Showing posts with label ಕವಿ ಪರಿಚಯ. Show all posts
Showing posts with label ಕವಿ ಪರಿಚಯ. Show all posts

Saturday, April 9, 2011

ದ.ರಾ.ಬೇಂದ್ರೆ

ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ -  ದ.ರಾ.ಬೇಂದ್ರೆ


ಬೇಂದ್ರೆ ೧೮೯೬ನೆಯ ಇಸವಿ ಜನವರಿ ೩೧ ರಂದು ಜನಿಸಿದರು. ತಂದೆ ರಾಮಚಂದ್ರ ಭಟ್ಟ, ತಾಯಿ ಅಂಬಿಕೆ. ಬೇಂದ್ರೆಯವರ ಕಾವ್ಯನಾಮ ಅಂಬಿಕಾತನಯದತ್ತ.

ಬೇಂದ್ರೆ ಮನೆತನದ ಮೂಲ ಹೆಸರು ಠೋಸರ. ವೈದಿಕ ವೃತ್ತಿಯವರು. ಒಂದು ಕಾಲಕ್ಕೆ ಸಾಂಗ್ಲಿ ಸಂಸ್ಥಾನಕ್ಕೆ ಸೇರಿದ್ದ ಗದಗಪಟ್ಟಣದ ಸಮೀಪದ ಶಿರಹಟ್ಟಿಯಲ್ಲಿ ಬಂದು ನೆಲೆಸಿದರು. ದ.ರಾ.ಬೇಂದ್ರೆ ಹನ್ನೊಂದು ವರ್ಷದವರಿದ್ದಾಗ ಅವರ ತಂದೆ ತೀರಿಕೊಂಡರು. ೧೯೧೩ರಲ್ಲಿ ಮೆಟ್ರಿಕ್ಯುಲೇಶನ್ ಮುಗಿಸಿದ ಬಳಿಕ ಬೇಂದ್ರೆ ಪುಣೆಯ ಕಾಲೇಜಿನಲ್ಲಿ ಓದಿ ೧೯೧೮ರಲ್ಲಿ ಬಿ.ಎ. ಮಾಡಿಕೊಂಡರು. ಹಿಡಿದದ್ದು ಅಧ್ಯಾಪಕ ವೃತ್ತಿ. ೧೯೩೫ರಲ್ಲಿ ಎಮ್.ಎ. ಮಾಡಿಕೊಂಡು ಕೆಲಕಾಲ (೧೯೪೪ - ೧೯೫೬) ಸೊಲ್ಲಾಪುರದ ಡಿ.ಎ.ವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದರು.

ಬೇಂದ್ರೆಯವರು ೧೯೧೯ರಂದು ಹುಬ್ಬಳ್ಳಿಯಲ್ಲಿ ಲಕ್ಷ್ಮೀಬಾಯಿಯವರನ್ನು ವಿವಾಹವಾದರು; ಅವರ ಪ್ರಥಮ ಕಾವ್ಯ ಸಂಕಲನ "ಕೃಷ್ಣ ಕುಮಾರಿ"-ಯು ಆಗಲೇ ಪ್ರಕಟಿಸಲ್ಪಟ್ಟಿತ್ತು.

ಕವಿ, ದಾರ್ಶನಿಕ ಬೇಂದ್ರೆ ಈ ಯುಗದ ಒಬ್ಬ ಮಹಾಕವಿ. ೧೯೮೧ರ ಅಕ್ಟೋಬರ್ನಲ್ಲಿ ತೀರಿಕೊಂಡ ಅವರು ಕವಿಗಳಿಗೆ, ಸಾಹಿತಿಗಳಿಗೆ ಸ್ಫೂರ್ತಿಯ ಸೆಲೆ. ಎಲ್ಲಾ ಕಾಲಕ್ಕೂ ಬಾಳುವಂತಹ ಕವನಗಳನ್ನು ರಚಿಸಿದ ಕೀರ್ತಿ ಅವರದು.
 ಸಾಹಿತ್ಯ
ಬೇಂದ್ರೆ ಸ್ಮಾರಕ

ಬೇಂದ್ರೆ ಸ್ಮಾರಕ, ಧಾರವಾಡ

ಸಾಹಿತ್ಯ ರಚನೆ ಅವರ ಮೊದಲ ಒಲವು. ಕಾಲೇಜಿನಲ್ಲಿ ಓದುತ್ತಿದ್ದಾಗಲೇ ಕವಿತೆಗಳನ್ನು ಕಟ್ಟಿದರು. ೧೯೧೮ರಲ್ಲಿ ಅವರ ಮೊದಲ ಕವನ "ಪ್ರಭಾತ" ಎಂಬ ಪತ್ರಿಕೆಯಲ್ಲಿ ಪ್ರಕಟವಾಯಿತು. ಅಲ್ಲಿಂದಾಚೆಗೆ ಅವರು ಕಾವ್ಯ ರಚನೆ ಮಾಡುತ್ತಲೇ ಬ೦ದರು. "ಗರಿ", "ಕಾಮಕಸ್ತೂರಿ", "ಸೂರ್ಯಪಾನ", "ನಾದಲೀಲೆ", "ನಾಕುತಂತಿ" ಮೊದಲಾದ ಕವನ ಸಂಕಲನಗಳನ್ನು ಪ್ರಕಟಿಸಿದರು. ಇವರ ನಾಕುತಂತಿ ಕೃತಿಗೆ ೧೯೭೪ ಇಸ್ವಿಯ ಕೇಂದ್ರ ಜ್ಞಾನಪೀಠ ಪ್ರಶಸ್ತಿ ಬಂದಿದೆ. ಕವಿತೆಗಳನ್ನಲ್ಲದೆ ನಾಟಕಗಳು, ಸಂಶೋಧನಾತ್ಮಕ ಲೇಖನಗಳು, ವಿಮರ್ಶೆಗಳನ್ನು ಬೇಂದ್ರೆ ಬರೆದಿದ್ದಾರೆ. ೧೯೨೧ರಲ್ಲಿ ಧಾರವಾಡದಲ್ಲಿ ಅವರು ಗೆಳೆಯರೊಡನೆ ಕಟ್ಟಿದ "ಗೆಳೆಯರ ಗುಂಪು" ಸಂಸ್ಥೆ ಅವರ ಸಾಹಿತ್ಯ ಚಟುವಟಿಕೆಗಳಿಗೆ ಇಂಬು ನೀಡಿತು. ಆಗಿನ್ನೂ ಸ್ವಾತಂತ್ರ್ಯ ಚಳುವಳಿ ಬಿಸಿ ಮುಟ್ಟಿದ್ದ ಸಮಯ. ದೇಶಪ್ರೇಮಿಗಳೂ, ದೇಶಭಕ್ತರೂ ಆಗಿದ್ದ ಬೇಂದ್ರೆ ತಾವೂ ಚಳುವಳಿಯಲ್ಲಿ ಭಾಗವಹಿಸಿ ಕೆಲಕಾಲ ಸೆರೆಮನೆವಾಸ ಅನುಭವಿಸಿದರು.

ಉತ್ತಮ ವಾಗ್ಮಿಗಳಾಗಿದ್ದ ಬೇಂದ್ರೆಯವರ ಉಪನ್ಯಾಸಗಳೆಂದರೆ ಜನರಿಗೆ ಹಿಗ್ಗು. ಅವರ ಮಾತೆಲ್ಲ ಕವಿತೆಗಳೋಪಾದಿಯಲ್ಲಿ ಹೊರಹೊಮ್ಮುತ್ತಿದ್ದವು. ಕನ್ನಡದಲ್ಲಿಯೇ ಅಲ್ಲದೆ ಮರಾಠಿ ಭಾಷೆಯಲ್ಲೂ ಬೇಂದ್ರೆ ಕೆಲವು ಕೃತಿಗಳನ್ನು ರಚಿಸಿದರು.

