦. ಕಳ್ಳ ಹೊಕ್ಕ ಮನೆಗೆ ಎಣ್ಣೆ ದಂಡ.
೩೩೧. ಅಕ್ಷರ ಕಲಿಯುವುದಕ್ಕೆ ಬೇಧಭಾವ ಬೇಡ.
೩೩೨. ಉರುಳುವ ಕಲ್ಲಿಗೆ ಏನೂ ಅಂಟುವುದಿಲ್ಲ.
೩೩೩. ಪಂಜರದಲ್ಲಿ ಕಾಗೆ ಇಟ್ಟರೆ ಪಂಚಮ ಸ್ವರ ಕೊಟ್ಟೀತೆ?
೩೩೪. ಅಪಾಯ ತೀರಿತು, ದೇವರನ್ನು ಮರೆತಾಯಿತು.
೩೩೫. ಪ್ರೀತಿಗೊಂದು ಮುತ್ತು, ಹಸಿವಿಗೊಂದು ತುತ್ತು.
೩೩೬. ಕತ್ತಿ ಬಂಗಾರದ್ದಾಗಿದೆಯೆಂದು ಕತ್ತು ಕೊಯ್ದುಕೊಳ್ಳಲು ಸಾಧ್ಯವೇ?
೩೩೭. ಎಣ್ಣೆ ಚೆಲ್ಲಿದವನೂ ಅತ್ತ, ಕಾಯಿ ಚೆಲ್ಲಿದವನೂ ಅತ್ತ.
೩೩೮. ಹೊಳೆಗೆ ಸುರಿದರೂ ಅಳೆದು ಸುರಿ ಎಂದಂತೆ.
೩೩೯. ಬಾಳೆಗೊಂದು ಗೊನೆ, ಬಾಳಿಗೊಂದು ಮಾತು.
೩೪೦. ಮಾತು ಆಡಿದರೆ ಮುತ್ತಿನ ಹಾರದಂತಿರಬೇಕು.
೩೪೧. ಮರ ನೆಟ್ಟು ಪಾಪವನ್ನು ಕಳೆದುಕೋ.
೩೪೨. ಅಪ್ಪನ ಮಾತು ಕೇಳದವನು ಅಮ್ಮನ ಮಾತು ಕೇಳಿಯಾನೆ?
೩೪೩. ಮೂರು ವರ್ಷದ ಬುದ್ಧಿ ನೂರು ವರುಷದ ತನಕ.
೩೪೪. ನೀರುಗಣ್ಣಿನ ಹೆಂಗಸು ಊರು ಹಾಳು ಮಾಡಿದಳಂತೆ.
೩೪೫. ಸೆಗಣಿ ಮೇಲೆ ಕಲ್ಲು ಹಾಕಿ, ಮುಖಕ್ಕೆ ಸಿಡಿಸಿಕೊಂಡಂತೆ.
೩೪೬. ಆಸೆ ಆಕಾಶದಷ್ಟು, ಸಾಧನೆ ಸಾಸಿವೆಯಷ್ಟೇ.
೩೪೭. ಇಲಿ ಬೇಟೆಗೆ ತಮಟೆ ಬಡಿದಂಗೆ.
೩೪೮. ಉಳಿ ಸಣ್ಣದಾದರು ಕುಳಿ ತೋಡದೆ ಬಿಡಲಾರದು.
೩೪೯. ಕಡಲೆ ತಿಂದು ಕೈತೊಳೆದ ಹಾಗೆ.
೩೫೦. ಮದುವೆ ಸಂಭ್ರಮದಲ್ಲಿ ತಾಳಿ ಕಟ್ಟುವುದನ್ನೇ ಮರೆತಂತೆ.
೩೫೧. ತುಂಟ ಮಂಟಪಕ್ಕೋದರೂ ತುಂಟತನ ಬಿಡಲಿಲ್ಲ.
