ಕೊಡಚಾದ್ರಿ





ಕೊಡಚಾದ್ರಿ ಬೆಟ್ಟ ಸಾಲುಗಳು ಕರ್ನಾಟಕ ರಾಜ್ಯದ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಇವೆ. ಇದರಲ್ಲಿ ಕೊಡಚಾದ್ರಿ ಬೆಟ್ಟದ ಎತ್ತರ ಸಮುದ್ರ ಮಟ್ಟದಿಂದ ಸುಮಾರು ೧೩೪೩ ಮೀ. ಕೊಡಚಾದ್ರಿ ಬೆಟ್ಟವು ಪ್ರಸಿದ್ದ ಯಾತ್ರಾ ಸ್ಥಳವಾದ ಕೊಲ್ಲೂರುಮೂಕಾಂಬಿಕ ದೇವಸ್ಥಾನದ ಹಿನ್ನೆಲೆಯಲ್ಲಿ ಇದ್ದು ಪ್ರಕೃತಿ ಪ್ರಿಯರಿಗೆ ಹಾಗು ಚಾರಣಿಗರಿಗೆ ಹೇಳಿ ಮಾಡಿಸಿದ ಜಾಗ. ಕೊಡಚಾದ್ರಿ ಬೆಟ್ಟ ಸಾಲುಗಳು ಮೂಕಾಂಬಿಕ ವನ್ಯ ಜೀವಿ ಅಭಯಾರಣ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಕೊಡಚಾದ್ರಿ ಬೆಟ್ಟದ ಮೇಲೆ ಸರ್ವಜ್ಞ ಪೀಠವೆಂಬ ಒಂದು ಸಣ್ಣ ದೇವಾಲಯವಿದೆ. ಈ ಜಾಗದಲ್ಲಿ ಭಗವಾನ್ ಶ್ರೀ ಶಂಕರಾಚಾರ್ಯರು ತಪಸ್ಸು ಮಾಡಿದ್ದರು ಎಂದು ಪ್ರತೀತಿ. ಸರ್ವಜ್ಞ ಪೀಠಕ್ಕಿಂತ ೨ ಕಿ.ಮೀ ಮೊದಲು ಮೂಲ ಮೂಕಾಂಬಿಕ ದೇವಸ್ಥಾನವಿದೆ. ಸರ್ವಜ್ಞ ಪೀಠದಿಂದ ಮುಂದಕ್ಕೆ ಕಡಿದಾದ ಬೆಟ್ಟವನ್ನು ಇಳಿದರೆ ಚಿತ್ರಮೂಲ ಎಂಬ ಸ್ಥಳ ತಲುಪಬಹುದು. ಇದು ಸೌಪರ್ಣಿಕ ನದಿಯ ಉಗಮ ಸ್ಥಾನ. ಈ ಜಾಗವು ಹಲವಾರು ಜಾತಿಯ ಸಸ್ಯಗಳಿಗೆ ಹೆಸರುವಾಸಿಯಾಗಿದೆ. ಕೊಡಚಾದ್ರಿ ಬೆಟ್ಟವು ದಟ್ಟವಾದ ಅರಣ್ಯ ಹಾಗು ಶೋಲ ಕಾಡುಗಳಿಂದ ಆವೃತವಾಗಿದೆ.ಇಪ್ಪತ್ತನೆಯ ಶತಮಾನದಲ್ಲಿ ಪಶ್ಚಿಮ ಘಟ್ಟಗಳಲ್ಲಿ ವ್ಯಾಪಕವಾಗಿ ಸುತ್ತಾಡಿದ ಲೇಖಕ ಮತ್ತು ಪರಿಸರ ಪ್ರೇಮಿ ಡಾ.ಶಿವರಾಮ ಕಾರಂತರು ಒಂದೆಡೆ ಇದನ್ನು ದಾಖಲಿಸಿದ್ದಾರೆ. ಸಹ್ಯಾದ್ರಿಯ ಈ ಭಾಗದಲ್ಲಿ ಮೇಲೆದ್ದಿರುವ ಮೂರು ಪರ್ವತ ಶಿಖರಗಳನ್ನು ಕಾಲ್ನಡಿಗೆಯಲ್ಲಿ ಏರಿದ ಡಾ|ಕಾರಂತರ ಪ್ರಕಾರ ಕುದುರೆಮುಖ ಶಿಖರವು ಅತ್ಯಂತ ದೂರದ ಚಾರಣ, ಕುಮಾರ ಪರ್ವತವು ತುಂಬಾ ಕಠಿಣವೆನಿಸುವ ದಾರಿ; ಮತ್ತು ಕೊಡಚಾದ್ರಿಯು ಇವೆಲ್ಲ ಕ್ಕಿಂತಲೂ ಚಂದದ ತಾಣ.


Krupe _ http://kn.wikipedia.org

Comments

Popular posts from this blog

ಮುದ್ದಣ ಮನೋರಮೆಯ ಸಲ್ಲಾಪ - ಶ್ರೀವತ್ಸ ಜೋಶಿ

ಕನ್ನಡ ಕಾದಂಬರಿ ಮತ್ತು ಪುಸ್ತಕಗಳು

ಮೂಡುವನು ರವಿ ಮೂಡುವನು - ಪಂಜೆ ಮಂಗೇಶ ರಾಯರು