ಆಧ್ಯಾತ್ಮದ ವಿಷಯದಲ್ಲಿ ಅವರು ಒಲವು ಬೆಳೆಸಿಕೊಂಡಿದ್ದರು. ಅರವಿಂದರ ವಿಚಾರಗಳಲ್ಲಿ ಆಸಕ್ತಿ ತೋರಿದ ಅವರು ಅರವಿಂದರ ಕೃತಿಯನ್ನು ಇಂಗ್ಲೀಷಿನಿಂದ ಭಾಷಾಂತರ ಮಾಡಿಕೊಟ್ಟರು. ಜಾನಪದ ಧಾಟಿಯ ಅವರ ಎಷ್ಟೋ ಕವಿತೆಗಳನ್ನು ಗಾಯಕರು ಸುಶ್ರಾವ್ಯವಾಗಿ ಹಾಡಿದ್ದಾರೆ. ಅವರ ಕವಿತೆಗಳ ನಾದಮಾಧುರ್ಯ ಅಪಾರ.

krupe -http://kn.wikipedia.org/wiki/ದ.ರಾ.ಬೇಂದ್ರೆ




Friday, April 8, 2011

ತ.ರಾ.ಸು.

ತ.ರಾ.ಸು.
ಬರೆದಂತೆ ಬದುಕಿದವರು ವಿರಳ, ಬರೆದೇ ಬದುಕಿದವರು ಇನ್ನೂ ವಿರಳ. ಆದರೆ ತ.ರಾ.ಸು. ರವರು ಬರೆದಂತೆ ಬದುಕಿದವರು. ಬರೆದೇ ಬದುಕಿದವರು. ಸುಮಾರು 68 ಕೃತಿಗಳನ್ನು ತಮ್ಮ ಜೀವಿತಾವಧಿಯಲ್ಲಿ ರಚಿಸಿದ ನಂತರವೂ ಬರವಣಿಗೆಗಿಂತ ಬದುಕೇ ದೊಡ್ಡದು ಎಂದು ನಂಬಿಕೊಂಡವರು. ಗಂಡು ಮೆಟ್ಟಿನ ನಾಡಾದ ಚಿತ್ರದುರ್ಗ ಜಿಲ್ಲೆಯು ಕೇವಲ ಗತಕಾಲದ ಇತಿಹಾಸ ಪುಟಗಳಲ್ಲಿ ಅಷ್ಟೇ ಉಳಿಯದೇ ಸಾಹಿತ್ಯ ಲೋಕಕ್ಕೂ, ಅನರ್ಘ್ಯ ರತ್ನಗಳನ್ನು ಕಾಣಿಕೆಯಾಗಿ ನೀಡಿದೆ. ಅವರಲ್ಲಿ ಪ್ರಮುಖರೆಂದರೆ ಕನ್ನಡದ ಅಶ್ವಿನಿ ದೇವತೆಗಳಲ್ಲಿ ಒಬ್ಬರೆಂದೇ ಹೆಸರಾದ ಶ್ರೀ ಟಿ.ಎಸ್.ವೆಂಕಣ್ಣಯ್ಯ, ತ.ಸು.ಶಾಮರಾಯರು, ಆಶುಕವಿಗಳಾದ ಶ್ರೀ ಬೆಳಗೆರೆ ಚಂದ್ರಶೇಖರಶಾಸ್ತ್ರಿಗಳು, ತ.ರಾ.ಸು. ಮುಂತಾದವರನ್ನು ಹೆಸರಿಸಬಹುದು.  ತ.ರಾ.ಸು. ರವರ ಜನನ 1920 ನೇ ಏಪ್ರಿಲ್ 21 ರಂದು ಹರಿಹರ ತಾಲ್ಲೂಕಿನ ಮಲೇಬೆನ್ನೂರಿನಲ್ಲಿ ಜನಿಸಿದರು. ಇವರ ತಂದೆ ರಾಮಸ್ವಾಮಯ್ಯ, ತಳಕು ಗ್ರಾಮದ ಆಶುಕವಿಗಳು. ದೊಡ್ಡಸುಬ್ಬಣ್ಣನವರ ಎರಡನೇ ಮಗ; ತ.ರಾ.ಸು. ರವರ ತಂದೆ. ಹರಿಹರದಲ್ಲಿ ಅಮಲ್ದಾರರಾಗಿದ್ದವರು. ತಾಯಿ ಸೀತಮ್ಮನವರು ಸರಳ ಸಜ್ಜನಿಕೆಯ ಸ್ವಭಾವದ ಹೆಣ್ಣುಮಗಳು. ದೊಡ್ಡಪ್ಪ ಟಿ.ಎಸ್.ವೆಂಕಣ್ಣಯ್ಯ, .ಸು.ಶಾಮರಾಯರು ಇವರ ಚಿಕ್ಕಪ್ಪ.  ಹೀಗಾಗಿ ಇವರ ಮನೆಯ ಪರಿಸರದಲ್ಲೂ, ಇವರ ವಂಶವಾಹಿಣಿಯಲ್ಲೂ ಸಾಹಿತ್ಯದ ಒಲವು ತಾನಾಗಿಯೇ ಹರಿದು ಬಂದಿತ್ತು.
 ಖ್ಯಾತ ಸಂಶೋಧಕರಾದ ಹುಲ್ಲೂರು ಶ್ರೀನಿವಾಸ ಜೋಯಿಸರ ಚಿತ್ರದುರ್ಗದ ಬಗ್ಗೆ ಹೇಳುತ್ತಿದ್ದ ಕಥೆಗಳೇ, ಮುಂದೊಂದು ದಿನ ದುರ್ಗಾಸ್ತಮಾನದಂತಹ ಮಹಾನ್ ಐತಿಹಾಸಿಕ ಕಾದಂಬರಿಗೆ ಪ್ರೇರಣೆಯಾಯಿತು. ಅದಕ್ಕೂ ಮುಂಚೆ ಒಮ್ಮೆ ವೆಂಕಣ್ಣಯ್ಯನವರು ವಾಚಾಳಿಯಾಗಿದ್ದ ತ.ರಾ.ಸು. ರವರಿಗೆ ಇಷ್ಟೆಲ್ಲಾ ಮಾತಾನಾಡುವಿಯೆಲ್ಲಾ, ಇದನ್ನೇ ಬರೆಯುವ ಸಾಮರ್ಥ್ಯ ನಿನ್ನಲ್ಲಿದೆಯೇ? ಒಂದು ಕಥೆ ನಿನ್ನ ಕೈಯಲ್ಲಿ ಬರೆಯಲಾದೀತೆ?” ಎಂದು ಸವಾಲು ಹಾಕಿದಾಗ ತ.ರಾ.ಸು. ರವರು ಸಂಜೆಯೊಳಗೆ ಒಂದು ಕಥೆ ಬರೆದು ಹತ್ತು ರೂಪಾಯಿ ಗಿಟ್ಟಿಸಿಕೊಂಡರು. ಆ ಕಥೆಯ ಹೆಸರು ಪುಟ್ಟನ ಚೆಂಡು. (ಅವರ ಕೊನೆಯ ಐತಿಹಾಸಿಕ ಕಾದಂಬರಿ ದುರ್ಗಾಸ್ತಮಾನವನ್ನು ಟಿ.ಎಸ್.ವೆಂಕಣ್ಣಯ್ಯನವರಿಗೆ ಅರ್ಪಿಸಿದ್ದಾರೆ.) ರಾಮಸ್ವಾಮಯ್ಯನವರ ಮಿತ್ರನಾಗಿದ್ದ ಎಸ್.ನಿಜಲಿಂಗಪ್ಪನವರು ಪ್ರೀತಿಯಿಂದ ತ.ರಾ.ಸು.ರವರನ್ನು ಧ್ರುವ ಎಂದು ಕರೆಯುತ್ತಿದ್ದರು. ಗಾಂಧೀಜಿಯವರ ಚಳುವಳಿಯು ದೇಶಾದಾಂತ್ಯ ಸಂಚಲನ ಉಂಟುಮಾಡಿತ್ತು.1937ರ ಸುಮಾರಿನಲ್ಲಿ ಚಿತ್ರದುರ್ಗದಲ್ಲಿ ಧ್ವಜ ಸತ್ಯಗ್ರಹ ನಡೆದು ಜಿಲ್ಲೆಯ ಹೊಸದುರ್ಗ ಪಟ್ಟಣವನ್ನು ಕೇಂದ್ರವನ್ನಾಗಿಸಿಕೊಂಡು ಮಿತ್ರರೊಡನೆ ಹಳ್ಳಿ-ಹಳ್ಳಿಗಳಲ್ಲಿ ಸಂಚರಿಸಿ ಕ್ರಾಂತಿ ಗೀತೆಗಳನ್ನು ಹಾಡುತ್ತ.ಭಾಷಣ ಮಾಡುತ್ತಿದ್ದರು. ಬಾಗೂರು ಎಂಬ ಹಳ್ಳಿಯಲ್ಲಿ ಭಾಷಣ ಮಾಡುತ್ತಿದ್ದಾಗ ತ.ರಾ.ಸು. ದಸ್ತಗಿರಿಯಾದರು.ಆಗ ಅವರಿಗೆ 17ರ ಪ್ರಾಯ!
 ಚಿತ್ರದುರ್ಗದಲ್ಲಿದ್ದರೆ ಮಗ ಚಳುವಳಿಗಳ ಹಿಂದೆ ಹೋಗಬಹುದೆಂದು ರಾಮಸ್ವಾಮಯ್ಯನವರು ತ.ರಾ.ಸು. ರವರನ್ನು ಬೆಂಗಳೂರಿನ ನ್ಯಾಷನಲ್ ಹೈಸ್ಕೂಲಿಗೆ ಸೇರಿಸಿದರು. ಎಸ್.ಎಸ್.ಎಲ್.ಸಿ. ಮುಗಿಸಿಕೊಂಡ ತ.ರಾ.ಸು. ಶಿವಮೊಗ್ಗದಲ್ಲಿ ಕಾಲೇಜು ಸೇರಿ, ಕಾಲೇಜಿನ ಪ್ರಬಂಧ ಸ್ಪರ್ಧೆಯಲ್ಲಿ ಬಿ.ಎಂ.ಶ್ರೀ.ಯವರಿಂದ ಬಹುಮಾನ ಸ್ವೀಕರಿಸಿದರು. ಶಿವಮೊಗ್ಗದ ಕಾಲೇಜಿನಲ್ಲಿ ತ.ರಾ.ಸು. ಓದಿದ್ದು ಒಂದೇ ವರ್ಷ. ಜೂನಿಯರ್ ಇಂಟರ್ ಮೀಡಿಯಟ್ ಪರೀಕ್ಷೆಯ ನಂತರ ಸೀನಿಯರ್ ಇಂಟರ್ ಓದಲು ತುಮಕೂರಿಗೆ ಹೋದರು. 1942ರ ಆಗಸ್ಟ್ 9 ರಂದು ಕ್ವಿಟ್ ಇಂಡಿಯಾ ಚಳುವಳಿ (ಚಲೇಜಾವ್ ಚಳುವಳಿ) ಆರಂಭವಾಗುತ್ತಿದ್ದಂತೆ ಬ್ರಿಟೀಷರು ಗಾಂಧೀಜಿ ಮೊದಲಾದ ರಾಷ್ಟ್ರನಾಯಕರನ್ನು ಬಂಧಿಸಿದರು. ಇದರಿಂದ ಇಡೀ ಶಾಲಾ ಕಾಲೇಜುಗಳಿಗೆ ಬಹಿಷ್ಕಾರ ಹಾಕಲಾಯಿತು. ವಿದೇಶಿ ವಸ್ತುಗಳ ದಹನ ನಡೆಸಲಾಯಿತು. ಇದಕ್ಕೆ ತ.ರಾ.ಸು. ಮತ್ತು ಇವರ ಮಿತ್ರರೂ ಹೊರತಾಗಿರಲಿಲ್ಲ. ಒಮ್ಮೆ ಈ ತಂಡ ರೈಲು ಹಳಿಗಳನ್ನು ತಪ್ಪಿಸಿ ಸೇತುವೆಯನ್ನು ಉರುಳಿಸುವ ಏರ್ಪಾಡು ಮಾಡಿಕೊಂಡಿದ್ದಾಗ ಅದು ಪೋಲಿಸರ ಗಮನಕ್ಕೆ ಬಂದು ದಸ್ತಗಿರಿಯಾದರು. ಸೆರೆಮನೆಯಲ್ಲಿದ್ದರೂ ಇವರ ಚಳುವಳಿ ಮುಂದುವರೆದಿತ್ತು. 1942ರ ಡಿಸೆಂಬರ್ ತಿಂಗಳಲ್ಲಿ ಬಿಡುಗಡೆಯಾದರು. ಜೈಲಿನಿಂದ ಬಿಡುಗಡೆಯೇನೋ ಆದರು. ಆದರೆ ಗಾಂಧೀಜಿಯವರು ಬಿಡುಗಡೆಯಾದ ಹೊರತು ಹಾಗೂ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ ಹೊರತು ಪುನಃ ಕಾಲೇಜು ಮೆಟ್ಟಿಲು ಹತ್ತುವುದಿಲ್ಲ ಎಂದು ನಿರ್ಧರಿಸಿದರು.
 