೩೫೨. ಹೆಂಡತಿ ಮುಂದಿರಬೇಕು, ಮಗ ಹಿಂದಿರಬೇಕು.
೩೫೩. ಕಜ್ಜಿ ಕೆರೆದಷ್ಟು ಹಿತ, ಚಾಕೂ ಮಸೆದಷ್ಟೂ ಹರಿತ.
೩೫೪. ಕೋಟಿಗೆ ಒಬ್ಬ ಕುಬೇರ, ನೋಟಕ್ಕೆ ಒಬ್ಬ ಸುಂದರ.
೩೫೫. ಜಾತಿ ಜಾತಿಗೆ ವೈರಿ, ನಾಯಿ ನಾಯಿಗೆ ವೈರಿ.
೩೫೬. ಮದುವೆ ಸಾಲ ಮಸಣಾದವರೆಗೂ.
೩೫೭. ನೂಲಿನಂತೆ ಸೀರೆ, ಬೀಜದಂತೆ ವೃಕ್ಷ.
೩೫೮. ಶ್ರೀಮಂತನ ಮನೆ ಸೀಮಂತಕ್ಕೆ ಬಡವ ಬಡಬಡಿಸಿದ ಹಾಗೆ.
೩೫೯. ಮೊಸರು ಇಟ್ಟುಕೊಂಡು ಮಜ್ಜಿಗೆಗೆ ಅತ್ತಹಾಗೆ.
೩೬೦. ಕುಡಿಗೆ ಕುಂಬಳಕಾಯಿ ಭಾರವೇ?
೩೬೧. ಮಾವನು ಇಲ್ಲದ ಮನೆಯೇಕೆ, ಹೆಂಡತಿಯಿಲ್ಲದ ಒಡವೆಯೇಕೆ?
೩೬೨. ಊಟವಿಲ್ಲದ ಉಪದೇಶಿ ಊರಿಗೆಲ್ಲಾ ನಿವಾಸಿ.
೩೬೩. ಸೋಲಿಲ್ಲದ ಸರದಾರನಿಲ್ಲ, ಸಂಗಮವಿಲ್ಲದ ಸಾವಿಲ್ಲ.
೩೬೪. ಪ್ರೇಮಿಗಳಿಲ್ಲದ ನಾಡು ಬರೀ ಶೂನ್ಯದ ಬೀಡು.
೩೬೫. ಆತ್ಮೀಯವಾದ ಪ್ರೇಮ ಅಮರವಾದದ್ದು.
೩೬೬. ಸ್ನೇಹ ಎಂಬ ಸಂಪಿಗೆ ಸುಮಧುರವಾದದ್ದು.
೩೬೭. ತಾಯಿಯ ಪ್ರೀತಿ ಸುಖವಾದದ್ದು, ತಂದೆಯ ಪ್ರೀತಿ ಮಧುರವಾದದ್ದು.
೩೬೮. ಮಮತೆಯ ಮಡಿಲಲ್ಲಿ ತೂಗಬೇಕು, ಮನಸ್ಸೆಂಬ ಬಂಧನದಲ್ಲಿ ಬೀಳಬೇಕು.
೩೬೯. ಸಂಸಾರದಲ್ಲಿ ಸುಖವಿದೆ, ಬಾಳೆಂಬ ಬಂಧನದಲ್ಲಿ ಕಷ್ಟವಿದೆ.
೩೭೦. ತಾಯಿಯನ್ನು ನಿಂದಿಸಬೇಡ, ಒಳ್ಳೆಯವರನ್ನು ಬಂಧಿಸಬೇಡ.
೩೭೧. ಮನಸ್ಸನ್ನು ನಿಯಂತ್ರಿಸಿ ಜೀವನ ಸಾಗಿಸಿ.
೩೭೨. ಮನೆ ಬೆಳಗಲಿ ದೀಪ ಬೇಕು, ಮಾನವ ಬೆಳಗಲು ಅಕ್ಷರ ಬೇಕು.
೩೭೩. ಕತ್ತೆಗೆ ತಿಪ್ಪೆಯೇ ತವರುಮನೆ.