 ಪತ್ರಿಕೋದ್ಯಮಿಯಾಗಿ ತ.ರಾ.ಸು.
        1942ರಲ್ಲಿ ಬೆಂಗಳೂರಿಗೆ ಬಂದ ತ.ರಾ.ಸು. ಕೆಲಕಾಲ ವಿಶ್ವಕರ್ನಾಟಕ ಪತ್ರಿಕೆಯ ಉಪಸಂಪಾದಕರಾಗಿ ಕಾರ್ಯ ನಿರ್ವಹಿಸಿದರು. ಆ ಸುಮಾರಿಗೆ ಇವರ ವಿವಾಹವು ಅಂಬುಜಾರವರೊಂದಿಗೆ ಆಯಿತು. ಆಗ ಅವರಿಗೆ ಬರುತ್ತಿದ್ದ ಸಂಬಳ 25 ರೂಪಾಯಿ. ಎಷ್ಟೋ ದಿನ ಅವರು ಕಡಲೆಕಾಯಿ ತಿಂದು ದಿನದೂಡುತ್ತಿದ್ದರು. ವಿಶ್ವಕರ್ನಾಟಕ ಪತ್ರಿಕೆ ಬಿಟ್ಟ ನಂತರ ಬಿ.ಎನ್.ಗುಪ್ತ ರವರಪ್ರಜಾಮತ ವಾರಪತ್ರಿಕೆಯಲ್ಲಿ ಉಪಸಂಪಾದಕರಾದರು. 1945-46ರ ವೇಳೆಗೆ ಎಂ.ಎಸ್.ಚಿಂತಾಮಣಿ ಎಂಬುವವರು ಆರಂಭಿಸಿ ನಡೆಸುತ್ತಿದ್ದ ವಾಹಿನಿ ಎಂಬ ವಾರಪತ್ರಿಕೆಗೆ ಸಹಸಂಪಾದಕರಾದರು. ವಾಹಿನಿ ವಾರಪತ್ರಿಕೆ ಹೊರಬಂದ ತ.ರಾ.ಸು. ಹೆಂಡತಿಯನ್ನು ತವರುಮನೆಗೆ ಬಿಟ್ಟು ಚಿತ್ರದುರ್ಗಕ್ಕೆ ಹಿಂದಿರುಗಿದರು. ಆಗ ಶ್ರೀಧರ ಎಂಬುವವರು ಆಗತಾನೇ ಆರಂಭಿಸಿದ ನವೋದಯ ಎಂಬ ಪತ್ರಿಕೆಗೆ ಕೆಲಸ ಮಾಡಿದರಾದರೂ ಅದೂ ಸಹ ಊರ್ಜಿತವಾಗಲಿಲ್ಲ. ಆಗಿದ್ದ ಪರಿಸ್ಥಿತಿಯಲ್ಲಿ ಒಂದು ಮಗು ಹುಟ್ಟಿದ ಕೆಲವೇ ದಿನಗಳಲ್ಲಿ ತೀರಿಕೊಂಡಿತು. ಇದಾದ ಕೆಲದಿನಕ್ಕೆ ಆಗಷ್ಟೇ ಆರಂಭವಾಗಿದ್ದ ಪ್ರಜಾವಾಣಿ ಪತ್ರಿಕೆಯಲ್ಲಿ ಮುಖ್ಯ ಉಪಸಂಪಾದಕರಾಗಿ ಕರ್ತವ್ಯ ನಿರ್ವಹಿಸಿದರು. ಮೈಸೂರಿನಲ್ಲಿದ್ದಾಗ ಮೈಸೂರು ಪತ್ರಿಕೆಗೆ ಅಂಕಣಕಾರರಾಗಿದ್ದರು. ಕಾಲದೂತ ಎಂಬ ಪತ್ರಿಕೆಯನ್ನು ಕೆಲಕಾಲ ನಡೆಸಿದರು. ವಿಚಾರವಾಣಿ ಎಂಬ ಪತ್ರಿಕೆಗೆ ಗೌರವ ಸಂಪಾದಕರಾಗಿದ್ದರು. ಶ್ರೀ ಶಂಕರ ಕೃಪಾ ಎಂಬ ಧಾರ್ಮಿಕ ಪತ್ರಿಕೆಯ ಸಂಪಾದಕ ಮಂಡಳಿಯಲ್ಲಿಯೂ ಸಹ ಕೆಲ ಕಾಲ ಇದ್ದರು.
 
 ಬರಹಗಾರರಾಗಿ ತ.ರಾ.ಸು.
        ಪಾರಿಜಾತ ಎಂಬ ಕಾದಂಬರಿ ಬರೆದು ಮೈಸೂರು ಹೆಸರಾಂತ ಪ್ರಕಾಶಕ ಶ್ರೀ ಡಿ.ವಿ.ಕೆ.ಮೂರ್ತಿ ರವರಿಗೆ ಪ್ರಕಟಿಸಲು ಕೊಟ್ಟರು. ಆಗಲೇ ತ.ರಾ.ಸು.ರವರು ಮೈಸೂರಿನಲ್ಲಿ ಇದ್ದು, ಬರೆಯಲು ನಿಶ್ಚಯಿಸಿದ್ದರು. ಇನ್ನೊಬ್ಬ ಗೆಳೆಯ ರಾ.ವೆಂ.ಶ್ರೀನಿವಾಸಮೂರ್ತಿ ಎಂಬುವವರು ತ.ರಾ.ಸು. ರವರ ಕಾದಂಬರಿಗಳ ಪ್ರಕಟಣೆಗೆ ವ್ಯವಸ್ಥೆ ಮಾಡಿದ್ದರಲ್ಲದೇ ತಾವೇ ರಾಯರ ಪುಸ್ತಕಗಳನ್ನು ಪ್ರಕಟಿಸಿದರು. ತ.ರಾ.ಸುಬ್ಬರಾಯರು ಹಂಸಗೀತೆಯನ್ನು ಬರೆದಾಗ ಈ ಕೃತಿಯು ಎಷ್ಟೊಂದು ಜನಪ್ರಿಯವಾಗಿತ್ತೆಂದರೇ, ಆಗಿನ ಮೈಸೂರು ಮಹಾರಾಜರಾಗಿದ್ದ ಜಯಚಾಮರಾಜೇಂದ್ರ ಒಡೆಯರು ಓದಿ ಮೆಚ್ಚಿಕೊಂಡು ತ.ರಾ.ಸು. ರವರನ್ನು ನೋಡಬಯಸಿದರಂತೆ. ಪದವಿ ಪರೀಕ್ಷೆಗೆ ಈ ಕೃತಿ ಪಠ್ಯಪುಸ್ತಕವಾಯಿತು. ಇದೇ ಕಾದಂಬರಿ ಹಿಂದಿ ಚಿತ್ರರಂಗದಲ್ಲಿ ಬಸಂತ್ ಬಹಾರ್ ಆಗಿ 1953ರಲ್ಲಿ ತೆರೆಕಂಡಿತ್ತು. ಮುಂದೆ 1972ರಲ್ಲಿ ಹಂಸಗೀತೆಯಾಗಿ ಕನ್ನಡದಲ್ಲಿ ತೆರೆಕಂಡಿತು. ಈ ಚಿತ್ರ ರಾಷ್ಟ್ರಪ್ರಶಸ್ತಿ ಗಳಿಸಿದ್ದಲ್ಲದೇ ವಿದೇಶಗಳಲ್ಲಿಯೂ ಪ್ರದರ್ಶಿತಗೊಂಡಿತು. ತ.ರಾ.ಸು. ಸಾಮಾಜಿಕ ಕಾದಂಬರಿಗಳನ್ನಷ್ಟೇ ಅಲ್ಲದೇ ಐತಿಹಾಸಿಕ ಹಾಗೂ ಪೌರಾಣಿಕ ಕಾದಂಬರಿಗಳನ್ನು ಬರೆದರು. ರಾಷ್ಟ್ರಕೂಟರ ಅರಸುನೃಪತುಂಗನ ಕುರಿತು ಬರೆದ ಮೊದಲ ಐತಿಹಾಸಿಕ ಕೃತಿ. ತ.ರಾ.ಸು. ಕನ್ನಡದ ದಿಗ್ಗಜರಲ್ಲೊಬ್ಬರಾದ ಡಿ.ಎಲ್.ನರಸಿಂಹಾಚಾರ್ ರವರ ಪ್ರೇರಣೆಯಂತೆ ಶ್ರವಣಬೆಳಗೊಳದ ಗೊಮ್ಮಟೇಶ್ವರ ಶಿಲ್ಪದ ಸೃಷ್ಠಿಗೆ ಕಾರಣಕರ್ತನಾದ ಗಂಗರಸನ ಮಂತ್ರಿ ಚಾವುಂಡರಾಯನ ಕುರಿತು ಶಿಲ್ಪಶ್ರೀ ಎಂಬ ಐತಿಹಾಸಿಕ ಕಾದಂಬರಿ ಬರೆದರು. ನಡುನಡುವೆ ಬರೆದ ಸಾಮಾಜಿಕ ಕಾದಂಬರಿಗಳು ಸಾಕಷ್ಟು ಹೆಸರು ಮಾಡಿದರು. ಚಂದ್ರವಳ್ಳಿಯ ತೋಟ ಪಠ್ಯಪುಸ್ತಕವಾಗಿತ್ತು. ಸತ್ಯಕಾಮ ಜಾಬಾಲಿಯ ಕಥೆ ಕುರಿತಾದ ನಾಲ್ಕುXನಾಲ್ಕು=ಒಂದು ಪೌರಾಣಿಕ ಕಾದಂಬರಿಯನ್ಉನ ಕೇವಲ ಹನ್ನೊಂದು ದಿನಗಳಲ್ಲಿ ಬರೆದಿದ್ದರು.
 ಚಿತ್ರದುರ್ಗ ತ.ರಾ.ಸು. ರವರಿಗೆ ಪ್ರಿಯವಾಗಿದ್ದ ಸ್ಥಳ. ಇಲ್ಲಿನ ಕೋಟೆಯ ಪ್ರತಿಯೊಂದು ಕಲ್ಲು ಇವರಿಗೆ ಚಿರಪರಿಚಿತ. ಚಿತ್ರದುರ್ಗದ ಮೇಲೆ ಇವರಿಗೆ ಇದ್ದ ಅದಮ್ಯ ಪ್ರೀತಿಗೆ ಸಾಕ್ಷಿಯಾಗಿರುವುದೇ ದುರ್ಗಾಸ್ತಮಾನ; ತ.ರಾ.ಸು. ರವರ ಕೊನೆಯ ಕೃತಿ. ಅದ್ವೈತ ಮತ ಸ್ಥಾಪನಾಚಾರ್ಯ ಶಂಕರಾಚಾರ್ಯರ ಕುರಿತು ಆನಂದಂ ಬ್ರಹ್ಮೇತಿ ವ್ಯಜನಾತ್ ಎಂಬ ಕಾದಂಬರಿ ಬರೆಯಲು ಸಾಕಷ್ಟು ಟಿಪ್ಪಣಿಗಳನ್ನು ಮಾಡಿಕೊಂಡಿದ್ದ ತ.ರಾ.ಸು. ರವರಿಗೆ ಕಡೆಯವರೆಗೂ ಅದನ್ನು ಬರೆಯಲು ಸಾಧ್ಯವಾಗಲಿಲ್ಲ. ಇದರಿಂದ ಕನ್ನಡಿಗರಿಗೆ ಒಂದು ಅಮೂಲ್ಯ ಕೃತಿ ಸಿಗುವುದು ತಪ್ಪಿಹೋಯಿತು. ತ.ರಾ.ಸು. ರವರು ಬರೆದ ಶ್ರೀ ಚಕ್ರೇಶ್ವರಿ ಕಾದಂಬರಿ ಅಪೂರ್ಣವಾಗಿಯೇ ಉಳಿದಿತ್ತು. ಆದರೆ ಅದರ ಕಥೆ ಕೇಳಿದ್ದ ಅವರ ಶಿಷ್ಯ ನಾ.ಪ್ರಭಾಕರ್ ಅದನ್ನು ಪೂರೈಸಿದ್ದರು. 1927ರ ನಂತರದ ವರ್ಷಗಳಲ್ಲಿ ಕಾಗದ ಲೇಖನಗಳನ್ನು ಡಿಕ್ಟೇಷನ್ ಕೊಡುತ್ತ ಪ್ರಭಾಕರರಿಂದಲೇ ತ.ರಾ.ಸು. ಬರೆಸುತ್ತಿದ್ದರು. ತ.ರಾ.ಸು. ಬರೆದ ಆತ್ಮಕಥೆ ಜಿಲ್ಲಾಮಟ್ಟದ ಸೌರಭ ಎಂಬ ಪತ್ರಿಕೆಯಲ್ಲಿ ಪ್ರಕಟಗೊಂಡಿತ್ತಾದರೂ, ಹಿಂದಿರುಗಿ ನೋಡಿದಾಗ ಎಂಬ ಅಪೂರ್ಣ ಆತ್ಮಕಥೆಯನ್ನು ತರಂಗದಲ್ಲಿ ಪ್ರಕಟವಾಯಿತು. ಹಿಂದಿರುಗಿ ನೋಡಿದಾಗ ಅಪೂರ್ಣ ಆತ್ಮಕಥೆಯನ್ನು ತ.ರಾ.ಸು. ರವರ ಪತ್ನಿ ಅಂಬುಜಾ ರವರು ಪೂರ್ಣಗೊಳಿಸಿ 1990ರಲ್ಲಿ ಹೊರತಂದರು.
 