೩೭೪. ಕತ್ತೆಗೆ ಯಾಕೆ ಹತ್ತಿಕಾಳು?
೩೭೫. ಸಣ್ಣದಿರುವಾಗ ಕತ್ತೆಯೂ ಬಹಳ ಸುಂದರ.
೩೭೬. ಕತ್ತೆಯಾಗಬೇಡ ಕಾಗೆಯಾಗು.
೩೭೭. ಕತ್ತೆಯ ಹಿಂದೆ ಹೋಳಿಹುಣ್ಣಿಮೆಯಲ್ಲಿ ಮಾತ್ರ ಹೋಗು.
೩೭೮. ಅಪದ್ದಕ್ಕೆ ಅಪ್ಪಣೆ ಕೊಟ್ರೆ ಬಾಯಿಗೆ ಬಂದದ್ದೇ ಮಾತು.
೩೭೯. ಅಪ್ಪ ಮಾಡಿದ ಪುಣ್ಯ ಮಕ್ಕಳ ಕಾಲಕ್ಕೆ.
೩೮೦. ಅಪ್ಪನ ಸಾಲಕ್ಕೆ ಮಗನನ್ನು ತಿಪ್ಪೆ ಮೇಲೆ ಎಳೆದರು.
೩೮೧. ಅರಿತರೆ ಮಾತನಾಡು, ಮರೆತರೆ ಕೂತು ನೋಡು.
೩೮೨. ಆಕಾಶ ನೋಡೋಕೆ ನೂಕಾಟವೇಕೆ?
೩೮೩. ಗುರುಕೊಟ್ಟ ಜೋಳಿಗೆ ಅಂತ ಗೂಟಕ್ಕೆ ಹಾಕಿದರೆ ಊಟ ಹಾಕೀತೆ?
೩೮೪. ಜಾರುವುದು ತಪ್ಪಿದರೆ ಏರುವುದು ಸಾಧ್ಯ.
೩೮೫. ಧೂಳಿ ಧೂಪವಾದೀತೆ, ಮಾಳಿಗೆ ಸ್ವರ್ಗವಾದೀತೆ?
೩೮೬. ಬಾಳೆಂಬ ಬಂಧನದಲ್ಲಿ ಈಜಬೇಕು, ಸಂಸಾರ ಎಂಬ ಸಾಗರದಲ್ಲಿ ತೇಲಬೇಕು.
೩೮೭. ಹೆಸರು ಸಂಪತ್ತು, ಕೂಳಿಗಿಲ್ಲ ಒಪ್ಪತ್ತು.
೩೮೮. ನೇಯುವ ಕಾಲ ತಪ್ಪಿದರೂ, ಸಾಯುವ ಕಾಲ ತಪ್ಪದು.
೩೮೯. ಕೀಳನ ಕೆಣಕಬೇಡ, ಮೇಗಾಲು ತುರಿಸಬೇಡ.
೩೯೦. ಹೊಟ್ಟೆ ತುಂಬಿದ ಮೇಲೆ ಕಜ್ಜಾಯವೂ ವಿಷ
೩೯೧. ದೇವರನ್ನು ಬಯ್ಯುವವರು ಅರ್ಚಕನನ್ನು ಬಿಟ್ಟಾರೆ?

Krupe: http://www.kannadakavi.com 

Popular posts from this blog

ಮುದ್ದಣ ಮನೋರಮೆಯ ಸಲ್ಲಾಪ - ಶ್ರೀವತ್ಸ ಜೋಶಿ

ಕನ್ನಡ ಕಾದಂಬರಿ ಮತ್ತು ಪುಸ್ತಕಗಳು

ಮೂಡುವನು ರವಿ ಮೂಡುವನು - ಪಂಜೆ ಮಂಗೇಶ ರಾಯರು