 ಚಿತ್ರರಂಗದಲ್ಲಿ ತ.ರಾ.ಸು.
ಕನ್ನಡದ ಕಾದಂಬರಿಗಳನ್ನಾಧರಿಸಿ ಕನ್ನಡ ಚಿತ್ರಗಳನ್ನು ನಿರ್ಮಿಸುವ ಒಂದು ಪರಂಪರೆ 1962ರಲ್ಲಿ ಪ್ರಾರಂಭವಾಯಿತು. ಕೃಷ್ಣಮೂರ್ತಿ ಪುರಾಣಿಕರ ಧರ್ಮದೇವತೆ ಕಾದಂಬರಿ ಆಧರಿಸಿದ ಕರುಣೆಯೇ ಕುಟುಂಬ ಕಣ್ಣು ಚಿತ್ರವು ಕನ್ನಡದ ಪ್ರಥಮ ಕಾದಂಬರಿ ಆಧಾರಿತ ಚಿತ್ರ. ಹಾಗೇ ನೋಡಿದರೆ ತ.ರಾ.ಸು. ರವರ ವಿಶಿಷ್ಟ ಕೃತಿ ಹಂಸಗೀತೆಯನ್ನಾಧರಿಸಿ ಹಿಂದಿಯಲ್ಲಿ ಬಸಂತ್ ಬಹಾರ್ ಎಂಬ ಸಿನಿಮಾ ಬಹುಹಿಂದೆಯೇ ತೆರೆಕಂಡಿತ್ತು. 1959ರಲ್ಲಿಯೇ ತ.ರಾ.ಸು. ತಮ್ಮ ಕನ್ನಡ ಚಳುವಳಿ, ರಾಜಕೀಯ ಚಟುವಟಿಕೆಗಳ ಜತೆಗೆ ಸಿನಿಮಾ ಚಟುವಟಿಕೆಯಲ್ಲೂ ತೊಡಗಿದ್ದರು. ಚಂದ್ರವಳ್ಳಿಯ ತೋಟ, ಚಕ್ರತೀರ್ಥ, ಮಾರ್ಗದರ್ಶಿ (ಮಾರ್ಗದರ್ಶಿ, ಭಾಗ್ಯಶಿಲ್ಪ ಮತ್ತು ಬೆಳಕಿನ ಬೀದಿ ಕಾದಂಬರಿಗಳ ಆಧಾರಿತ), ಪುರ್ನಜನ್ಮ (ಸಾಕುಮಗಳು ಆಧಾರಿತ), ನಾಗರಹಾವು (ನಾಗರಹಾವು, ಎರಡು ಹೆಣ್ಣು ಒಂದು ಗಂಡು, ಹಾಗೂ ಸರ್ಪಮತ್ಸರ ಕಾದಂಬರಿಗಳ ಆಧಾರಿತ), ಚಂದನದ ಗೊಂಬೆ, ಗಾಳಿಮಾತು, ಬೆಂಕಿಯ ಬಲೆ, ಬಿಡುಗಡೆಯ ಬೇಡಿ, ಮಸಣದ ಹೂ, ಆಕಸ್ಮಿಕ (ಆಕಸ್ಮಿಕ-ಅಪರಾಧ-ಪರಿಣಾಮ ಆಧಾರಿತ), ಇವು ತ.ರಾ.ಸು. ರವರು ಬರೆದ ಕಾದಂಬರಿಗಳ ಆಧಾರಿತ ಚಲನಚಿತ್ರಗಳು. ಎಸ್.ಆರ್.ಪುಟ್ಟಣ್ಣ ಕಣಗಾಲ್ ರವರು ನಿರ್ದೇಶಿಸಿದ ನಾಗರಹಾವು ಚಿತ್ರ ತೆಲುಗಿನಲ್ಲಿ ಕೋಡೆನಾಗು ಎಂದೂ, ತಮಿಳಿನಲ್ಲಿ ರಾಜನಾಗಂ ಎಂದು ಮತ್ತು ಹಿಂದಿಯಲ್ಲಿ ಜಹರೀಲಾ ಇನ್ಸಾನ್ ಎಂದು ತೆರೆಕಂಡಿತು. ಅದೇ ಪುಟ್ಟಣ್ಣನವರ ಕೊನೆಯ ಚಿತ್ರ ಮಸಣದ ಹೂ ಸಹ ತ.ರಾ.ಸು. ರವರ ಕಾದಂಬರಿ ಆಧಾರಿತ ಚಿತ್ರ.

Krupe: http://www.chitharadurga.com

Thursday, April 7, 2011

ಟಿ.ಎಸ್.ವೆಂಕಣ್ಣಯ್ಯ

ಟಿ.ಎಸ್.ವೆಂಕಣ್ಣಯ್ಯ

ವೆಂಕಣ್ಣಯ್ಯನವರು ಬಹುಬಾಷಾವಿದರು. ಅವರು ಕನ್ನಡ, ಇಂಗ್ಲಿಷ್ ಸಾಹಿತ್ಯಗಳನ್ನು ಆಳವಾಗಿ ಅಭ್ಯಾಸ ಮಾಡಿದ್ದರು. ತೆಲುಗು, ಬಂಗಾಳಿ ಭಾಷೆಗಳ ಪರಿಚಯವೂ ಅವರಿಗೆ ಚೆನ್ನಾಗಿತ್ತು. ತಮಿಳು, ಸಂಸ್ಕೃತಗಳನ್ನೂ ಕಲಿತಿದ್ದರು. ಬಂಗಾಳಿ ಗ್ರಂಥವನ್ನು ಓದಿ, ಶ್ರೀ ರಾಮಕೃಷ್ಣ ಪರಮಹಂಸ ಎಂಬ ಜೀವನಚರಿತ್ರೆಯನ್ನು ಬರೆದರು. ಶ್ರೀರಾಮಕೃಷ್ಣ ಲೀಲಾ ಪ್ರಸಂಗದ ಒಂದು ಭಾಗವನ್ನು ಬಂಗಾಳಿಯಿಂದ ಕನ್ನಡಕ್ಕೆ ಭಾಷಾಂತರ ಮಾಡಿದ್ದರು. ರವೀಂದ್ರನಾಥರು ಬರೆದ ಪ್ರಬಂಧಗಳಲ್ಲಿ ಕೆಲವನ್ನು ಅನುವಾದಿಸಿ ಪ್ರಾಚೀನ ಸಾಹಿತ್ಯ ಎಂಬ ಹೆಸರಲ್ಲಿ ಪ್ರಕಟಿಸಿದರು.
         ಸುಬ್ಬಣ್ಣ-ಲಕ್ಷ್ಮಿದೇವಮ್ಮ ರವರ ಹಿರಿಯ ಮಗನಾಗಿ ವೆಂಕಣ್ಣಯ್ಯನವರು ಹುಟ್ಟಿದ್ದು 1885ರ ಅಕ್ಟೋಬರ್ 1 ರಂದು, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕಿನಲ್ಲಿ; ಸಾಹಿತ್ಯ, ಕಲೆಗಳಲ್ಲಿ ತುಂಬ ಆಸಕ್ತಿಯಿದ್ದ ವಂಶದಲ್ಲಿ. ವೆಂಕಣ್ಣಯ್ಯನವರ ವಿದ್ಯಾಭ್ಯಾಸ ಚಳ್ಳಕೆರೆಯಲ್ಲಿ ಆರಂಭವಾಯಿತು. ಅನಂತರ ಚಿತ್ರದುರ್ಗದ ಹೈಸ್ಕೂಲಿನಲ್ಲಿ ಮೆಟ್ರಿಕ್ಯುಲೇಷನ್ ವರೆಗೆ ಓದಿದರು. ಬಳ್ಳಾರಿಯಲ್ಲಿ ಎಫ್.ಎ. ಆದ ಮೇಲೆ ಮೈಸೂರಿಗೆ ಹೋಗಿ 1909ರಲ್ಲ ಬಿ.ಎ. ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದರು. ಆಮೇಲೆ ಎಲ್.ಎಲ್.ಬಿ. ಓದಲು ಮುಂಬಯಿ ಸೇರಿದರು. ಆದರೆ ನ್ಯಾಯಶಾಸ್ತ್ರ ವ್ಯಾಸಂಗವನ್ನು ಪೂರ್ಣ ಮಾಡಲಿಲ್ಲ. ಮುಂಬಯಿಯಲ್ಲಿದ್ದಾಗ ಕೆಲಕಾಲ ಪೋಸ್ಟಾಫೀಸ್ ನಲ್ಲಿ ಗುಮಾಸ್ತೆಯಾಗಿ ಕೆಲಸ ಮಾಡಿದರು. ಪುನಃ ಮೈಸೂರಿಗೆ ಬಂದು ಎಸ್.ತಿಮ್ಮಪ್ಪಯ್ಯಶಾಸ್ತ್ರಿಗಳ ಹತ್ತಿರ ಕನ್ನಡ ಸಾಹಿತ್ಯವನ್ನೂ ರಾ.ಅನಂತಕೃಷ್ಣಶರ್ಮರ ಬಳಿ ತೆಲುಗು ಸಾಹಿತ್ಯವನ್ನೂ ಅಭ್ಯಾಸ ಮಾಡಿ, ಮದರಾಸು ವಿಶ್ವವಿದ್ಯಾನಿಲಯದ ಕನ್ನಡ ಎಂ.ಎ. ಪರೀಕ್ಷೆಗೆ ಕುಳಿತು 1914ರಲ್ಲಿ ತೇರ್ಗಡೆ ಹೊಂದಿದರು. ಹಿಗೆ ವೆಂಕಣ್ಣಯ್ಯನವರ ವಿದ್ಯಾಭ್ಯಾಸ ನಡೆದದ್ದು ಅವರ ಚಿಕ್ಕಪ್ಪ ಟಿ.ಶ್ರೀನಿವಾಸರಾಯ ನೆರವಿನಿಂದ.
         ವೆಂಕಣ್ಣಯ್ಯನವರ ಉಪಾಧ್ಯಾಯರಾಗಿ ಕೆಲಸವನ್ನಾರಂಭಿಸಿದ್ದು ಧಾರವಾಡದ ಮಿಷನ್ ಸ್ಕೂಲಿನಲ್ಲಿ. ಅನಂತರ ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿಗೆ ಬಂದರು. ಅವರಿಗೆ ಸರ್ಕಾರಿ ನೌಕರಿ ದೊರೆತದ್ದು 1917ರಲ್ಲಿ, ದೊಡ್ಡಬಳ್ಳಾಪುರದ ಕನ್ನಡ ಪ್ರೌಢಶಾಲೆಯ ಮುಖ್ಯೋಪಧ್ಯಾಯರಾಗಿ. ಅಲ್ಲಿಂದ ಮುಂದೆ ಬೆಂಗಳೂರಿನ ಕೊಲಿಜಿಯೇಟ್ ಹೈಸ್ಕೂಲು, ಸೆಂಟ್ರಲ್ ಕಾಲೇಜುಗಳಲ್ಲಿ ಅಧ್ಯಾಪಕರಾಗಿದ್ದು, ಕೊನೆಗೆ 1927ರಲ್ಲಿ ಮೈಸೂರು ಮಹಾರಾಜಾ ಕಾಲೇಜಿನಲ್ಲಿ ಕನ್ನಡದ ಪ್ರಥಮ ಪ್ರಾಧ್ಯಾಪಕರಾಗಿದ್ದರು. ಪಾಠ ಹೇಳುವ ಕಲೆ ವೆಂಕಣ್ಣಯ್ಯನವರಿಗೆ ಕರಗತವಾಗಿತ್ತು. ವಿದ್ಯಾರ್ಥಿಗಳಿಗೆ ಚೆನ್ನಾಗಿ ಪಾಠ ಹೇಳುತ್ತಿದ್ದುದು ಮಾತ್ರವಲ್ಲದೇ ಅವರನ್ನು ತಮ್ಮ ಮಕ್ಕಳಂತೆ ಕಾಣುತ್ತ ಶ್ರೇಯೊಭಿವೃದ್ಧಿಗೆ ಸಹಾಯಕವಾದ ಉತ್ತೇಜನ ಸಲಹೆಗಳನ್ನು ಕೊಡುತ್ತಿದ್ದರು. ಇದಕ್ಕೆ ಅತ್ಯುತ್ತಮ ನಿದರ್ಶನ ವೆಂಕಣ್ಣಯ್ಯನವರಿಗೂ ಕವಿ ಕುವೆಂಪು ಅವರಿಗೂ ಇದ್ದ ಅಪೂರ್ವ ಗುರು-ಶಿಷ್ಯರ ಸಂಬಂಧ.
         ವೆಂಕಣ್ಣಯ್ಯನವರು ಯಾವ ಕೆಲಸವನ್ನು ದುಡುಕಿ ಮಾಡುತ್ತಿರಲಿಲ್ಲ. ಪೂರ್ವಾಪರಗಳನ್ನು ಯೋಚಿಸಿಯೇ ಮುಂದುವರಿಯುತ್ತಿದ್ದರು. ಎಂಥಾ ಸಂಧರ್ಭದಲ್ಲೂ ಅವರು ತಮ್ಮ ಸಹನೆಯನ್ನು ಕಳೆದುಕೊಳ್ಳುತ್ತಿರಲಿಲ್ಲ. ಬೇರೆಯವರೊಡನೆ ಅವರ ಸಂಬಂಧ ಹಿತ ಮಿತ; ಆತ್ಮೀಯತೆಯಿಂದ ಕೂಡಿದ್ದು. ಅವರು ಸಧೃಡ ದೇಹಪ್ರಕೃತಿಯಲ್ಲ; ಆದರೂ ಅವರು ಯಾವ ಕೆಲಸದಲ್ಲಿಯೂ ಆಲಸ್ಯ ತೋರುತ್ತಿರಲಿಲ್ಲ. ದೇಹಶ್ರಮವನ್ನು ಲೆಕ್ಕಿಸದೇ ತಮ್ಮ ಕರ್ತವ್ಯವನ್ನು ತಪ್ಪದೆ ನಡೆಸುತ್ತಿದ್ದರು. ಇದು ಅವರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟು ಮಾಡಿತು. ಸ್ವಲ್ಪ ಕಾಲದ ಅನಾರೋಗ್ಯದ ಅನಂತರ ಅವರು 1939ನೆಯ ಫೆಬ್ರುವರಿ 21ರಂದು ಕೊನೆಯ ಉಸಿರೆಳೆದರು. 
Krupe : http://www.chitharadurga.com

Friday, April 1, 2011

ಕುವೆಂಪು


ಸಾವಿರದ ಒಂಬೈನೂರ ನಾಲ್ಕು, ಡಿಸೆಂಬರ್, ಇಪ್ಪತ್ತೊ೦ಭತ್ತರಂದು ಕುಪ್ಪಳಿ ವೆಂಕಟಪ್ಪಗೌಡ (ವೆಂಕಟಯ್ಯಗೌಡ) ಪುಟ್ಟಪ್ಪ (ಕೆ. ವಿ. ಪುಟ್ಟಪ್ಪ - ಕುವೆಂಪು) ಜನಿಸಿದರು. ಅಂದರೆ, ಇಂದಿಗೆ (೨೯-೧೨-೨೦೦೦) ತೊಂಬತ್ತಾರು ವರ್ಷಗಳ ಹಿಂದೆ ಕ್ರೋಧಿನಾಮ ಸಂವತ್ಸರದ ಮಾರ್ಗಶೀರ್ಷ - ಬಹುಳ ಸಪ್ತಮೀ ಗುರುವಾರದ ಉತ್ತರಾ ನಕ್ಷತ್ರದಲ್ಲಿ. ಇದೇ ದಿನ ಶ್ರೀ ಮಹಾಮಾತೆ ಶಾರದಾದೇವಿಯವರ ಜನ್ಮತಿಥಿಯೂ ಆಗಿರುವುದು ಪುಟ್ಟಪ್ಪನವರಿಗೆ ಆನಂದದ ಮತ್ತು ಹೆಮ್ಮೆಯ ವಿಷಯ. ಅವರು ಭೂಸ್ಪರ್ಶ ಮಾಡಿದ್ದು ತಮ್ಮ ತಾಯಿಯ ತವರಾದ ಹಿರಿಕೊಡಿಗೆ ಮನೆಯಲ್ಲಿ. ಹಿರಿಕೊಡಿಗೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಒಂದು ಕುಗ್ರಾಮ. ಮಲೆನಾಡಿನ ಸಹ್ಯಾದ್ರಿಯ ಮಡಿಲಲ್ಲಿರುವ ಎಲ್ಲ ಹಳ್ಳಿಗಳಂತೆಯೆ ಹಿರಿಕೊಡಿಗೆಯೂ ಒಂದೇ ಮನೆಯ ಹಳ್ಳಿ. ಅನಂತರ ``ತವರು ಮನೆ ಹಿರಿಕೊಡಿಗೆಯಿಂದ ಗಂಡನ ಮನೆ ಕುಪ್ಪಳಿಗೆ ಚೊಚ್ಚಲು ತಾಯಿಯಾಗಿ ಸೀತಮ್ಮನವರು ತೊಟ್ಟಿಲ ಕೂಸನ್ನು ಕರೆತಂದು ಮನೆವುಗಿಸಿದಂದಿನಿಂದ '' ತಂದೆಯ ಮನೆ ಕುಪ್ಪಳಿ ಪುಟ್ಟಪ್ಪನವರ ``ಮನೆ''ಯಾಯಿತು.


ತೀರ್ಥಹಳ್ಳಿಯ ಕಳೆದು, ತಾಯಿ ತುಂಗೆಯ ದಾಟಿ ,
ಒಂಬತ್ತು ಮೈಲಿಗಳ ದೂರದಲಿ, ನಮ್ಮೂರು ಕುಪ್ಪಳಿ .
ಊರಲ್ಲ ನಮ್ಮ ಮನೆ. ನಮ್ಮ ಕಡೆ ಊರೆಂದರೊಂದೆ ಮನೆ.

ಕುಪ್ಪಳಿ ಮನೆ ತಮ್ಮ ತಾಯಿಯ ತವರು ಮನೆಗಿಂತ ನೆಮ್ಮದಿಯ ಬೀಡಾಗಿತ್ತು. ಕುಪ್ಪಳಿಯನ್ನು ದೊಡ್ಡಮನೆಯೆಂದೂ, ಕುಪ್ಪಳಿ ಮನೆಯವರನ್ನು ದೊಡ್ಡ ಮನೆತನದವರೆಂದೂ ಜನ ಗೌರವಿಸುತ್ತಿದ್ದರು. ಬತ್ತದ ಗದ್ದೆ, ಅಡಕೆ ತೋಟ, ಜಾನುವಾರು, ಆಳುಕಾಳು, ಪಟೇಲಿಕೆಯ ಅಧಿಕಾರ - ಹೀಗೆ ಎಲ್ಲ ವಿಧದಲ್ಲಿಯೂ ಕುಪ್ಪಳಿ ಮನೆ ಸಮೃದ್ಧವಾಗಿತ್ತು. ಕುಪ್ಪಳಿಯ ಮನೆಯ ಸುತ್ತಣ ಪರಿಸರವು ಅತ್ಯಂತ ಸಮೃದ್ಧ. ಈ ಪರಿಸರ ಕವಿಚೇತನಕ್ಕೆ, ಮಹಾಕವಿಯಾಗಲಿರುವ ಚೇತನಕ್ಕೆ, ಅದರಲ್ಲೂ ಅವರ ಬಾಲ್ಯದ ಬದುಕಿಗೆ ಉಸಿರನ್ನಿತ್ತು ಸಲಹಿದೆ.

ಕುಪ್ಪಳಿಯ ಮನೆಯ ಸುತ್ತಣ ಪರಿಸರವು ಅತ್ಯಂತ ಸಮೃದ್ಧ. ಈ ಪರಿಸರ ಕವಿಚೇತನಕ್ಕೆ, ಮಹಾಕವಿಯಾಗಲಿರುವ ಚೇತನಕ್ಕೆ, ಅದರಲ್ಲೂ ಅವರ ಬಾಲ್ಯದ ಬದುಕಿಗೆ ಉಸಿರನ್ನಿತ್ತು ಸಲಹಿದೆ.
ಕುಪ್ಪಳಿ ಪುಟ್ಟಕೋಟೆಯಂತಿರುವ ಹೆಮ್ಮನೆ. ದೊಡ್ಡ ಹೆಬ್ಬಾಗಿಲು, ದಪ್ಪವಾದ ಸುತ್ತುಗೋಡೆ, ನಾಜೋಕಿಗಿಂತ ಬಲದ ದೃಷ್ಟಿಯಲ್ಲಿ ಕಟ್ಟಿರುವ ಗೋಡೆಗಳು. ಏಕೆಂದರೆ ಕಾಡಿನಲ್ಲಿ, ಮಳೆಯಲ್ಲಿ, ಬಿರುಗಾಳಿಯಲ್ಲಿ, ಸಿಡಿಲು ಮಿಂಚುಗಳ ಆರ್ಭಟದಲ್ಲಿ ತಾಳಿ-ಬಾಳಬೇಕಾದರೆ ದಪ್ಪ ಗೋಡೆಗಳು ಅಗತ್ಯ.
ಕುಪ್ಪಳಿ ಮನೆ ಮಲೆನಾಡಿನ ವನಾಲಂಕೃತ ಗಿರಿಶ್ರೇಣಿಗಳ ತೊಡೆಯ ಮೇಲೆ ಕೂತಿದೆ. ಮನೆಯಿಂದ ಪೂರ್ವದಿಕ್ಕಿಗೆ ಹತ್ತುಮಾರು ಹೋಗುವುದರೊಳಗಾಗಿ ಬೆಟ್ಟವೇರಿ ಕಾಡಿನಲ್ಲಿ ತೂರಬೇಕು. ಕುಪ್ಪಳಿ ಮನೆಗೆ ಪೂರ್ವೋತ್ತರ ದಕ್ಷಿಣ ಭಾಗಗಳಲ್ಲಿ ಭೀಮಾಕಾರದ ಪರ್ವತ ಶ್ರೇಣಿಗಳು ದಿಗಂತವನ್ನು ನಡುಬಾನಿಗೆತ್ತಿ ನಿಂತಿವೆ. ಪಶ್ಚಿಮ ಭಾಗದಲ್ಲಿಯೂ ಬೆಟ್ಟಗಳಿವೆ; ಆದರೆ ಒಂದು ಮೈಲಿಯಷ್ಟು ದೂರ. ನಡುವೆಯೇನೋ ಬೇಕಾದಷ್ಟು ಕಾಡುಗಳಿವೆ. ಕುಪ್ಪಳಿ ಮನೆಗೂ ಪೂರ್ವಾದ್ರಿಗೂ ನಡುವೆ ಅಡಕೆ ತೋಟವಿದೆ. ಅದರ ಸೆರಗಿನಲ್ಲಿಯೆ ಕುಪ್ಪಳಿ ಮನೆಯ ಕೆರೆಯಿದೆ. ಕೆರೆ ಬೆಟ್ಟದ ಬುಡದಲ್ಲಿ ಅರಣ್ಯದ ಮಡಿಲಲ್ಲಿ ಮಲಗಿದೆ. ಹೆಮ್ಮರಗಳು, ಪೊದೆಗಳು, ಬಿದಿರು ಮೆಳೆಗಳು ಅದರ ನೀರಿನ ಮೇಲೆ ಚಾಚಿಕೊಂಡಿವೆ.

ಕುಪ್ಪಳಿ ಮನೆಯ ಉಪ್ಪರಿಗೆ ಪೂರ್ವದಿಕ್ಕಿಗೆ ತೆರೆದುಕೊಂಡಿದೆ. ಉಳಿದೆಲ್ಲ ದಿಕ್ಕಿಗೂ ಗೋಡೆ, ಕಿಟಕಿಗಳಿವೆ. ಅಲ್ಲಿ ಕುಳಿತು ನೋಡಿದರೆ ಎದುರಿಗೆ ಇಳಿಜಾರಾಗಿ ಮೇಲೆದ್ದಿರುವ ಅನಂತ ನಿಬಿಡಾರಣ್ಯ ಶ್ರೇಣಿಗಳು ಸುಂದರವಾಗಿ ರಂಜಿಸುವುವು. ಮನೆಯ ಮುಂದೆಯೆ, ಅಡಕೆ ತೋಟದಾಚೆಯ ಮೊದಲುಗೊಂಡು ನಡು ಆಕಾಶದವರೆಗೆಂಬಂತೆ ಗೋಡೆ ಹಾಕಿದಂತೆ ಕಡಿದಾಗಿ ವಿಜೃಂಭಿಸಿ ಮಹೋನ್ನತವಾಗಿ ಮೇಲೆದ್ದು, ನಿತ್ಯ ಶ್ಯಾಮಲ ಅರಣ್ಯಾಚ್ಛಾದಿತವಾಗಿರುವ ಮಲೆ ಮತ್ತು ಮನೆಯ ಹಿಂಬದಿಯಿಂದಲೆ ಪ್ರಾರಂಭವಾಗಿ ವಿರಳ ಮರಪೊದೆಗಳಿಂದ ಹಕ್ಕಲು ಹಕ್ಕಲಾಗಿ ಮೇಲೇರಿ ಏರಿ ಬಂಡೆ ಮಂಡೆಯಲ್ಲಿ ಕೊನೆಗೊಂಡಿರುವ ಹಿರಿಯ ಹಾಸುಗಳಲ್ಲಿನ ಕವಿಶೈಲ! - ಇವೆರಡೂ ಕವಿ ಹೃದಯದ ಅಕ್ಕಪಕ್ಕದಲ್ಲಿರುವ ಎರಡು ಶ್ವಾಸಕೋಶಗಳಂತೆ ಅವರ ಬಾಲ್ಯದ ರಸಜೀವನದ ಬದುಕಿಗೆ ಉಸಿರನ್ನಿತ್ತು ಪೊರೆದಿವೆ. ಮುಂದೆ ಮಹಾಕವಿಯಾಗಲಿರುವ ಒಂದು ಋಷಿ ಚೇತನದ ವಿಕಾಸನಕ್ಕೆ ವಿಧಿ ಅದಕ್ಕಿಂತಲೂ ಹೆಚ್ಚು ಅರ್ಹವೂ ಅನುಕೂಲವೂ ಆದ ಭಿತ್ತಿರಂಗವನ್ನು ಕೆತ್ತಲಾರದೆಂದೇ ತೋರುತ್ತದೆ. 
ಕುವೆಂಪು ಹಸ್ತಾಕ್ಷರ






ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...